ಕುಡಿಯುವ ನೀರಿಗೆ ತೊಂದರೆಯಾಗದಂತೆ ಕಾರ್ಯ ನಿರ್ವಹಿಸಿ

Team Udayavani, Jan 25, 2019, 9:27 AM IST

chikk-1.jpg

ಮೂಡಿಗೆರೆ: ಕುಡಿಯುವ ನೀರಿಗೆ ಎಸ್‌ಇಪಿ ಟಿಎಸ್‌ಪಿಯಲ್ಲಿ 1 ಕೋಟಿ ರೂ. ಅನುದಾನ ನೀಡಲಾಗಿದೆ. ಈ ಹಿಂದೆ ಸಚಿವ ಆಂಜನೇಯ ಅವರು ನೀಡಿದ ಅನುದಾನದಲ್ಲಿ 2 ಕೋಟಿ ರೂ.ಗಳನ್ನು ಕುಡಿಯುವ ನೀರಿಗೆ ಮೀಸಲಿರಿಸಲಾಗಿದೆ. ಅದನ್ನು ಸಮರ್ಪಕವಾಗಿ ಬಳಸಿಕೊಂಡು ಕುಡಿಯುವ ನೀರಿಗೆ ತೊಂದರೆಯಾಗದಂತೆ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು ಎಂದು ಶಾಸಕ ಎಂ.ಪಿ.ಕುಮಾರಸ್ವಾಮಿ ಹೇಳಿದರು. ಪಟ್ಟಣದ ತಾಪಂ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ತ್ತೈ„ಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಹಿಂದೆ ಕಂದಾಯ ಇಲಾಖೆ ಸಚಿವರು ಬಂದಾಗ ಫಾರಂ ನಂ. 54ಯಲ್ಲಿ ಅರ್ಜಿ ಸಲ್ಲಿಸಿದ ಫಲಾನುಭವಿಗಳ ಕಡತಗಳನ್ನು ಅರಣ್ಯ ಇಲಾಖೆಗೆ ಕಳುಹಿಸಿ ಸುಮ್ಮನೇ ಸಮಯ ವ್ಯರ್ಥ ಮಾಡುವುದು ಬೇಡ. ಕಂದಾಯ ಇಲಾಖೆ ಅಧಿಕಾರಿಗಳೇ ಪರಿಶೀಲನೆ ನಡೆಸಿ ಇತ್ಯರ್ಥಪಡಿಸಬಹುದು ಎಂದಿದ್ದರು. ಕಂದಾಯ ಜಾಗವೆಂದು ಪರಿಗಣನೆಗೆ ಬಂದರೆ 94.ಸಿ. ಮತ್ತು ಫಾ.ನಂ. 54 ನಲ್ಲಿ ಅರ್ಜಿ ಹಾಕಿದ ಫಲಾನುಭವಿಗಳಿಗೆ ಕಂದಾಯ ನಿರೀಕ್ಷಕ ಹಾಗೂ ಗ್ರಾಮ ಲೆಕ್ಕಿಗರ ವರದಿ ಪಡೆದು ಕೂಡಲೇ ವಿಲೇವರಿ ಮಾಡಬೇಕು ತಹಶೀಲ್ದಾರ್‌ ಪದ್ಮನಾಭಶಾಸ್ತ್ರಿ ಅವರಿಗೆ ಸೂಚಿಸಿದರು.

ತಾಪಂ ಅಧ್ಯಕ್ಷ ಕೆ.ಸಿ.ರತನ್‌ ಮಾತನಾಡಿ, ತಾಲೂಕಿನಲ್ಲಿ ಈ ಬಾರಿ ಹೆಚ್ಚು ಮಳೆಯಾಗಿದ್ದರೂ ನದಿ ಹಳ್ಳಗಳು ಸಂಪೂರ್ಣವಾಗಿ ಬತ್ತಿ ಹೋಗಿವೆ. ಈಗಾಗಲೇ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಮುಂದಿನ ದಿನದಲ್ಲಿ ಇನ್ನೂ ಹೆಚ್ಚಿನ ಸಮಸ್ಯೆ ಉಂಟಾಗುತ್ತದೆ. ಹಾಗಾಗಿ ಕುಡಿಯುವ ನೀರಿನ ಸಮಸ್ಯೆ ಎಲ್ಲೆಲ್ಲಿದೆ ಎಂದು ಅಧಿಕಾರಿಗಳು ಮಾಹಿತಿ ಕಲೆ ಹಾಕಿ ಸಮಸ್ಯೆ ಪರಿಹರಿಸುವ ಕೆಲಸ ಮಾಡಬೇಕು ಎಂದರು.

ನಿರ್ಣಯ: ಪಶು ಮತ್ತು ಬಿಸಿಎಂ ಇಲಾಖೆ ಅಧಿಕಾರಿಗಳು ಶಾಸಕರ ಕೆಡಿಪಿ ಸಭೆಗೆ ಪದೇಪದೆ ಗೈರಾಗುತ್ತಿದ್ದು, ಅವರಿಗೆ ನೋಟಿಸ್‌ ನೀಡಬೇಕು. ತಾಲೂಕಿನಲ್ಲಿ ಸಿಬ್ಬಂದಿಗಳ ಕೊರತೆ ಇರುವುದರಿಂದ ಜನಸಾಮಾನ್ಯರ ಕೆಲಸಕ್ಕೆ ತೊಡಕುಂಟಾಗುತ್ತದೆ. ಹಾಗಾಗಿ ಜಿಲ್ಲಾಡಳಿತ ಕೇಂದ್ರಕ್ಕೆ ಯಾವ ಅಕಾರಿ ಹಾಗೂ ಸಿಬ್ಬಂದಿಗಳನ್ನು ನಿಯೋಜಿಸಬಾರದು. ಕಳಸ ಹೋಬಳಿ ಮಾವಿನಕೆರೆ ಗ್ರಾಮದಲ್ಲಿ 10 ಎಕರೆ ಸೋಶಿಯಲ್‌ ಫಾರೆಸ್ಟ್‌ ಇಲಾಖೆ ಅಕೇಶಿಯಾ ಮರಗಳನ್ನು ತೆರವುಗೊಳಿಸಿ ನಿವೇಶನಕ್ಕಾಗಿ ಕಾಯ್ದಿರಿಸಬೇಕು ಸೇರಿದಂತೆ ವಿವಿಧ ಕಾರ್ಯಗಳು ನಡೆಯುವ ಹಾಗೂ ಕೈಗೊಳ್ಳುವ ಬಗ್ಗೆ ಸಭೆಯಲ್ಲಿ ನಿರ್ಣಯಿಸಲಾಯಿತು.

ಜಿಲ್ಲಾ ಪಂಚಾಯತ್‌ ಸದಸ್ಯರಾದ ಪ್ರಭಾಕರ್‌, ಸುಧಾ ಯೋಗೇಶ್‌, ಅಮಿತಾ ಮುತ್ತಪ್ಪ, ತಾಪಂ ಉಪಾಧ್ಯಕ್ಷೆ ಸವಿತಾ ರಮೇಶ್‌, ತಾಪಂ ಇಒ ಎಂ. ವೆಂಕಟೇಶ್‌, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Chikkamagaluru: 5 ವರ್ಷದ ಮಗು ಮೇಲೆ ಬೀದಿ ನಾಯಿ ದಾಳಿ

8

Chikkamagaluru: ಪ್ರವಾಸಕ್ಕೆ ಬಂದಿದ್ದ ಶಾಲಾ ಮಕ್ಕಳ ವ್ಯಾನ್ ಪಲ್ಟಿ; ಗಾಯ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.