ಪ್ರವಾಸೋದ್ಯಮ ಅಭಿವೃದ್ಧಿಗೆ ಯೋಜನೆ: ಡಿಸಿ ರಮೇಶ್
Team Udayavani, Sep 27, 2021, 6:41 PM IST
ಚಿಕ್ಕಮಗಳೂರು: ಜಿಲ್ಲಾ ಪ್ರವಾಸೋದ್ಯಮಅಭಿವೃದ್ಧಿಗೆ ವಿಫುಲ ಅವಕಾಶಗಳಿದ್ದು, ಆನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಯೋಜನೆಗಳನ್ನುರೂಪಿಸಲಾಗುವುದು ಎಂದು ಜಿಲ್ಲಾ ಧಿಕಾರಿಕೆ.ಎನ್. ರಮೇಶ್ ತಿಳಿಸಿದರು.
ಭಾನುವಾರ ನಗರದ ಜಿಲ್ಲಾ ಧಿಕಾರಿ ಕಚೇರಿಆವರಣದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ, ಪ್ರವಾಸೋದ್ಯಮಇಲಾಖೆ, ರೆಸಾರ್ಟ್ ಮಾಲೀಕರ ಸಂಘ,ಮೋಟೋರೋಡ್ಸ್ ಮತ್ತು ಮ್ಯಾಗ್ನಮ್‌ಮೋಟರ್ ನ್ಪೋರ್ಟ್ಸ್ ಚಿಕ್ಕಮಗಳೂರು ಇವರಸಹಯೋಗದಲ್ಲಿ ಆಯೋಜಿಸಿದ್ದ ಬೈಕ್‌ರ್ಯಾಲಿಗೆಚಾಲನೆ ನೀಡಿ ಅವರು ಮಾತನಾಡಿದರು.
ಜಿಲ್ಲೆ ಪ್ರಾಕೃತಿಕ ಸೌಂದರ್ಯವನ್ನುಹೊಂದಿದ್ದು, ಪ್ರವಾಸಿಗರನ್ನು ಸೆಳೆಯುತ್ತಿದೆ.ಸುಸ್ಥಿರ ಮತ್ತು ಅಂತರ್ಗತ ಬೆಳವಣಿಗೆಗೆ ಪ್ರವಾಸೋದ್ಯಮ ಎಂಬ ಸಂದೇಶದೊಂದಿಗೆ ಜಿಲ್ಲೆಯಲ್ಲಿ ಬೈಕ್ ರ್ಯಾಲಿ ಆಯೋಜಿಸಲಾಗಿದೆ.ದೇಶ- ವಿದೇಶದಿಂದ ಬಹಳಷ್ಟು ಪ್ರವಾಸಿಗರುಜಿಲ್ಲೆಗೆ ಬರುತ್ತಿದ್ದು, ಇಲ್ಲಿನ ಪ್ರತೀ ಪ್ರವಾಸಿತಾಣಗಳ ಪರಿಚಯ ಎಲ್ಲರಿಗೂ ಆಗಬೇಕಿದೆ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾ ಧಿಕಾರಿಎಂ.ಎಚ್. ಅಕ್ಷಯ್ ಮಾತನಾಡಿ, ಜಿಲ್ಲೆಯಲ್ಲಿವಿವಿಧ ಬಗೆಯ ಜೀವವೈವಿದ್ಯ, ಪ್ರಾಣಿ, ಸಸ್ಯಸಂಕುಲಗಳಿದ್ದು, ಅವುಗಳನ್ನು ಸಂರಕ್ಷಣೆಮಾಡುವ ಬಗ್ಗೆ ಜಾಗೃತಿ ಮೂಡಿಸುವಅಗತ್ಯವಿದೆ. ಪ್ರತೀ ವರ್ಷವು ಜಿಲ್ಲೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಲಿದ್ದು,ಪ್ರವಾಸಿ ತಾಣಗಳನ್ನು ಪರಿಚಯಿಸುವ ಜೊತೆಗೆ ಪರಿಸರ ಸ್ವತ್ಛತೆ ಬಗ್ಗೆ ಜಾಗೃತಿಮೂಡಿಸಲು ಇಂತಹ ಕಾರ್ಯಕ್ರಮಗಳುಸಹಕಾರಿಯಾಗಲಿದೆ ಎಂದು ತಿಳಿಸಿದರು.
ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜಿ.ಪ್ರಭು ಮಾತನಾಡಿ, ಜಿಲ್ಲಾಪ್ರವಾಸೋದ್ಯಮದಲ್ಲಿ 95ಕ್ಕೂ ಹೆಚ್ಚು ಪ್ರವಾಸಿತಾಣಗಳು ಗ್ರಾಮೀಣ ಭಾಗದಲ್ಲಿದ್ದು, ಇಲ್ಲಿನ ಪರಿಸರ ಸಂರಕ್ಷಣೆ ಹಾಗೂಪ್ರವಾಸೋದ್ಯಮವನ್ನು ಉತ್ತೇಜನಗೊಳಿಸುವನಿಟ್ಟಿನಲ್ಲಿ ಇನ್ನಷ್ಟು ಜಾಗೃತಿ ಕಾರ್ಯಕ್ರಮಗಳನ್ನುಆಯೋಜಿಸುವ ಅಗತ್ಯವಿದೆ ಎಂದುಹೇಳಿದರು.ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರು ಸ್ವತ್ಛತೆಗೆ ಹೆಚ್ಚು ಆದ್ಯತೆ ನೀಡಬೇಕು.
ಜನರಲ್ಲಿ ಜಾಗೃತಿಮೂಡಿಸಬೇಕಿದೆ. ಮುಂದಿನ ದಿನಗಳಲ್ಲಿಜಿಲ್ಲೆಯಲ್ಲಿ 35 ರಿಂದ 40 ಪ್ರವಾಸಿ ತಾಣಗಳನ್ನುಆಯ್ಕೆ ಮಾಡುವ ಮೂಲಕ ಸಂಘ-ಸಂಸ್ಥೆಗಳು,ಸ್ಥಳೀಯ ಪಂಚಾಯತ್‌ಗಳ ಸಹಕಾರದೊಂದಿಗೆ ಸ್ವತ್ಛತಾ ಅಭಿಯಾನ ಕೈಗೊಳ್ಳಲಾಗುವುದುಎಂದರು.
ಪ್ರವಾಸೋದ್ಯಮ ಇಲಾಖೆ ಸಹಾಯಕನಿರ್ದೇಶಕ ಶಿವಕುಮಾರ್ ಮಾತನಾಡಿ, ಬೈಕ್‌ರ್ಯಾಲಿ ಚಿಕ್ಕಮಗಳೂರಿನಿಂದ ಆರಂಭಗೊಂಡು ಮೂಡಿಗೆರೆ, ದೇವರಮನೆ ಮಾರ್ಗವಾಗಿ ಎತ್ತಿನಭುಜ ತಲುಪಲಿದೆ. ಬೈಕ್ ರ್ಯಾಲಿಯಲ್ಲಿ ಜಿಲ್ಲೆಯ ವಿವಿಧ ಭಾಗದ 40ಕ್ಕೂ ಹೆಚ್ಚು ಸ್ಪರ್ಧಿಗಳು ಭಾಗವಹಿಸಿದ್ದಾರೆ. ಸುಸ್ಥಿರ ಹಾಗೂಅಂತರ್ಗತ ಬೆಳವಣಿಗೆಗೆ ಪ್ರವಾಸೋದ್ಯಮಎಂಬ ಸಂದೇಶದಅಡಿಯಲ್ಲಿ ಬೈಕ್ ರ್ಯಾಲಿಸಾಗಲಿದೆ ಎಂದು ತಿಳಿಸಿದರು. ಪ್ರವಾಸೋದ್ಯಮಇಲಾಖೆ ಅಧಿ ಕಾರಿ ಜಿ.ನಾಗರಾಜ್, ರೆಸಾರ್ಟ್‌ಓನರ್ಸ್ ಅಸೋಸಿಯೇಶನ್ ಕಾರ್ಯದರ್ಶಿಹೇಮಂತ್, ಖಜಾಂಚಿ ಚೇತನ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.