ಉಪಚುನಾವಣೆಯಲ್ಲಿ “ಕೈ’ ಹಿಡಿದ ಮತದಾರ
Team Udayavani, Dec 21, 2017, 6:12 PM IST
ತರೀಕೆರೆ: ನಡೆದ ಗಡಿಹಳ್ಳಿ ತಾಲೂಕು ಪಂಚಾಯತ್ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪ್ರೇಮಾ ಕೃಷ್ಣಮೂರ್ತಿ ಜಯಗಳಿಸಿದ್ದಾರೆ ಎಂದು ಚುನಾವಣಾಧಿಕಾರಿ ಎನ್. ಟಿ. ಧರ್ಮೋಜಿರಾವ್ ಘೋಷಿಸಿದರು.
ತಾಲೂಕಿನಾದ್ಯಂತ ಅತ್ಯಂತ ತೀವ್ರ ಕುತೂಹಲ ಕೆರಳಿಸಿದ್ದ ಉಪ ಚುನಾವಣೆಯಲ್ಲಿ ಪ್ರೇಮಾ ಕೃಷ್ಣಮೂರ್ತಿ 2278 ಮತಗಳನ್ನು
ಪಡೆದರೆ, 1833 ಮತಗಳನ್ನು ಪಡೆದ ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿ ಜಿ.ಈ.ಪ್ರತಾಪ್ ವಿರುದ್ಧ 445 ಮತಗಳ ಅಂತರದಿಂದ
ಜಯಗಳಿಸಿದರು. ಚುನಾವಣೆಯಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿದ್ದ ಜನತಾದಳದ ಅಭ್ಯರ್ಥಿ ಮೈಕ್ಮಲ್ಲೇಶಪ್ಪ 1682 ಮತಗಳನ್ನು ಪಡೆದ ತೃತೀಯ ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಯಿತು.
ಪ್ರಮುಖ ಪ್ರತಿಸ್ಪರ್ಧಿಯಾಗಿದ್ದ ಬಿಜೆಪಿ ಮುಖಭಂಗ ಅನುಭವಿಸಿದೆ. ಹಿಂದಿನ ಚುನಾವಣೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿ ಅಲ್ಪ
ಮತದ ಅಂತರದಿಂದ ಸೋಲು ಅನುಭವಿಸಿದ್ದ ಜಿ.ಈ.ಪ್ರತಾಪ್ ಈ ಬಾರಿ ಬಿಜೆಪಿ ಟಿಕೆಟ್ ಪಡೆದರೂ ಸಹ ಗೆಲುವಿನ ದಡ ಮುಟ್ಟಲಿಲ್ಲ.
ಕಾಂಗ್ರೆಸ್ ಅಭ್ಯರ್ಥಿ ಪ್ರೇಮಾ ಕೃಷ್ಣಮೂರ್ತಿ ಪತಿ ನಾಪತ್ತೆಯಾದ ಹಿನ್ನೆಲೆಯಲ್ಲಿ ಅನುಕಂಪದ ಮತ ಪಡೆಯುವಲ್ಲಿ ಯಶಸ್ವಿಯಾದರು.
5902 ಮತದಾರರಲ್ಲಿ 109 ನೋಟಾ ಮತಗಳು ಬಿದ್ದಿವೆ.
ಕಾಂಗ್ರೆಸ್ ವಿಜಯೋತ್ಸವ: ಚುನಾವಣೆಯಲ್ಲಿ ಜಯಗಳಿಸಿದ ಹಿನ್ನೆಲೆಯಲ್ಲಿ ಮತ ಕೇಂದ್ರದ ಹೊರಭಾಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಹೊಡೆದು ಸಂಭ್ರಮಾಚರಣೆ ನಡೆಸಿದರು. ನಂತರ ಶಾಸಕ ಜಿ.ಎಚ್. ಶ್ರೀನಿವಾಸ್ ನೇತೃತ್ವದಲ್ಲಿ ಪಕ್ಷದ ಅಭ್ಯರ್ಥಿ ಪ್ರೇಮಾ ಅವರೊಂದಿಗೆ ಕಾರ್ಯಕರ್ತರು ಮಿನಿವಿಧಾನಸೌಧದಿಂದ ಮಹಾತ್ಮ ಗಾಂಧಿ ವೃತ್ತದ ತನಕ ಮೆರವಣಿಗೆ ನಡೆಸಿ
ವಿಜಯೋತ್ಸವ ಆಚರಿಸಿದರು.
ಅನುಕಂಪದ ಮತಗಳಿಂದ ಕಾಂಗ್ರೆಸ್ಗೆ ಜಯ
ತರೀಕೆರೆ: ಚುನಾವಣೆಯಲ್ಲಿ ಸೋಲು ಗೆಲುವು ಸ್ವಾಭಾವಿಕ. ಮತದಾರ ನೀಡಿದ ತೀರ್ಪನ್ನು ವಿನಮ್ರವಾಗಿ ಪಕ್ಷ ಸ್ವೀಕರಿಸಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನು ಸಂಘಟಿಸಲಾಗವುದು ಎಂದರು. ಸುದ್ದಿಗಾರರೊಂದಿಗೆ ಮಾತನಾಡಿದ
ಅವರು, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪ್ರೇಮ ಕೃಷ್ಣಮೂರ್ತಿ ಅವರ ಗೆಲುವಿಗೆ ಅವರ ಪತಿ ನಾಪತ್ತೆಯಾಗಿದ್ದು ಕಾರಣ. ಇದರಿಂದಾಗಿ
ಮತದಾರರಲ್ಲಿ ಅನುಕಂಪ ಮೂಡಿಸಿದ ಹಿನ್ನೆಲೆಯಲ್ಲಿ ಅನುಕಂಪದ ಅಲೆಯಲ್ಲಿ ಅವರು ಗೆಲುವು ಸಾ ಧಿಸಿದ್ದಾರೆ. ಗೆಲುವು ಸಾ ಧಿಸಿದ
ಕಾಂಗ್ರೆಸ್ ಅಭ್ಯರ್ಥಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ಶಾಸಕ ಜಿ.ಎಚ್.ಶ್ರೀನಿವಾಸ್ ಮಾಡಿದ ಅಭಿವೃದ್ಧಿ ಕೆಲಸಗಳಿಂದ ಜಯಗಳಸಿದ್ದೇನೆ ಪ್ರತಿಪಕ್ಷಗಳನ್ನು ಧೂಳಿಪಟ ಮಾಡಿದ್ದೇವೆ ಎಂದು
ಹೇಳಿದ್ದಾರೆ. ಆದರೆ ಕ್ಷೇತ್ರದಲ್ಲಿ ಅಭಿವೃದ್ಧಿª ಕೆಲಸಗಳು ಅವರನ್ನು ಬೆಂಬಲಿಸಿಲ್ಲ. ಜಿ.ಬಿ.ಕೃಷ್ಣಮೂರ್ತಿ ಕಾಣೆಯಾದ ಹಿನ್ನೆಲೆಯಲ್ಲಿ
ಮತಗಳು ಅನುಕಂಪದ ಮತಗಳಾಗಿ ಪರಿವರ್ತನೆಯಾಗಿ ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗೆ ಕಾರಣವಾಗಿದೆ. ಯಾವುದೇ
ರಾಜಕೀಯ ಪಕ್ಷಗಳನ್ನು ಧೂಳಿಪಟ ಮಾಡಲು ಸಾಧ್ಯವಿಲ್ಲ ಎಂದು ಟೀಕಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Naxal ಶರಣಾಗತಿ; ಚಿಕ್ಕಮಗಳೂರು ಡಿಸಿ ಕಚೇರಿ ಸುತ್ತಮುತ್ತ ಬಿಗಿ ಭದ್ರತೆ
Kadur; ತಾಲೂಕು ವೈದ್ಯಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ
Naxal Surrender: ಕೊನೆಗೂ ಕರ್ನಾಟಕ ರಾಜ್ಯ ಸಂಪೂರ್ಣ ನಕ್ಸಲ್ ಮುಕ್ತವಾಯಿತೇ?
Naxal Surrender: ಮುಂಡಗಾರು ಲತಾ ಸೇರಿ 6 ನಕ್ಸಲರು ನಾಳೆ ಶರಣಾಗತಿ?
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Arrested: ಪೈಂಟ್ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ
Dharmasthala: ದೇವರ ದರ್ಶನ ಇನ್ನಷ್ಟು ಸುಲಲಿತ
ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್
Mollywood: ನಟಿ ಹನಿ ರೋಸ್ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ
OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.