Chikkamagaluru; ವೈಯಕ್ತಿಕ ಏನೇ ಇದ್ದರೂ ಪಕ್ಷದ ನಿಲುವಿಗೆ ಬದ್ಧ: ವೈಎಸ್ ವಿ ದತ್ತ
Team Udayavani, Jan 24, 2024, 1:20 PM IST
ಚಿಕ್ಕಮಗಳೂರು: ಪಕ್ಷದ ತೀರ್ಮಾನ ಹಾಗೂ ಪಕ್ಷದ ಅಸ್ತಿತ್ವ ಹಿನ್ನೆಲೆ ಬಿಜೆಪಿಯೊಂದಿಗೆ ಜೆಡಿಎಸ್ ಹೊಂದಾಣಿಕೆ ನಿಲುವಿಗೆ ಬದ್ಧನಾಗಿದ್ದೇನೆ ಎಂದು ಮಾಜಿ ಶಾಸಕ ವೈಎಸ್ ವಿ ದತ್ತ ಹೇಳಿದರು.
ಬುಧವಾರ ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡರು ಹಾಗೂ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ, ಜೆಡಿಎಸ್ ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರು ಎಲ್ಲರೂ ಚರ್ಚಿಸಿ ಪಕ್ಷದ ಅಸ್ತಿತ್ವದ ಹಿನ್ನೆಲೆ ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ತೀರ್ಮಾನ ಮಾಡಿದ್ದಾರೆ. ನಮ್ಮ ವೈಯಕ್ತಿಕ ನಿಲುವು ಏನೇ ಇದ್ದರೂ ಪಕ್ಷದ ತೀರ್ಮಾನಕ್ಕೆ ಬದ್ಧರಾಗಿದ್ದೇವೆ ಎಂದು ಹೇಳಿದರು.
2006ರಲ್ಲಿ ಇದೇ ಪ್ರಶ್ನೆ ಉದ್ಭವವಾಗಿತ್ತು. ಎಚ್.ಡಿ.ಕುಮಾರಸ್ವಾಮಿ ಅವರು ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡು ಮುಖ್ಯಮಂತ್ರಿಯಾಗಿ ಯಶಸ್ವಿ ಆಡಳಿತ ನೀಡಿದ್ದರು. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವ ಸಂಪುಟದಲ್ಲಿ ಇರುವ ಬಹುತೇಕರು ಎಚ್.ಡಿ.ಕುಮಾರಸ್ವಾಮಿ ಜತೆ ಇದ್ದರು ಎಂದರು.
ಇಂದು ವಿಚಿತ್ರ ರಾಜಕೀಯ ಸನ್ನಿವೇಶ ಸಂದಿಗ್ದ ಪರಿಸ್ಥಿತಿ ಎಲ್ಲರನ್ನು ಕಾಡುತ್ತಿದೆ. ಜಗದೀಶ್ ಶೆಟ್ಟರ್ ಕಟ್ಟ ಹಿಂದೂವಾದಿ ಅವರ ಇಡೀ ಕುಟುಂಬ ಬಿಜೆಪಿ ಪಕ್ಷದಲ್ಲಿ ಗುರುತಿಸಿಕೊಂಡಿತ್ತು. ಅವರು ಕಾಂಗ್ರೆಸ್ ಪಕ್ಷ ಸೇರಿದ್ದಾರೆ ಎಂದರು.
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷ ಹೊಂದಾಣಿಕೆ ಮಾಡಿಕೊಂಡಿದ್ದು ಪಕ್ಷದ ತೀರ್ಮಾನಕ್ಕೆ ಬದ್ಧನಾಗಿರುವುದಾಗಿ ತಿಳಿಸಿದರು.
ಜಿಲ್ಲಾ ಮಟ್ಟದಲ್ಲಿ ಪಕ್ಷ ಕಟ್ಟಲು ಸಾಧ್ಯವಾಗಿಲ್ಲವೆಂಬ ನೋವು ಇದೆ. ನನ್ನ ಕ್ಷೇತ್ರದಲ್ಲಿ ಹಣ, ಜಾತಿ ಬಲವಿಲ್ಲದಿದ್ದರೂ ನನ್ನನ್ನು ಶಾಸಕನನ್ನಾಗಿ ಜನರು ಆಯ್ಕೆ ಮಾಡಿದ್ದು, ನನ್ನ ಕ್ಷೇತ್ರದ ಜನತೆ ಜತೆ ಇರಬೇಕಿತ್ತು. ಅವರ ಸಮಸ್ಯೆಗಳಿಗೆ ಸ್ಪಂದಿಸಬೇಕಾದ ಅನಿವಾರ್ಯವಾಗಿದ್ದ ಹಿನ್ನೆಲೆ ಜಿಲ್ಲಾದ್ಯಂತ ಪಕ್ಷ ಕಟ್ಟಲು ಸಾಧ್ಯವಾಗಿಲ್ಲವೆಂದು ಬೇಸರ ವ್ಯಕ್ತಪಡಿಸಿದರು.
ಹಾಗೆಂದ ಮಾತ್ರಕ್ಕೆ ನಿರಾಸೆಗೊಳ್ಳುವ ಅಗತ್ಯವಿಲ್ಲ ಜೆಡಿಎಸ್ ಪಕ್ಷ ಜಿಲ್ಲೆಯಲ್ಲಿ ಮತ್ತೇ ಪುಟಿದೇಳಲಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ
Puttur: ಸ್ಕೂಲ್ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Kasaragod: ಫ್ಯಾಶನ್ ಗೋಲ್ಡ್ ವಂಚನೆ ಪ್ರಕರಣ: ಪೂಕೋಯ ತಂಙಳ್ ಮತ್ತೆ ಬಂಧನ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.