ಕೇಂದ್ರದಿಂದ ಇನ್ನೂ ಹೆಚ್ಚಿನ ಪರಿಹಾರ: ಸಿಎಂ
ಮನೆ-ಜಮೀನು ಕಳೆದುಕೊಂಡವರಿಗೆ ಪರ್ಯಾಯ ವ್ಯವಸ್ಥೆ•ಡಿಸಿ ವರದಿ ಆಧರಿಸಿ ಸೂಕ್ತ ಪರಿಹಾರ ಕಾರ್ಯ
Team Udayavani, Aug 28, 2019, 11:56 AM IST
ಚಿಕ್ಕಮಗಳೂರು: ಮೂಡಿಗೆರೆ ತಾಲೂಕು ಮಲೆಮನೆ ಗ್ರಾಮದಲ್ಲಿ ಅತಿವೃಷ್ಟಿಯಿಂದ ಆಗಿರುವ ಹಾನಿಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವೀಕ್ಷಿಸಿದರು
ಚಿಕ್ಕಮಗಳೂರು: ರಾಜ್ಯದಲ್ಲಿ ಅತಿವೃಷ್ಟಿಯಿಂದ ಆಗಿರುವ ಹಾನಿಯನ್ನು ಕೇಂದ್ರ ತಂಡ ಈಗ ಪರಿಶೀಲಿಸುತ್ತಿದ್ದು, ವರದಿ ನೀಡಿದ ನಂತರ ಕೇಂದ್ರ ಸರಕಾರ ಇನ್ನೂ ಹೆಚ್ಚಿನ ಅನುದಾನ ನೀಡುವ ವಿಶ್ವಾಸವಿದೆ ಎಂದು ಮುಖ್ಯಮಮತ್ರಿ ಯಡಿಯೂರಪ್ಪ ಹೇಳಿದರು.
ಮೂಡಿಗೆರೆ ತಾಲೂಕಿನಲ್ಲಿ ಅತಿವೃಷ್ಟಿ ಯಿಂದ ಆದ ಹಾನಿ ವೀಕ್ಷಣೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆರೆ ಸಂತ್ರಸ್ತರಿಗೆ ಪರಿಹಾರ ಕಲ್ಪಿಸುವುದೇ ಸರಕಾರದ ಮೊದಲ ಆದ್ಯತೆಯಾಗಿದೆ. ಈ ನಿಟ್ಟಿನಲ್ಲಿ ಕೆಲವು ತಾತ್ಕಾಲಿಕ ಪರಿಹಾರ ಕಾರ್ಯ ಈಗಾಗಲೇ ಆರಂಭಿಸಲಾಗಿದೆ. ಪರಿಹಾರ ಕಾರ್ಯ ಕೈಗೊಳ್ಳಲು ಹಣದ ಕೊರತೆ ಇಲ್ಲ ಎಂದು ತಿಳಿಸಿದರು.
ಈ ಬಾರಿ ಅನೇಕ ರಾಜ್ಯಗಳಲ್ಲಿ ಅತಿವೃಷ್ಟಿಯಿಂದ ಹಾನಿಯಾಗಿದ್ದು, ರಾಜ್ಯದಲ್ಲಿ ಆಗಿರುವ ನಷ್ಟದ ಬಗ್ಗೆ ನಾನು ಮನವಿ ಮಾಡಿದ ನಂತರ ಕೇಂದ್ರ ಗೃಹ ಮಂತ್ರಿಗಳು ಒಂದು ತಂಡವನ್ನು ರಾಜ್ಯಕ್ಕೆ ಕಳುಹಿಸಿಕೊಟ್ಟಿದ್ದಾರೆ. ಆ ತಂಡ ಮೂರು ದಿನ ಎಲ್ಲ ಕಡೆ ಅಲ್ಲದಿದ್ದರೂ ಹೆಚ್ಚು ಅನಾಹುತ ಸಂಭವಿಸಿದ ಪ್ರದೇಶಗಳಿಗೆ ತೆರಳಿ ವೀಕ್ಷಣೆ ನಡೆಸಿದೆ. ಈ ತಂಡ ವರದಿ ನೀಡಿದ ನಂತರ ಕೇಂದ್ರ ಸರಕಾರದಿಂದ ಇನ್ನೂ ಹೆಚ್ಚಿನ ನೆರೆ ಪರಿಹಾರ ಸಿಗುವ ವಿಶ್ವಾಸವಿದೆ ಎಂದು ಹೇಳಿದರು.
ಸದ್ಯ ಕೇಂದ್ರ ಸರ್ಕಾರ ಏನು ಮಾಡಲಿದೆ ಎಂಬುದನ್ನು ಕಾಯುವುದಿಲ್ಲ. ಪೂರ್ಣ ನಾಶವಾಗಿರುವ ಮನೆ ನಿರ್ಮಾಣಕ್ಕೆ ರಾಜ್ಯ ಸರಕಾರದಿಂದ 5 ಲಕ್ಷ ರೂ. ನೀಡಲಾಗುತ್ತಿದೆ. ಮನೆ ದುರಸ್ತಿಗೆ ಒಂದು ಲಕ್ಷ ರೂ., ಅಂತಹ ಮನೆಗಳಲ್ಲಿ ವಾಸವಿರಲಾಗದಿದ್ದಲ್ಲಿ ತಾತ್ಕಾಲಿಕ ಶೆಡ್ ನಿರ್ಮಿಸಿಕೊಳ್ಳಲು 50 ಸಾವಿರ ರೂ. ಹಾಗೂ ಮನೆ ಮತ್ತು ಆಸ್ತಿ ಕಳೆದುಕೊಂಡು ಉಟ್ಟ ಬಟ್ಟೆಯಲ್ಲೇ ಬಂದಿರುವವರಿಗೆ 10 ಸಾವಿರ ರೂ. ತಾತ್ಕಾಲಿಕವಾಗಿ ನೀಡುವ ತೀರ್ಮಾನ ಕೈಗೊಳ್ಳಲಾಗಿದೆ. ರಾಜ್ಯದ ಎಲ್ಲ ನೆರೆ ಪೀಡಿತ ಜಿಲ್ಲೆಯ ಜಿಲ್ಲಾಧಿಕಾರಿಗಳು ಇದನ್ನು ಕಾರ್ಯಗತಗೊಳಿಸುತ್ತಿದ್ದಾರೆ ಎಂದು ತಿಳಿಸಿದರು.
ಮನೆ ಕುಸಿದ ಜಾಗದಲ್ಲಿ ಮತ್ತೆ ಮನೆ ನಿರ್ಮಿಸುವುದು ಅಸಾಧ್ಯವಾದಲ್ಲಿ ಆ ಕುಟುಂಬಗಳನ್ನು ಅಲ್ಲಿಂದ ಸ್ಥಳಾಂತರಿ ಸಲಾಗುವುದು. ಅಲ್ಲದೇ, ಬೇರೆ ಜಾಗದಲ್ಲಿ ರೈತರಿಂದ ಭೂಮಿ ಖರೀದಿಸಿ ಅಲ್ಲಿ ಮನೆಗಳನ್ನು ಕಟ್ಟಬೇಕಾಗಿದೆ ಎಂದರು.
ಸಂಪೂರ್ಣ ಸಮೀಕ್ಷೆಯ ನಂತರ ರಾಜ್ಯದ ಯಾವ ಪ್ರದೇಶದಲ್ಲಿ ಎಷ್ಟು ಹಾನಿಯಾಗಿದೆ ಎಂಬ ಅಂದಾಜು ಸಿಗಲಿದೆ. ವಾಸ ಮಾಡಲು ಮನೆ ನಿರ್ಮಿಸುವುದೇ ಸರಕಾರದ ಮೊದಲ ಆದ್ಯತೆಯಾಗಿದ್ದು, ನಂತರ ತೋಟ, ಗದ್ದೆ ಕಳೆದುಕೊಂಡಿರುವವರಿಗೆ ಬದಲಿ ಭೂಮಿ ನೀಡುವ ಬಗ್ಗೆ ಗಮನ ನೀಡಲಾಗುವುದು ಎಂದು ತಿಳಿಸಿದರು.
ಕಾಫಿ ತೋಟ, ಗದ್ದೆ, ಮನೆ ಹಾಳಾಗಿವೆ, ಸೇತುವೆಗಳು ಕೊಚ್ಚಿ ಹೋಗಿವೆ. ರಸ್ತೆಗಳು ನಾಶವಾಗಿವೆ. ಇದಕ್ಕೆ ಸಂಬಂಧಿಸಿ ಎಲ್ಲ ಇಲಾಖೆಗಳಿಂದ ಅಗತ್ಯ ವರದಿ ತರಿಸಿಕೊಳ್ಳಲಾಗುತ್ತಿದೆ. ಎಲ್ಲ ಮಾಹಿತಿ ಪಡೆದು ರಾಜ್ಯಾದ್ಯಂತ ಪರಿಹಾರ ಕಾರ್ಯ ಕೈಗೊಳ್ಳಲಾಗುವುದು ಎಂದರು.
ಅಂದಾಜು 30 ಸಾವಿರ ಕೋಟಿ: ರಾಜ್ಯದ ನೆರೆ ಹಾಗೂ ಅತಿವೃಷ್ಟಿ ನಷ್ಟ 30,000 ಕೋಟಿ ರೂ. ಎಂದು ಅಂದಾಜು ಮಾಡಲಾಗಿದೆ. ಕೇಂದ್ರ ಸರ್ಕಾರ ಎಷ್ಟು ಪರಿಹಾರ ಕೊಡಲಿದೆಯೋ ಗೊತ್ತಿಲ್ಲ. ಕಳೆದ ವಾರ ದೆಹಲಿಗೆ ಹೋಗಿ ಗೃಹ ಮಂತ್ರಿಗಳ ಬಳಿ ಪರಿಸ್ಥಿತಿ ವಿವರಿಸಿ ಹೆಚ್ಚಿನ ಪರಿಹಾರಕ್ಕೆ ಮನವಿ ಮಾಡಿರುವೆ. ಅವರು ಸಹ ರಾಜ್ಯದ ಕೆಲವು ಕಡೆ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ. ರಾಜ್ಯದಲ್ಲಿ ಎಷ್ಟು ಅನಾಹುತ ಆಗಿದೆ ಎನ್ನುವುದು ಅವರಿಗೆ ಮನವರಿಕೆಯಾಗಿದೆ. ಇನ್ನೊಂದು ಸಲ ಸಮೀಕ್ಷೆ ಮಾಡಿಸಬೇಕಾದಲ್ಲಿ ಮತ್ತೂಂದು ತಂಡವನ್ನು ಕಳುಹಿಸಲು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದರು.
ನೆರೆ ಮತ್ತು ಬರ ಪರಿಹಾರ ಸ್ಥಿತಿ ಬಗ್ಗೆ ಅಧಿವೇಶನ ಕರೆಯಲು ಮಾಜಿ ಮುಖ್ಯಮಂತ್ರಿ ಎಸ್. ಸಿದ್ದರಾಮಯ್ಯ ಒತ್ತಾಯಿಸಿದ್ದಾರಲ್ಲ ಎಂಬ ಪ್ರಶ್ನೆಗೆ, ಮೊದಲು ಎಲ್ಲ ಕಡೆ ಹೋಗಿ ಪರಿಸ್ಥಿತಿ ಅರಿತು ಬಂದ ನಂತರ ಆ ಬಗ್ಗೆ ಯೋಚಿಸುವುದಾಗಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು
Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್ ಫಿಕ್ಸ್
BGT 2024: ಪರ್ತ್ ನಲ್ಲಿ ಪಲ್ಟಿ ಹೊಡೆದ ಆಸೀಸ್: ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ
IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್
ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.