ಹುಲಿ ಉಗುರು ಮಾರಾಟ ಜಾಲ ಪತ್ತೆ
Team Udayavani, Oct 29, 2021, 8:16 PM IST
ಚಿಕ್ಕಮಗಳೂರು: ನಗರದಲ್ಲಿ ಸಕ್ರಿಯ ವಾಗಿದ್ದ ಹುಲಿ ಉಗುರು ಮಾರಾಟ ಜಾಲವನ್ನು ಪತ್ತೆ ಹಚ್ಚುವಲ್ಲಿ ಅರಣ್ಯ ಇಲಾಖೆ ಸಂಚಾರಿ ಅರಣ್ಯ ವಲಯದ ಅಧಿಕಾರಿಗಳ ತಂಡ ಯಶಸ್ವಿ ಯಾಗಿದೆ.
ಅರಣ್ಯ ಸಂಚಾರಿ ದಳ ವಿಭಾಗದ ಉಪ ಅರಣ್ಯ ಸಂರಕ್ಷಣಾ ಧಿಕಾರಿ ಸತೀಶ್ ಮಾರ್ಗದರ್ಶನದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾ ಧಿಕಾರಿ ಜಯೇಶ್ ಮತ್ತು ಅರಣ್ಯಾ ಧಿಕಾರಿ ವೆಂಕಟೇಶ್ ಅವರ ತಂಡದವರು ಹುಲಿ ಉಗುರು ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿತ ಕಲ್ಲುದೊಡ್ಡಿ ಇಂದಿರಾನಗರದ ಶೇಖರ್ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ.
ಬಂಧಿತನಿಂದ 2 ಹುಲಿ ಉಗುರು, ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ. ಹುಲಿ ಉಗುರು ಮಾರಾಟಕ್ಕೆ ನೀಡಿದ್ದ ಹುಕ್ಕುಂದ ಗ್ರಾಮದ ಸುಂದರ್ ತಲೆಮರೆಸಿಕೊಂಡಿದ್ದು, ಆತನ ಬಂಧನಕ್ಕೆ ಬಲೆ ಬೀಸಿದ್ದಾರೆ. ಹುಕ್ಕುಂದ ಗ್ರಾಮದ ಕಾμತೋಟದಲ್ಲಿ ಉರುಳು ಹಾಕಿ ಹುಲಿ ಕೊಂದು 2 ಉಗುರುಗಳನ್ನು ಸುಂದರ್ ತನ್ನ ಬಳಿ ಇರಿಸಿಕೊಂಡಿದ್ದು, ಈ ಉಗುರುಗಳನ್ನು ಮಾರಾಟ ಮಾಡುವಂತೆ ಶೇಖರ್ಗೆ ನೀಡಿದ್ದ ಎಂದು ತನಿಖೆ ವೇಳೆ ತಿಳಿದು ಬಂದಿದೆ.
ಆತನ ಬಂಧನದ ಬಳಿಕ ಹುಲಿ ಹತ್ಯೆ ವಿಚಾರ ಬೆಳಕಿಗೆ ಬರಲಿದೆ. ಕಾರ್ಯಾಚರಣೆಯಲ್ಲಿ ವಲಯ ಅರಣ್ಯಾ ಧಿಕಾರಿ ವೆಂಕಟೇಶ್, ಉಪವಲಯ ಅರಣ್ಯಾ ಧಿಕಾರಿ ನಂದೀಶ್, ದಿನೇಶ್, ಅಶ್ವಥ್, ನಾರಾಯಣ, ವೆಂಕಟೇಶ್, ಅರಣ್ಯ ರಕ್ಷಕರಾದ ಹೇಮಂತ್, ಕುಮಾರಸ್ವಾಮಿ, ಜಯಪ್ರಕಾಶ್, ಈಶ್ವರ್, ವಾಹನ ಚಾಲಕ ಸುನೀಲ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್
ನೇತ್ರಾವತಿ ನದಿಯಲ್ಲಿ ಗೋಮಾಂಸ ಪತ್ತೆ ಮತಾಂಧತೆ ತೋರಿಸುತ್ತದೆ: ಸಿ.ಟಿ. ರವಿ ಕಿಡಿ
Chikkamagaluru: ನಕ್ಸಲರ ಶರಣಾಗತಿಗೆ ಪೊಲೀಸ್ ವರಿಷ್ಠಾಧಿಕಾರಿ ಡಾ. ಅಮಟೆ ಮನವಿ
Chikkamagaluru: ನಕ್ಸಲ್ ಆರೋಪಿತರ ಪ್ರಕರಣ ಖುಲಾಸೆ
Kottigehara:ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ನೆಲಸಮ,ಕೆಲಸಕ್ಕೆ ಹೋಗಿದ್ದರಿಂದ ಮನೆಮಂದಿ ಪಾರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.