ಜಲಾನಯನ ಅಭಿವೃದ್ಧಿ ಯೋಜನೆ ಪ್ರಯೋಜನಕ್ಕೆ ಕರೆ
Team Udayavani, Jul 26, 2020, 10:39 AM IST
ಕಡೂರು: ಕೃಷಿ ಇಲಾಖೆಯಿಂದ ಜಲಾನಯನ ಅಭಿವೃದ್ಧಿ ಮೂಲಕ ಬರಗಾಲ ತಡೆಯಲು ಯಗಟಿ ಜಿಪಂ ವ್ಯಾಪ್ತಿಯ ತಾಲೂಕಿನ ಹರಿಸಮುದ್ರ ಸೇರಿದಂತೆ 6 ಗ್ರಾಪಂಗಳು ಆಯ್ಕೆಯಾಗಿದ್ದು ರೈತರು ಈ ಯೋಜನೆ ಸದುಪಯೋಗ ಪಡಿಸಿಕೊಳ್ಳಬೇಕೆಂದು ಜಿಪಂ ಸದಸ್ಯ ಶರತ್ ಕೃಷ್ಣಮೂರ್ತಿ ತಿಳಿಸಿದರು.
ಕೃಷಿ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿ ಜಲಾನಯನ ಅಭಿವೃದ್ಧಿ ಮೂಲಕ ಬರಗಾಲ ತಡೆಗಟ್ಟುವ ಯೋಜನೆ ಮೂಲಕ ಇಲಾಖೆ ರೈತರಿಗೆ ಸಸಿ ವಿತರಣೆ ಕಾರ್ಯಕ್ರಮವನ್ನು ಆಯೋಜಿಸಿದ್ದು ಈ ಕಾರ್ಯಕ್ರಮದಲ್ಲಿ ಸಸಿ ವಿತರಣೆ ಮಾಡಿ ಮಾತನಾಡಿದರು. ಕೃಷಿ ಇಲಾಖೆಯ ಅಡಿಯಲ್ಲಿ ಬರುವ ಜಲಾನಯನ ಅಭಿವೃದ್ಧಿ ಮೂಲಕ ಬರಗಾಲ ತಡೆಯುವಿಕೆ ಕಾರ್ಯಕ್ರಮವು ಕ್ಷೇತ್ರದ ಹರಿಸಮುದ್ರವನ್ನು ಈ ಬಾರಿ ಆಯ್ಕೆ ಮಾಡಿಕೊಂಡಿದ್ದು ಇಲ್ಲಿನ ಸುಮಾರು 6 ಗ್ರಾಪಂ ವ್ಯಾಪ್ತಿಗೆ ಸೇರುವ ಹಳ್ಳಿಗಳಲ್ಲಿನ ರೈತರ ಹೊಲಗಳ ಬದುಗಳಿಗೆ ವಿವಿಧ ಜಾತಿಯ ಸಸಿಗಳನ್ನು ವಿತರಿಸಿ ಅವುಗಳನ್ನು ಬೆಳೆಸುವುದರಿಂದ ಅಂತರ್ಜಲ ಹೆಚ್ಚಾಗಿ ಮಳೆಯ ನೀರು ಕೃಷಿ ಹೊಂಡಗಳಲ್ಲಿ ಸಂಗ್ರಹಿಸಲು ಸಾಧ್ಯವಾಗಲಿದೆ. ಇದರಿಂದ ಬರಗಾಲವನ್ನು ಹತೋಟಿಗೆ ತರಲು ಸಹಕಾರವಾಗಲಿದೆ ಎಂದರು.
6 ಗ್ರಾಪಂ ವ್ಯಾಪ್ತಿಯ ರೈತರು ಈ ಬಾರಿ ಇಲಾಖೆ ನೀಡುವ ಸಲಹೆ- ಸೂಚನೆಗಳನ್ನು ಪಡೆದು ಸದುಪಯೋಗ ಪಡಿಸಿಕೊಳ್ಳಿ ಎಂದು ಕರೆ ನೀಡಿದರು. ಕೃಷಿ ಇಲಾಖೆಯ ಹಿರಿಯ ಸಹಾಯಕ (ತೋಟಗಾರಿಕೆ) ನಿರ್ದೇಶಕಿ ಎ.ಸಿ. ನೇತ್ರಾವತಿ ಮಾತನಾಡಿ, ಜಿಲ್ಲೆಯಲ್ಲಿ ಈ ಸಾಲಿಗೆ 3 ತಾಲೂಕುಗಳನ್ನು ಆಯ್ಕೆ ಮಾಡಿಕೊಂಡಿದ್ದು ಕಡೂರು ತಾಲೂಕಿನ ಹರಿಸಮುದ್ರ ಗ್ರಾಮವನ್ನು ಆಯ್ಕೆ ಮಾಡಿಕೊಳ್ಳಲಾಗಿದೆ ಎಂದರು.
ಗ್ರಾಪಂ ಮಾಜಿ ಸದಸ್ಯರಾದ ಗೋವಿಂದಪ್ಪ, ಸಿದ್ದಮ್ಮ, ಶಂಕ್ರಮ್ಮ, ಹಾಗೂ ಆರ್‌ಎಫ್‌ಒ (ಕೃಷಿ ಇಲಾಖೆ) ಇಸ್ಮಾಯಿಲ್ ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Baba Budan Dargah: ಗೋರಿಗಳ ಮೇಲೆ ಕುಂಕುಮ ಹಚ್ಚಿರುವ ಆರೋಪ
MUST WATCH
ಹೊಸ ಸೇರ್ಪಡೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ನವೆಂಬರ್ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.