ಆಸ್ಟ್ರೇಲಿಯಾ ಕನ್ನಡಿಗರ ಜತೆ ವಿಡಿಯೋ ಸಂವಾದ
Team Udayavani, May 17, 2020, 6:38 AM IST
ಚಿಕ್ಕಮಗಳೂರು: ಸಚಿವ ಸಿ.ಟಿ. ರವಿ ಅವರು ಶನಿವಾರ ನಗರದ ತಮ್ಮ ಗೃಹ ಕಚೇರಿಯಲ್ಲಿ ಆಸ್ಟ್ರೇಲಿಯಾದಲ್ಲಿ ನೆಲೆಸಿರುವ ಕನ್ನಡಿಗರೊಂದಿಗೆ ಸ್ಕೈಪ್‌ಆ್ಯಪ್ ಮೂಲಕ ವಿಡಿಯೋ ಸಂವಾದ ನಡೆಸಿದರು.
ಆಸ್ಟ್ರೇಲಿಯಾಗೆ ಉದ್ಯೋಗ ಅರಸಿ, ಪ್ರವಾಸಕ್ಕೆ ಹೋದವರು ಹಾಗೂ ಉನ್ನತ ವ್ಯಾಸಂಗಕ್ಕೆ ತೆರಳಿದ ವಿದ್ಯಾರ್ಥಿಗಳೊಂದಿಗೆ ಕೋವಿಡ್ ದಿಂದ ಸಂಕಷ್ಟ ಎದುರಿಸುವುದು ಸೇರಿದಂತೆ ಕನ್ನಡ ಭಾಷೆ ಅಭಿವೃದ್ಧಿ ಕುರಿತು ಚರ್ಚಿಸಿದರು.1,500ಕ್ಕೂ ಹೆಚ್ಚು ಕನ್ನಡಿಗರು ಸ್ವದೇಶಕ್ಕೆ ಮರಳಲು ಅರ್ಜಿ ಸಲ್ಲಿಸಿ ನೋಂದಣಿ ಮಾಡಿದ್ದಾರೆ. ಅವರನ್ನು ಹಂತ-ಹಂತವಾಗಿ ದೇಶಕ್ಕೆ ಕರೆತರಲಾಗುವುದು ಎಂದರು.
ಕನ್ನಡ ಓದುಗರ ಅಭಿರುಚಿಗಾಗಿ ವಿದೇಶದಲ್ಲಿರುವ ಸಂಘಗಳ ವಾಚಾನಾಲಯಗಳಿಗೆ ಕನ್ನಡದ ಹಳೆಯ ಮತ್ತು ನವ್ಯ ಪುಸ್ತಕಗಳನ್ನು ನೀಡಲಾಗುವುದು. ಅಲ್ಲದೇ ಆನ್‌ಲೈನ್ ಕನ್ನಡ ಲೈಬ್ರರಿ ಪುಸ್ತಕಗಳನ್ನು ಅಲ್ಲಿನ ಜನರಿಗೆ ಲಭ್ಯವಾಗುವ ರೀತಿಯಲ್ಲಿ ಲಿಂಕ್ ಒದಗಿಸಿ ಪುಸ್ತಕಗಳನ್ನು ಓದಲು ಅವಕಾಶ ಮಾಡಿಕೊಡಲಾಗುವುದು ಎಂದರು.
ರಾಜ್ಯದಲ್ಲಿ ಕೋವಿಡ್-19 ನಿಂದಾಗಿ ಪ್ರವಾಸೋದ್ಯಮ ಹಿನ್ನಡೆಯಾಗಿದೆ ಇದನ್ನು ಉತ್ತೇಜಿಸಲು ಜನರ ಮನೋಭಾವ ಬದಲಾಯಿಸ ದರೊಂದಿಗೆ ಸ್ಥಳೀಯರ ಪ್ರವಾಸ, ಅಂತರ್ ಜಿಲ್ಲಾ ಪ್ರವಾಸವನ್ನು ಹಂತ-ಹಂತವಾಗಿ ಚುರುಕು ಗೊಳಿಸುವುದರೊಂದಿಗೆ ಅಂತಾರಾಷ್ಟ್ರೀಯ ಪ್ರವಾಸಿಗರನ್ನು ತಮ್ಮತ್ತ ಸೆಳೆಯಲು ಕಾರ್ಯ ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Chikkamagaluru: ಮೂರು ದಿನದ ಬಾಣಂತಿ ಮೃತ್ಯು; ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪ
Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Elephant: ಕಾಫಿನಾಡಿನಲ್ಲಿ ಕಾಡಾನೆ ನೈಟ್ ರೌಂಡ್ಸ್… ಇದು ಮುಗಿಯದ ಗೋಳು ಎಂದ ಗ್ರಾಮಸ್ಥರು
MUST WATCH
ಹೊಸ ಸೇರ್ಪಡೆ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್ ಭೇಟಿ: 21ರಿಂದ ಮೋದಿ ಪ್ರವಾಸ
Whale: ಅಂಬರ್ ಗ್ರೀಸ್ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.