ಕರ್ಫ್ಯೂ ಹಿನ್ನೆಲೆ ಸ್ತಬ್ಧವಾದ ಚಿಕ್ಕಮಗಳೂರು ;ರಸ್ತೆಗಳೆಲ್ಲ ಖಾಲಿ ಖಾಲಿ
Team Udayavani, Jan 8, 2022, 3:51 PM IST
ಚಿಕ್ಕಮಗಳೂರು : ವಾರಂತ್ಯ ಕರ್ಫ್ಯೂ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ನಗರ ಇಂದು ಬಹುತೇಕ ಸ್ತಬ್ಧವಾಗಿತ್ತು .
ಸದಾ ಜನ ಮತ್ತು ವಾಹನಗಳಿಂದ ಗಿಜಿಗುಡುತ್ತಿದ್ದ ಮಹಾತ್ಮಗಾಂಧಿ ರಸ್ತೆ, ಮಾರ್ಕೆಟ್ ರಸ್ತೆ, ಐಜಿ ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳೆಲ್ಲ ಖಾಲಿ ಖಾಲಿ ಹೊಡೆಯುತ್ತಿದ್ದವು .
ರಸ್ತೆ ಸಾರಿಗೆ ಬಸ್ ಸಂಚಾರ ಇದ್ದರೂ ಪ್ರಯಾಣಿಕರಿಲ್ಲದೆ ಖಾಲಿ ಹೊಡೆಯುತ್ತಿದ್ದವು . ಕರ್ಫ್ಯೂ ಮಧ್ಯೆ ಕೆಲಸವಿಲ್ಲದೆ ಓಡಾಡುತ್ತಿದ್ದ ಹಲವರು ಪೊಲೀಸರ ಕೈಗೆ ಸಿಕ್ಕಿಬಿದ್ದು ದಂಡ ತೆರಬೇಕಾಯಿತು .
ಪ್ರಮುಖ ರಸ್ತೆಗಳಲ್ಲಿ ಬ್ಯಾರಿಕೇಡ್ ಗಳನ್ನು ಹಾಕಲಾಗಿತ್ತು .ಎಲ್ಲೆಡೆ ಪೊಲೀಸ್ ಕಣ್ಗಾವಲು ಇರಿಸಲಾಗಿತ್ತು . 2 ನೇ ಶನಿವಾರವಾಗಿದ್ದರಿಂದ ಸಹಜವಾಗಿ ಸರ್ಕಾರಿ ಕಚೇರಿ, ಬ್ಯಾಂಕ್ ಗೆ ರಜೆ ಇತ್ತು .ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿತ್ತು .
ತುರ್ತು ಸೇವೆಗಳಿಗೆ ಬೆರಳೆಣಿಕೆಯಷ್ಟು ಜನ ತಿರುಗಾಡುತ್ತಿದ್ದು ಪೊಲೀಸರಿಗೆ ಸೂಕ್ತ ಸಮಜಾಯಿಸಿ ನೀಡಬೇಕಾಗಿತ್ತು. ಹಣ್ಣು ತರಕಾರಿ ಇನ್ನಿತರ ಕೆಲ ಅಗತ್ಯ ವಸ್ತುಗಳ ಮಾರಾಟಕ್ಕೆ ಅನುಮತಿ ನೀಡಿದ್ದರೂ ಖರೀದಿಸುವವರ ಸಂಖ್ಯೆ ವಿರಳವಾಗಿತ್ತು .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Chikkamagaluru: ಮೂರು ದಿನದ ಬಾಣಂತಿ ಮೃತ್ಯು; ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪ
Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Elephant: ಕಾಫಿನಾಡಿನಲ್ಲಿ ಕಾಡಾನೆ ನೈಟ್ ರೌಂಡ್ಸ್… ಇದು ಮುಗಿಯದ ಗೋಳು ಎಂದ ಗ್ರಾಮಸ್ಥರು
MUST WATCH
ಹೊಸ ಸೇರ್ಪಡೆ
MUDA Scam: ಕೇಸ್ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು
Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?
Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ
Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ
ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.