ಕಾಫಿನಾಡಿನಲ್ಲಿ ಮುಂದುವರಿದ ಹುಲಿ ದಾಳಿ : ಜಾನುವಾರು ಬಲಿ, ಆತಂಕದಲ್ಲಿ ಗ್ರಾಮಸ್ಥರು
Team Udayavani, Aug 27, 2022, 11:07 AM IST
ಕೊಟ್ಟಿಗೆಹಾರ : ಕಾಫಿನಾಡಿನಲ್ಲಿ ಹುಲಿ ದಾಳಿ ಮತ್ತೆ ಮುಂದುವರಿದಿದ್ದು ಬಾನಳ್ಳಿ ಗ್ರಾಮದ ರೈತರೊಬ್ಬರ ಜಾನುವಾರು ಬಲಿಯಾಗಿದೆ.
ಕಳೆದ ಕೆಲವು ದಿನಗಳಿದ ಕೊಟ್ಟಿಗೆಹಾರ ಸುತ್ತಮುತ್ತ ಹುಲಿಗಳ ಹಾವಳಿ ಜಾಸ್ತಿಯಾಗಿದ್ದು ಜಾನುವಾರುಗಳು ಹುಲಿ ದಾಳಿಗೆ ತುತ್ತಾಗಿವೆ, ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಾನಳ್ಳಿ ಗ್ರಾಮದ ಸುಂದರೇಶ್ ಎಂಬುವವರಿಗೆ ಸೇರಿದ ಜಾನುವಾರು ಹುಲಿ ದಾಳಿಗೆ ಸಿಲುಕಿ ಸಾವನ್ನಪ್ಪಿದೆ.
ದಿನಕ್ಕೊಂದು ಪ್ರದೇಶದಲ್ಲಿ ಜಾನುವಾರುಗಳನ್ನು ಬಲಿ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಗ್ರಾಮದ ಜನರಲ್ಲಿ ಭೀತಿ ಹೆಚ್ಚಾಗಿದೆ, ಅಲ್ಲದೆ ಅರಣ್ಯ ಇಲಾಖೆ ಅಧಿಕಾರಿಗಳು ಹುಲಿಯನ್ನು ಸೆರೆ ಹಿಡಿಯುವಂತೆ ಒತ್ತಾಯಿಸಿದ್ದಾರೆ.
ಹುಲಿ ದಾಳಿಯಿಂದ ಜನಸಾಮಾನ್ಯರು ಓಡಾಡಲು ಭಯಪಡುವ ವಾತಾವರಣ ನಿರ್ಮಾಣವಾಗಿದೆ, ಗ್ರಾಮದ ಜನರು ಅರಣ್ಯ ಇಲಾಖೆಯ ನಿರ್ಲಕ್ಷಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ : ಡಾಲಿ ಧನಂಜಯ್ ನಟನೆಯ ಮಾನ್ಸೂನ್ ರಾಗ ಸೆನ್ಸಾರ್ ಪಾಸ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
ಕಸ್ತೂರಿಂಗನ್ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.