ದುಡ್ಡಲ್ಲ-ದುಡಿಮೆಯೇ ದೊಡ್ಡಪ್ಪ: ಬಸವರಾಜ ಬೊಮ್ಮಾಯಿ
ದುಡಿಯುವ ಸಮಾಜ ಕಟ್ಟುವುದೇ ಸರ್ಕಾರದ ಧ್ಯೇಯ
Team Udayavani, May 19, 2022, 3:14 PM IST
ಚಿಕ್ಕಮಗಳೂರು: ದುಡ್ಡೆ ದೊಡ್ಡಪ್ಪ ಅಲ್ಲ, ದುಡಿಮೆಯೇ ದೊಡ್ಡಪ್ಪ. ದುಡಿಯುವ ಸಮಾಜ ಕಟ್ಟಬೇಕೆನ್ನುವುದು ಸರ್ಕಾರದ ಧ್ಯೇಯವಾಗಿದೆ. ಸಮಾನತೆಯ ಸಮಾಜ ನಿರ್ಮಾಣವಾಗಬೇಕಿದೆ. ಈ ನಿಟ್ಟಿನಲ್ಲಿ ಕೆಲಸ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ನಗರದ ಆದಿಚುಂಚನಗಿರಿ ತಾಂತ್ರಿಕ ಮಹಾವಿದ್ಯಾಲಯದ ಬಯಲು ರಂಗಮಂದಿರದಲ್ಲಿ ಬುಧವಾರ ಜಿಲ್ಲಾಡಳಿತ ಹಮ್ಮಿಕೊಂಡಿದ್ದ 384 ಕೋಟಿ ರೂ. ವೆಚ್ಚದ ಜಿಲ್ಲೆಯ ವಿವಿಧ ಇಲಾಖೆ ಯೋಜನೆ ಮತ್ತು ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ ಸ್ವಾವಲಂಬಿ ಬದುಕು ಬದುಕಬೇಕು. ಈ ಹಿನ್ನೆಲೆಯಲ್ಲಿ ಶಿಕ್ಷಣ ಮತ್ತು ಆರೋಗ್ಯಕ್ಕೆ ಒತ್ತು ನೀಡಲಾಗುತ್ತಿದೆ. ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅನುಕೂಲವಾಗುವಂತೆ ವಸತಿ ನಿಲಯಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಎಸ್‌ಸಿ, ಎಸ್‌ಟಿ, ಬಡತನ ರೇಖೆಗಿಂತ ಕಳೆಮಟ್ಟದಲ್ಲಿರುವರಿಗೆ 75 ಯುನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುತ್ತಿದೆ ಎಂದರು.
ರಾಜ್ಯದಲ್ಲಿ ಮೂರು ಸಾವಿರ ಕಿಮೀ ರಸ್ತೆ ಅಭಿವೃದ್ಧಿ ಪಡಿಸಲಾಗುತ್ತಿದೆ. ರೈತರ ಮಕ್ಕಳು ವಿದ್ಯೆಯಿಂದ ವಂಚಿತರಾಗಬಾರದು ಎಂದು ಅಧಿಕಾರ ಹಿಡಿದ 4 ಗಂಟೆಯಲ್ಲೇ ವಿದ್ಯಾನಿಧಿ ಯೋಜನೆ ರೂಪಿಸಲಾಗಿದೆ. ಯೋಜನೆಯಿಂದ 11 ಲಕ್ಷ ಮಕ್ಕಳು ಇದರ ಉಪಯೋಗ ಪಡೆದಿದ್ದಾರೆ. ಈ ವರ್ಷ 14 ಲಕ್ಷ ಮಕ್ಕಳಿಗೆ ಈ ಯೋಜನೆಯ ಉಪಯೋಗ ಪಡೆದುಕೊಳ್ಳುವ ಗುರಿ ಹೊಂದಲಾಗಿದೆ. ಬಜೆಟ್‌ನಲ್ಲಿ ಘೋಷಿಸಿದ ಬಹುಪಾಲು ಯೋಜನೆಗಳು ಈಗಾಗಲೇ ಜಾರಿಯಲ್ಲಿವೆ. ಎಲ್ಲ ಕ್ಷೇತ್ರಗಳ ಅಭಿವೃದ್ಧಿ ಮಾಡಲಾಗುತ್ತಿದೆ. ಯೋಜನೆಗಳನ್ನು ಜನರಿಗೆ ಮುಟ್ಟಿಸುವ ಕೆಲಸವನ್ನು ಸರ್ಕಾರ ನಿರಂತರವಾಗಿ ಮಾಡುತ್ತಿದೆ ಎಂದರು.
ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ, ಶಾಸಕ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮಾತನಾಡಿದರು. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಿ.ಎನ್. ಜೀವರಾಜ್, ಶಾಸಕರಾದ ಎಂ.ಪಿ. ಕುಮಾರಸ್ವಾಮಿ, ಬೆಳ್ಳಿ ಪ್ರಕಾಶ್, ಡಿ.ಎಸ್. ಸುರೇಶ್, ಟಿ.ಡಿ. ರಾಜೇಗೌಡ, ವಿಧಾನ ಪರಿಷತ್ ಸದಸ್ಯ ಎಂ.ಕೆ. ಪ್ರಾಣೇಶ್ ಸೇರಿದಂತೆ ಅನೇಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
Chikkamagaluru: ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?
Naxalite: ಮಲೆನಾಡಿಗೆ ನಕ್ಸಲರ ಭೇಟಿ ದೃಢ; 3 ಬಂದೂಕು-ಮದ್ದುಗುಂಡು ವಶ
ಚಿಕಿತ್ಸೆಗೆಂದು ಬಂದಿದ್ದ ರೋಗಿ ಸಾವು; ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರ ಆರೋಪ
Chikkamagaluru: ಮನೆಯೊಂದರಲ್ಲಿ ಬಂದೂಕು ಪತ್ತೆ; ನಕ್ಸಲ್ ಓಡಾಟ ಶಂಕೆ
MUST WATCH
ಹೊಸ ಸೇರ್ಪಡೆ
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.