ಸೆಲ್ಫಿಗಿಂತ ಪ್ರಾಣ ಮುಖ್ಯ: ಚಾರ್ಮಾಡಿಯ ಜಾರುವ ಬಂಡೆಗಳ ಮೇಲೆ ಪ್ರವಾಸಿಗರ ಸರ್ಕಸ್!
Team Udayavani, Jun 28, 2021, 11:23 AM IST
ಚಿಕ್ಕಮಗಳೂರು: ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಮಳೆಗಾಲದಲ್ಲಿ ಹಲವಾರು ಝರಿಗಳು ಪ್ರಯಾಣಿಕರಿಗೆ ಮುದ ನೀಡುತ್ತದೆ. ಬಹಳಷ್ಟು ಮಂದಿ ಪ್ರಯಾಣಿಕರು ವಾಹನ ನಿಲ್ಲಿಸಿ ಈ ಜಲಪಾತಗಳ ಸೊಬಗನ್ನು ಸವಿಯುತ್ತಾರೆ. ಆದರೆ ಕೆಲವರು ಮಾತ್ರ ಈ ಜಾರುವ ಬಂಡೆಗಳ ಮೇಲೆ ಹತ್ತಿ ಮೋಜು ಮಸ್ತಿ ಮಾಡುತ್ತಿದ್ದಾರೆ.
ಪ್ರವಾಸಿಗರು ಕೆಲವು ನೀರು ಬೀಳುವ ಸ್ಥಳಕ್ಕೆ ಹೋಗಲು ಮುಂದಾಗುತ್ತಿರುವ ಘಟನೆಗಳು ನಡೆಯುತ್ತಿದೆ. ಈ ಹಿಂದೆ ಇದೇ ಜಾಗದಲ್ಲಿ ಮಸ್ತಿ ಮಾಡಲು ಹೋಗೊ ಜಾರಿ ಬಿದ್ದು ಕೈ-ಕಾಲು ಮುರಿದುಕೊಂಡಿದ್ದಾರೆ. ಸೆಲ್ಫಿ ಕ್ಲಿಕ್ಕಿಸಲು ಹೋಗಿ ಪ್ರಾಣ ಕಳೆದುಕೊಂಡವರು ಇದ್ದಾರೆ. ಇಷ್ಟೆಲ್ಲಾ ಆಗಿದ್ದರೂ ಪ್ರವಾಸಿಗರು ಮತ್ತೆ ಮತ್ತೆ ಜಾರು ಬಂಡೆಗಳ ಮೇಲೆ ಕಾಲಿಡುತ್ತಿದ್ದಾರೆ.
ಇದನ್ನೂ ಓದಿ:ಲಸಿಕೆ ಪಡೆಯಲು ಬಂದವರು 500 ಮಂದಿ, ಕೊಟ್ಟ ಟೋಕನ್ ಕೇವಲ 200: ರೊಚ್ಚಿಗೆದ್ದ ಜನರು
ನಿರಂತರ ನೀರು ಹರಿಯುವ ಕಾರಣ ಈ ಬಂಡೆಗಳು ಜಾರುತ್ತದೆ . ಬಂಡೆಗಳ ಮೇಲೆ ಹತ್ತಬಾರದೆಂದು ಸರ್ಕಾರದ ಆದೇಶವಿದ್ದರೂ ಪ್ರವಾಸಿಗರ ಮೋಜು-ಮಸ್ತಿಗೆ ಕಡಿವಾಣ ಹಾಕುವವರಿಲ್ಲ ಎನ್ನುವಂತಾಗಿದೆ.
ದುರ್ಘಟನೆ ನಡೆಯುವ ಮುನ್ನ ಸಂಬಂಧಪಟ್ಟ ಇಲಾಖೆ, ಅಧಿಕಾರಿಗಳು ಎಚ್ಚೆತ್ತು, ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
Chikkamagaluru: ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?
Naxalite: ಮಲೆನಾಡಿಗೆ ನಕ್ಸಲರ ಭೇಟಿ ದೃಢ; 3 ಬಂದೂಕು-ಮದ್ದುಗುಂಡು ವಶ
ಚಿಕಿತ್ಸೆಗೆಂದು ಬಂದಿದ್ದ ರೋಗಿ ಸಾವು; ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರ ಆರೋಪ
Chikkamagaluru: ಮನೆಯೊಂದರಲ್ಲಿ ಬಂದೂಕು ಪತ್ತೆ; ನಕ್ಸಲ್ ಓಡಾಟ ಶಂಕೆ
MUST WATCH
ಹೊಸ ಸೇರ್ಪಡೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.