ಬದುಕಿಗೆ ಸಂಸಾರ ಕೊಟ್ಟವರು ರೇಣುಕಾಚಾರ್ಯರು
Team Udayavani, Mar 27, 2021, 7:46 PM IST
ಬಾಳೆಹೊನ್ನೂರು: ಕರ್ಮವನ್ನು ಕಳೆದು, ಧರ್ಮವನ್ನು ಬಿತ್ತಿ ಬದುಕನ್ನು ಬಂಗಾರಗೊಳಿಸಿದ ಕೀರ್ತಿ ಶ್ರೀ ಜಗದ್ಗುರು ರೇಣುಕಾಚಾರ್ಯರಿಗೆ ಸಲ್ಲುತ್ತದೆ ಎಂದು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ತಿಳಿಸಿದರು.
ಶ್ರೀ ರಂಭಾಪುರಿ ಪೀಠದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಹಾಗೂ ಕ್ಷೇತ್ರನಾಥ ಶ್ರೀ ವೀರಭದ್ರಸ್ವಾಮಿ ಮಹಾರಥೋತ್ಸವದ ಅಂಗವಾಗಿ ನಡೆದ ಶ್ರೀ ಜಗದ್ಗುರು ರೇಣುಕಾಚಾರ್ಯ ಪ್ರಶಸ್ತಿ ಪ್ರದಾನ, ಸೌಹಾರ್ದ-ಶಾಂತಿ ಸಮ್ಮೇಳನದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ಕಾಯಕ ಮತ್ತು ದಾಸೋಹದ ಮೂಲಕ ಜೀವನದ ಶ್ರೇಯಸ್ಸಿಗೆ ದಾರಿ ತೋರಿದ ಮೂಲ ಪುರುಷರು ರೇಣುಕಾಚಾರ್ಯರು. ಅಂಗ ಅವಗುಣಗಳನ್ನು ದೂರ ಮಾಡಿ, ಲಿಂಗಾಂಗ ಸಾಮರಸ್ಯ ಉಂಟು ಮಾಡಿದ ಕೀರ್ತಿ ಇವರದು. ಅಹಿಂಸಾ ಸತ್ಯ, ಅಸ್ತೇಯ ಬ್ರಹ್ಮಚರ್ಯ, ದಯಾ, ಕ್ಷಮಾ, ದಾನ, ಪೂಜಾ, ಜಪ, ಧ್ಯಾನ ಎಂಬ ಧರ್ಮದ ದಶಸೂತ್ರಗಳನ್ನು ಬೋಧಿ ಸಿ ಜೀವನದ ಉನ್ನತಿಗೆ ಬೆಳಕು ತೋರಿದವರು.
ಸತ್ಯ ಮತ್ತು ಶಾಂತಿಯ ತಳಹದಿಯ ಮೇಲೆ ಸುಸಂಸ್ಕೃತ ಸಮಾಜ ನಿರ್ಮಿಸಲು ನಿರಂತರ ಶ್ರಮಿಸಿದವರು ಎಂದು ತಿಳಿಸಿದರು. ಶಿವಾದ್ವೆ„ತ ಜ್ಞಾನ ಸಂಪತ್ತನ್ನು ಕರುಣಿಸಿದ ಕಾರುಣ್ಯ ಶಕ್ತಿ ಇವರದಾಗಿದೆ. ಶಿವನ ಸದ್ಯೋಜಾತ ಮುಖದಿಂದ ಕೊನಲುಪಾಕ ಶ್ರೀ ಸೋಮೇಶ್ವರ ಮಹಾಲಿಂಗದಿಂದ ಆವಿರ್ಭವಿಸಿದ ಮಹಾಮುನಿ ಅಗಸ್ತÂರಿಗೆ ಧರ್ಮ ದೀಕ್ಷೆ ಮತ್ತು ಷಟಸ್ಥಲ ಶಿವಸಿದ್ಧಾಂತವನ್ನು ಬೋಧಿಸಿ ಹರಸಿದ ಮಹಾನ್ ಶಕ್ತಿ ಇವರಾಗಿದ್ದಾರೆ ಎಂದರು. ಶ್ರೀ ಕೇದಾರ ಪೀಠದ ಶ್ರೀ ಜಗದ್ಗುರು ಭೀಮಾಶಂಕರಲಿಂಗ ಶಿವಾಚಾರ್ಯ ಭಗವತ್ಪಾದರು ಮಾತನಾಡಿ, ಶ್ರೀ ಜಗದ್ಗುರು ರೇಣುಕಾಚಾರ್ಯರ ದೂರದೃಷ್ಟಿ ಮತ್ತು ಆಧ್ಯಾತ್ಮ ಜ್ಞಾನದ ಶ್ರೇಷ್ಠತೆಯನ್ನು ಪ್ರಶಂಸಿಸಿದರು.
ಸ್ವಧರ್ಮ ನಿಷ್ಠೆ ಮತ್ತು ಪರಧರ್ಮ ಸಹಿಷ್ಣುತೆ ಬೆಳೆಸಲು ಶ್ರಮಿಸಿದವರು. ವೀರಶೈವ ಧರ್ಮ ಗಂಗೋತ್ರಿಯಾಗಿ ಸಮಾಜದ ಸ್ವಾಸ್ಥ್ಯ ಕಾಪಾಡಿದ ಶ್ರೇಯಸ್ಸು ಶ್ರೀ ಜಗದ್ಗುರು ರೇಣುಕಾಚಾರ್ಯರಿಗೆ ಸಲ್ಲುತ್ತದೆ. ಬರಲಿರುವ ದಿನಗಳು ಭಕ್ತರಿಗೆ ಆಶಾದಾಯಕವಾಗಿವೆ ಎಂದರು.
ವಿ.ಆರ್.ಎಲ್. ಸಮೂಹ ಸಂಸ್ಥೆಗಳ ಛೇರ್ಮನ್ ಡಾ.ವಿಜಯ ಸಂಕೇಶ್ವರ ರವರು ವೀರಶೈವ ಪರಿಶೋಧ ಪರಂಪರೆ ಇತಿಹಾಸ ಮತ್ತು ವರ್ತಮಾನ ಸಂಶೋಧನೆ ಅಮೂಲ್ಯ ಕೃತಿ ಬಿಡುಗಡೆ ಮಾಡಿ ಮಾತನಾಡಿ, ಶ್ರೀ ಜಗದ್ಗುರು ರೇಣುಕಾಚಾರ್ಯರು ಜ್ಞಾನ ಕ್ರಿಯಾತ್ಮಕವಾದ ಬದುಕಿನೊಂದಿಗೆ ಸಾಮಾಜಿಕ ಸಂವೇದನಾಶೀಲ ಗುಣಗಳನ್ನು ಬೆಳೆಸಿದ ಶ್ರೇಷ್ಠ ಆಚಾರ್ಯರು.
ವೀರಶೈವ ಧರ್ಮ ವೃಕ್ಷದ ತಾಯಿ ಬೇರಿನಂತಿರುವ ರೇಣುಕಾಚಾರ್ಯರು ಸಕಲ ಜೀವಾತ್ಮರ ಅಭ್ಯುದಯಕ್ಕೆ ದುಡಿದವರು. ಭಾರತೀಯ ಸಂಸ್ಕೃತಿಗೆ ಅತ್ಯಮೂಲ್ಯ ಕೊಡುಗೆಯಿತ್ತ ಕಾರುಣಿಕರು. ವೀರಶೈವ ಧರ್ಮೀಯರು ಸರ್ವ ಸಮರ್ಥರಾಗಿದ್ದರೂ ಜಾತೀಯತೆಯ ಸಂಕೋಲೆಯಿಂದ ಸಂಕಷ್ಟ ಎದುರಿಸುವಂತಾಗಿದೆ. ವೀರಶೈವ ಧರ್ಮದ ಕುರಿತು ಪ್ರಕಟಗೊಳ್ಳುವ ಕೃತಿಗಳು ಹೆಚ್ಚು ಹೆಚ್ಚಾಗಿ ಪ್ರತಿಯೊಬ್ಬರ ಮನೆ ಸೇರಬೇಕು ಎಂದರು. ಅಮ್ಮಿನಭಾವಿ ಅಭಿನವ ಶಾಂತಲಿಂಗ ಶ್ರೀಗಳು ತಮ್ಮ ಪ್ರಾಸ್ತಾವಿಕವಾಗಿ ಮಾತನಾಡಿದರು.
ನೇತೃತ್ವ ವಹಿಸಿದ್ದ ಎಮ್ಮಿಗನೂರಿನ ಹಂಪಿ ಸಾವಿರ ಮಠದ ವಾಮದೇವ ಮಹಾಂತ ಶ್ರೀಗಳು ಮಾತನಾಡಿ, ಭವ ಬಂಧನ ಕಳೆದು ಆಧ್ಯಾತ್ಮ ಜ್ಞಾನದ ಆದರ್ಶ ಚಿಂತನಗಳನ್ನು ಅರಿತು ಆಚರಿಸಿಕೊಳ್ಳುವ ಮನೋಭಾವ ಬೆಳೆದು ಬರಬೇಕಾಗಿದೆ ಎಂದರು. ಗೌರಿಗದ್ದೆ ಅವಧೂತ ಆಶ್ರಮದ ವಿನಯ ಗುರೂಜಿ ಮಾತನಾಡಿ, ಭಾರತದಲ್ಲಿರುವಷ್ಟು ಧರ್ಮಗಳು ಮತ್ತು ಆಚಾರ್ಯ ಶ್ರೇಷ್ಠರು ಬೇರಾವ ದೇಶಗಳಲ್ಲೂ ಇಲ್ಲ. ಹೀಗಾಗಿ ಈ ನಾಡಿನಲ್ಲಿ ಶಾಂತಿ-ಸಾಮರಸ್ಯ-ಸದ್ಭಾವನೆಗಳು ಉಳಿದು ಬಂದಿವೆ.
ಶ್ರೀ ಜಗದ್ಗುರು ರೇಣುಕಾಚಾರ್ಯರು ಶಿವಾದ್ವೆ„ತ ಸಿದ್ಧಾಂತದ ಖಣಿಯಾಗಿದ್ದಾರೆ ಎಂದರು. ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ಘಾಟಿಸಿ ಮಾತನಾಡಿ, ಬಾಳೆಹೊನ್ನೂರು ರಂಭಾಪುರಿ ಪೀಠ ಮಾನವ ಧರ್ಮದ ಆದರ್ಶ ಮೌಲ್ಯಗಳನ್ನು ಎತ್ತಿ ಹಿಡಿದಿದೆ. ಜಾತಿ, ಧರ್ಮಗಳ ಸಂಘರ್ಷಮಯ ಇಂದಿನ ದಿನಗಳಲ್ಲಿ ರಂಭಾಪುರಿ ಪೀಠದ ಸಂದೇಶ ನಮ್ಮೆಲ್ಲರಲ್ಲಿ ಶಾಂತಿ-ಸೌಹಾರ್ದತೆ ಮೂಡಿ ಬರಲು ಕಾರಣವಾಗಿದೆ. ಶ್ರೀ ಕ್ಷೇತ್ರದ ಅಭಿವೃದ್ಧಿಗಾಗಿ ತಮ್ಮ ಕೈಲಾದ ಸಹಕಾರ ನೀಡಲಾಗುವುದು. ಶ್ರೀ ರಂಭಾಪುರಿ ಜಗದ್ಗುರುಗಳ ಸಾಧನೆ-ಬೋಧನೆ ಮತ್ತು ಮಾರ್ಗದರ್ಶನ ನಮ್ಮೆಲ್ಲರ ಬಾಳಿಗೆ ದಾರಿದೀಪ ಎಂದರು. ವಿಧಾನಸಭಾ ಉಪಾಧ್ಯಕ್ಷ ಆನಂದ ಮಾಮನಿ, ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ. ರುದ್ರೇಶ, ಸೂಡಾ ಅಧ್ಯಕ್ಷ ಎಸ್.ಎಸ್. ಜ್ಯೋತಿಪ್ರಕಾಶ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ನಾಡಿನ ವಿವಿಧ ಮಠಗಳ ಶ್ರೀಗಳು ಉಪಸ್ಥಿತರಿದ್ದರು. ಶಿವಮೊಗ್ಗದ ಕುಮಾರಿ ಜಿ.ಜಿ. ರಕ್ಷಿತಾರಿಂದ ಭರತ ನಾಟ್ಯ ಪ್ರದರ್ಶನ ಜರುಗಿತು. ಗದಗಿನ ಸಂಗಮೇಶ ಉತ್ತಂಗಿ ಪ್ರಾರ್ಥನೆ ಸಲ್ಲಿಸಿದರು. ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ| ಬೇಳೂರು ರಾಘವೇಂದ್ರ ಶೆಟ್ಟಿ ಸ್ವಾಗತಿಸಿ, ಶಿವಮೊಗ್ಗದ ಶಾಂತಾ ಆನಂದ ನಿರೂಪಿಸಿದರು. ಇದೇ ಸಂದರ್ಭದಲ್ಲಿ ಭಕ್ತಾದಿಗಳು ಶ್ರೀ ಕೇದಾರ ಜಗದ್ಗುರುಗಳಿಗೆ ಸುವರ್ಣ ಕಿರೀಟ ಸಮರ್ಪಿಸಿದರು. ಬೆಂಗಳೂರಿನ ಬಾಳೆಎಲೆ ಬಸವರಾಜ ಅವರು ಐವತ್ತು ಸಾವಿರ ರುದ್ರಾಕ್ಷಿಗಳಿಂದ ತಯಾರಿಸಿದ ಬೃಹತ್ ರುದ್ರಾಕ್ಷಿ ಮಾಲೆಯನ್ನು ಉಭಯ ಜಗದ್ಗುರುಗಳಿಗೆ ಅರ್ಪಿಸಿದರು. ಪಾಲ್ಗೊಂಡ ಭಕ್ತರಿಗೆ ಶ್ರೀ ಜಗದ್ಗುರು ರೇಣುಕಾಚಾರ್ಯ ಹಳೆ ವಿದ್ಯಾರ್ಥಿಗಳ ಸಂಘದವರು ಮಜ್ಜಿಗೆ ಪಾಕೇಟ್ ವಿತರಿಸಿದರು. ಸಂಜೆ ಗಾನ ಗಂಧರ್ವ ಪಂಡಿತ ರಾಜಗುರು ಗುರುಸ್ವಾಮಿ ಕಲಕೇರಿ ಸಂಗಡಿಗರಿಂದ ಸಂಗೀತ ಸೌರಭ ಜರುಗಿತು. ರಾತ್ರಿ ಶ್ರೀ ಜಗದ್ಗುರು ರೇಣುಕಾಚಾರ್ಯ ಕೃಪಾಪೋಷಿತ ಹಳೆಯ ವಿದ್ಯಾರ್ಥಿ ಸಂಘದ ವತಿಯಿಂದ ಶೃಂಗೇರಿ ಕ್ಷೇತ್ರ ಮಟ್ಟದ ಹೊನಲು ಬೆಳಕಿನ ಪೊÅ ಮಾದರಿ ಕಬಡ್ಡಿ ಪಂದ್ಯಾವಳಿ ನಡೆಯಿತು. ಪಾತಃಕಾಲ 32 ವಟುಗಳಿಗೆ ಶಿವದೀಕ್ಷೆ, ಅಯ್ನಾಚಾರ ಕಾರ್ಯಕ್ರಮ ಜರುಗಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxal Surrender: ಮುಂಡಗಾರು ಲತಾ ಸೇರಿ 6 ನಕ್ಸಲರು ನಾಳೆ ಶರಣಾಗತಿ?
Dispute: ಚಿಕ್ಕಮಗಳೂರಲ್ಲಿ ತಾರಕಕ್ಕೇರಿದ ದರ್ಗಾ ವಿವಾದ: ಬಿಗು ಪರಿಸ್ಥಿತಿ
Kottigehara: ಮೇಯಲು ಬಿಟ್ಟ ಹಸುವಿನ ಮೇಲೆ ಹುಲಿ ದಾಳಿ… ಅನಾಥವಾದ ಕರು
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Chikkamagaluru: ತಾಯಿ ಮನೆಗೆ ಬರಲಿಲ್ಲ ಎಂದು ಮಾವನ ಮೇಲೆ ಮಚ್ಚು ಬೀಸಿದ ಅಳಿಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.