ಮುಂದೆಯೂ ದತ್ತಗೇ ಟಿಕೆಟ್‌


Team Udayavani, Mar 1, 2019, 11:48 AM IST

bell-3.jpg

ಕಡೂರು: ಕಡೂರು ಕ್ಷೇತ್ರದ ಜನರಲ್ಲಿ ಅನೇಕ ಭಿನ್ನಾಭಿಪ್ರಾಯಗಳಿವೆ. ಏನೇ ಇರಲಿ ಕಡೂರು ವಿಷಯದಲ್ಲಿ ದತ್ತನಿಗೆ ಟಿಕೆಟ್‌ ನೀಡಲಾಗುವುದು ಎಂದು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಘೋಷಿಸಿದರು. ಪಟ್ಟಣದ ಬನಶಂಕರಿ ಕಲ್ಯಾಣ ಮಂಟಪದಲ್ಲಿ ಗುರುವಾರ ಆಯೋಜಿಸಲಾಗಿದ್ದ ಜೆಡಿಎಸ್‌ ಕಾರ್ಯಕರ್ತರ ಸಮಾವೇಶದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ದತ್ತ ಕಳೆದ 45 ವರ್ಷಗಳಿಂದ ಕಾರ್ಯಕರ್ತನಾಗಿ ಕಾರ್ಯನಿರ್ವಹಿಸಿ ಕಳೆದ 10 ವರ್ಷಗಳಿಂದ ಶಾಸಕನಾಗಿ ಇದೀಗ ಸೋತಿದ್ದಾರೆ. ಅದೇ ರೀತಿ ಎಸ್‌.ಆರ್‌. ಲಕ್ಷ್ಮಯ್ಯನವರ ಕುಟುಂಬವು ನಮ್ಮ ರಾಜಕೀಯ ಭವಿಷ್ಯದಲ್ಲಿ ಸಹಕಾರ ನೀಡುತ್ತಿದೆ. ಅದೇ ಹಾದಿಯಲ್ಲೇ ಅವರ ಮಕ್ಕಳಾದ
ಧರ್ಮೇಗೌಡ, ಭೋಜೇಗೌಡರು ಇದ್ದಾರೆ ಎಂದರು.
 
ಕಡೂರು ಕ್ಷೇತ್ರಕ್ಕೆ ವೈ.ಎಸ್‌.ವಿ ದತ್ತ ಮತ್ತು ಎಸ್‌. ಎಲ್‌.ಧರ್ಮೇಗೌಡರು ಎರಡು ಕಣ್ಣುಗಳಿದ್ದಂತೆ. ಧರ್ಮೇಗೌಡರು ಮುಂದಿನ 6 ವರ್ಷಗಳವರೆಗೆ ಶಾಸಕರಾಗಿರುತ್ತಾರೆ. ಅವರಿಂದ ಏನೇ ದೂರು ಬಂದರೂ ನಮ್ಮ ಮನೆಗೆ ಕರೆಸಿ ನಾನೇ ತೀರ್ಮಾನ ಮಾಡುತ್ತೇನೆ. ಬಹಿರಂಗವಾಗಿ ಹೇಳಿಕೆ ಬೇಡ ಪಕ್ಷದ ಸಂಘಟನೆಗೆ ದುಡಿಯಿರಿ, ಪಕ್ಷಕ್ಕೆ ಶಕ್ತಿ ತುಂಬಿ ಎಂದರು.

ಜೆಡಿಎಸ್‌ ಯುವ ಮುಖಂಡ ಪ್ರಜ್ವಲ್‌ ರೇವಣ್ಣ ಮಾತನಾಡಿ ಹಾಸನ ಜಿಲ್ಲೆಯಲ್ಲಿ ದೇವೇಗೌಡರಿಗೆ ಶಕ್ತಿ ಇದೆ. ಗೌಡರು ಸ್ಪರ್ಧಿಸಿದರೆ ನಾನೇ ಯುವಕರನ್ನು ಕಟ್ಟಿಕೊಂಡು ಹೋರಾಟ ಮಾಡಿ ಸುಮಾರು 5 ಲಕ್ಷ ಮತಗಳಿಂದ ಗೆಲ್ಲಿಸುತ್ತೇನೆ ಎಂದು ಹೇಳಿದರು.

ಹಾಸನ ಲೋಕಸಭಾ ಕ್ಷೇತ್ರಕ್ಕೆ ಆಕಾಂಕ್ಷಿಯಾಗಿದ್ದು, ಪಕ್ಷವು ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧನಾಗಿದ್ದೇನೆ. ಇದರಲ್ಲಿ ಯಾವುದೇ ಸಂಶಯವಿಲ್ಲ. ಕಡೂರು ಕ್ಷೇತ್ರವು ಹಾಸನ ಲೋಕಸಭಾ ಕ್ಷೇತ್ರಕ್ಕೆ ಒಳಪಡುವುದರಿಂದ ದತ್ತಣ್ಣ ಕಡೂರು ಕ್ಷೇತ್ರದ ಸಮಸ್ಯೆಗಳ ಬಗ್ಗೆ ಹೋರಾಟ ಮಾಡುತ್ತಿದ್ದಾರೆ
ನಾನು ಅವರೊಂದಿಗೆ ಸೇರಿಕೊಂಡು ನೀರಾವರಿ ಯೋಜನೆ, ರೈತರ ಸಮಸ್ಯೆಗಳಿಗೆ ಅವರ ಮಾರ್ಗದರ್ಶನದಲ್ಲಿ ಕಡೂರು ಜನತೆಯ ವಿಶ್ವಾಸ ಗೆಲ್ಲುತ್ತೇನೆ ಎಂದರು.

ಸಚಿವ ಎಚ್‌.ಡಿ. ರೇವಣ್ಣ ಮಾತನಾಡಿ, ದತ್ತ ರಾಜ್ಯದ ಜೆಡಿಎಸ್‌ ಶಕ್ತಿಯಾಗಿದ್ದಾರೆ. ಜೆಡಿಎಸ್‌ ಮೂಲಕ ಕಡೂರು, ಬೀರೂರು, ತರೀಕೆರೆ ಕ್ಷೇತ್ರಗಳಲ್ಲಿ ಅನೇಕ ಬಾರಿ ಕೆಎಂಕೆ, ದತ್ತ, ಲಕ್ಷ್ಮಯ್ಯ, ಧರ್ಮೇಗೌಡರನ್ನು ಗೆಲ್ಲಿಸಿದ್ದೀರಾ. ಕಡೂರು ಕ್ಷೇತ್ರವನ್ನು ಮರೆಯುವಂತಿಲ್ಲ. ಕಡೂರು ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡಲು ನಾವು ಇಂದು 87 ಕೋಟಿ ಕಾಮಗಾರಿಗಳ ಶಂಕುಸ್ಥಾಪನೆ ಮಾಡಿದ್ದೇವೆ ಎಂದರು. 

ಮಾಜಿ ಶಾಸಕ ಮತ್ತು ಜೆಡಿಎಸ್‌ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷ ವೈ.ಎಸ್‌.ವಿ ದತ್ತ ಮಾತನಾಡಿ, ಹೆಬ್ಬೆ ಯೋಜನೆಗೆ ಸರಕಾರ 100 ಕೋಟಿ ರೂ. ಮೀಸಲಿಟ್ಟಿದೆ. ಈ ಹಿಂದಿನ ಸರಕಾರ ಈ ಯೋಜನೆ ಅನುಷ್ಠಾನಕ್ಕೆ ನಕಾರಾತ್ಮಕವಾಗಿ ಉತ್ತರ ನೀಡಿದ್ದರೂ ಸಹ ಮಾನವೀಯತೆ ದೃಷ್ಠಿಯಿಂದ ಸರಕಾರ ಈ ನಿರ್ಧಾರ ತೆಗೆದುಕೊಂಡಿದ್ದು ನಾನು ಸಹ ಹೆಬ್ಬೆ ಯೋಜನೆ ಅನುಷ್ಠಾನಕ್ಕೆ ಕೋರುತ್ತೇನೆ ಎಂದರು.ಜಿಲ್ಲಾ ಜೆಡಿಎಸ್‌ ಅಧ್ಯಕ್ಷ ಅಜಿತ್‌ ರಂಜನ್‌ ಕುಮಾರ್‌, ಚನ್ನರಾಯಪಟ್ಟಣ ಶಾಸಕ ಬಾಲಕೃಷ್ಣ, ತಾಲೂಕು ಅಧ್ಯಕ್ಷ ಕೋಡಿಹಳ್ಳಿಮಹೇಶ್ವರಪ್ಪ, ಬಂಡಾರಿ ಶ್ರೀನಿವಾಸ್‌, ಜಿಗಣೆಹಳ್ಳಿ ನೀಲಕಂಠಪ್ಪ, ಸೀಗೆಹಡ್ಲು ಹರೀಶ್‌, ಶೂದ್ರ ಶ್ರೀನಿವಾಸ್‌ ಇತರರು ಪಾಲ್ಗೊಂಡಿದ್ದರು. 

ಚುನಾವಣೆ ಗೆಲುವಿಗಾಗಿ ಬಿಜೆಪಿಯವರು ಏನು ಬೇಕಾದ್ರೂ ಮಾಡ್ತಾರೆ  ಬಿಜೆಪಿಯವರು ಚುನಾವಣೆ ಗೆಲ್ಲಲು ಯಾವ ಮಟ್ಟಕ್ಕಾದರೂ ಇಳಿಯುತ್ತಾರೆ. ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ಮೋದಿ ಅವರ ಇಮೇಜ್‌ ಈಗ ಕಡಿಮೆಯಾಗಿರುವುದರಿಂದ ಲೋಕಸಭೆ ಚುನಾವಣೆ ಗೆಲ್ಲಲು ಏನೂ ಬೇಕಾದರೂ
ಮಾಡುತ್ತಾರೆ ಎಂದರು. 

ಕುಮಾರಸ್ವಾಮಿ ಅವರ ಸಾಲಮನ್ನಾ ಯೋಜನೆಯನ್ನು ಟೀಕಿಸಿದ್ದ ಮೋದಿ ಅವರು, ರೈತರ ಸಾಲ ಮನ್ನಾ ಮಾಡುವುದು ಪಾಪದ ಕೆಲಸ ಎಂದಿದ್ದರು. ಆದರೆ ಈಗ ರೈತರ ಖಾತೆಗೆ ಭಿಕ್ಷುಕರಿಗೆ ನೀಡುವಂತೆ ವಾರ್ಷಿಕವಾಗಿ 6 ಸಾವಿರ ರೂ. ಹಾಕುವುದಾಗಿ ಬಜೆಟ್‌ನಲ್ಲಿ ಘೋಷಿಸಿದ್ದಾರೆ. ಬಿಜೆಪಿಯವರಿಗೆ ರೈತರ ಮೇಲೆ ಕಾಳಜಿ ಇದ್ದಿದ್ದೇ ಆದಲ್ಲಿ ಈ ಯೋಜನೆಯನ್ನು ಮೊದಲೇ ಘೋಷಿಸಬೇಕಿತ್ತು. ಚುನಾವಣಾ ಸಂದರ್ಭದಲ್ಲಿ ಈ ಯೋಜನೆ ಘೋಷಿಸಿ ರಾಜಕೀಯ ಮಾಡುತ್ತಿದ್ದಾರೆ ಎಂದು ಟೀಕಿಸಿದರು. 

ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ನಾಲ್ಕು ವರ್ಷಗಳಲ್ಲಿ ರೈತರಿಗೆ, ಸಾಮಾನ್ಯ ಜನರಿಗೆ ಯಾವ ಜನಪರ ಕೊಡುಗೆಗಳನ್ನೂ ನೀಡಿಲ್ಲ. ರಾಜ್ಯದ ಪಾಲಿನ ಅನುದಾನವನ್ನೂ ಸಮರ್ಪಕವಾಗಿ ನೀಡಿಲ್ಲ. ನರೇಗಾದಡಿಯಲ್ಲಿ ಕೇಂದ್ರ ಸರ್ಕಾರ ಎರಡೂವರೆ ಸಾವಿರ ಕೋಟಿ ರೂ. ಅನುದಾನ ನೀಡಬೇಕಿದೆ. ಅತೀವೃಷ್ಟಿಗೆ ಪರಿಹಾರದ ರೂಪದಲ್ಲಿ 900 ಕೋಟಿ ರೂ. ಬರಬೇಕಿದೆ. ರಾಜ್ಯದಲ್ಲಿ 142 ತಾಲೂಕು ಬರಪೀಡಿತ ಎಂದು ಘೋಷಿಸಿದರೂ ಕೇಂದ್ರ ಸರ್ಕಾರ ಬಿಡಿಗಾಸನ್ನೂ ನೀಡಿಲ್ಲ. ಈ ಬಗ್ಗೆ ಬಿಜೆಪಿ ಮುಖಂಡರು ಮಾತೇ ಆಡುವುದಿಲ್ಲ.

ವಿಧಾನಪರಿಷತ್‌ ಉಪಸಭಾಪತಿ ಎಸ್‌. ಎಲ್‌.ಧರ್ಮೇಗೌಡ, ಜಿಲ್ಲಾ ಜೆಡಿಎಸ್‌ ಅಧ್ಯಕ್ಷ ರಂಜನ್‌ ಅಜಿತ್‌ ಕುಮಾರ್‌ ಉಪಸ್ಥಿತರಿದ್ದರು.  

ಟಾಪ್ ನ್ಯೂಸ್

MONEY (2)

Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!

1-vitla

Vitla; ನಿವೃತ್ತ ಶಿಕ್ಷಕ, ಅರ್ಥಧಾರಿ ಪಕಳಕುಂಜ ಶ್ಯಾಮ ಭಟ್ ವಿಧಿವಶ

1-donald

Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…

Yakshagana

Yakshagana: ಕಾಲಮಿತಿ, ಕಾಲಗತಿಯ ಕಾಲದ ಯಕ್ಷಗಾನ-ಚಿಂತನೆ

EC-Comm-sangreshi1

ಜಿ.ಪಂ.,ತಾ.ಪಂ. ಚುನಾವಣೆ ವಿಳಂಬಕ್ಕೆ ಸರಕಾರವೇ ನೇರ ಹೊಣೆ, ನಾವು ಚುನಾವಣೆಗೆ ಸಿದ್ಧ: ಆಯೋಗ

Cong-CM-Dinner-Meet

Dinner Politics: ಡಿಸಿಎಂ ಡಿಕೆಶಿ ದೂರು; ಕಾಂಗ್ರೆಸ್‌ ಡಿನ್ನರ್‌ಗೆ ಹೈ ಕಮಾಂಡ್‌ ತಡೆ

Naxal-Meeting

Naxal Surrender: ಕೊನೆಗೂ ಕರ್ನಾಟಕ ರಾಜ್ಯ ಸಂಪೂರ್ಣ ನಕ್ಸಲ್‌ ಮುಕ್ತವಾಯಿತೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Naxal-Meeting

Naxal Surrender: ಕೊನೆಗೂ ಕರ್ನಾಟಕ ರಾಜ್ಯ ಸಂಪೂರ್ಣ ನಕ್ಸಲ್‌ ಮುಕ್ತವಾಯಿತೇ?

Naxaliam-End

Naxal Surrender: ಮುಂಡಗಾರು ಲತಾ ಸೇರಿ 6 ನಕ್ಸಲರು ನಾಳೆ ಶರಣಾಗತಿ?

CKM-darga

Dispute: ಚಿಕ್ಕಮಗಳೂರಲ್ಲಿ ತಾರಕಕ್ಕೇರಿದ ದರ್ಗಾ ವಿವಾದ: ಬಿಗು ಪರಿಸ್ಥಿತಿ

Kottigehara: ಮೇಯಲು ಬಿಟ್ಟ ಹಸುವಿನ ಮೇಲೆ ಹುಲಿ ದಾಳಿ… ಅನಾಥವಾದ ಕರು

Kottigehara: ಮೇಯಲು ಬಿಟ್ಟ ಹಸುವಿನ ಮೇಲೆ ಹುಲಿ ದಾಳಿ… ಅನಾಥವಾದ ಕರು

Six Naxalites to be brought into the mainstream soon: Process is fast

Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

MONEY (2)

Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!

1-vitla

Vitla; ನಿವೃತ್ತ ಶಿಕ್ಷಕ, ಅರ್ಥಧಾರಿ ಪಕಳಕುಂಜ ಶ್ಯಾಮ ಭಟ್ ವಿಧಿವಶ

1-donald

Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…

Yakshagana

Yakshagana: ಕಾಲಮಿತಿ, ಕಾಲಗತಿಯ ಕಾಲದ ಯಕ್ಷಗಾನ-ಚಿಂತನೆ

EC-Comm-sangreshi1

ಜಿ.ಪಂ.,ತಾ.ಪಂ. ಚುನಾವಣೆ ವಿಳಂಬಕ್ಕೆ ಸರಕಾರವೇ ನೇರ ಹೊಣೆ, ನಾವು ಚುನಾವಣೆಗೆ ಸಿದ್ಧ: ಆಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.