ಚುನಾವಣಾ ಕರ್ತವ್ಯ ಸಮರ್ಥವಾಗಿ ನಿಭಾಯಿಸಿ
ಒಂದು ವಾರ್ಡ್ ಮತದಾರರು ಇನ್ನೊಂದು ವಾರ್ಡ್‌ಗೆ ಹೋಗಿ ಮತ ಹಾಕದಂತೆ ಎಚ್ಚರ ವಹಿಸಿ
Team Udayavani, May 5, 2019, 1:03 PM IST
ಚಿಕ್ಕಮಗಳೂರು: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್ ಮಾತನಾಡಿದರು.
ಚಿಕ್ಕಮಗಳೂರು: ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಚುನಾವಣಾ ಆಯೋಗವು ಚುನಾವಣೆಗೆ ದಿನಾಂಕ ಘೋಷಣೆ ಮಾಡಿದ್ದು, ಚುನಾವಣಾ ಕರ್ತವ್ಯಕ್ಕೆ ನೇಮಕವಾಗಿರುವ ಅಧಿಕಾರಿಗಳು ಚುನಾವಣಾ ಕರ್ತವ್ಯವನ್ನು ಕಟ್ಟುನಿಟ್ಟಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ನ್ಯಾಯಾಲಯದ ಸಭಾಂಗಣದಲ್ಲಿ ನಡೆದ ಜಿಲ್ಲೆಯ ಕಡೂರು ಪುರಸಭೆ, ಮೂಡಿಗೆರೆ, ಕೊಪ್ಪ, ಶೃಂಗೇರಿ, ನರಸಿಂಹರಾಜಪುರ ಪಟ್ಟಣ ಪಂಚಾಯತ್‌ಗಳಿಗೆ ಚುನಾವಣಾ ಕರ್ತವ್ಯಕ್ಕೆ ನೇಮಕವಾಗಿರುವ ಅಧಿಕಾರಿಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮೇ. 9 ರಂದು ಕಡೂರು ಪುರಸಭೆ ಹಾಗೂ ಮೂಡಿಗೆರೆ, ಕೊಪ್ಪ, ಶೃಂಗೇರಿ, ನರಸಿಂಹರಾಜಪುರ ಪಟ್ಟಣ ಪಂಚಾಯತ್‌ಗಳಿಗೆ ಅಧಿಸೂಚನೆ ಪ್ರಕಟವಾಗಲಿದೆ. ಚುನಾವಣೆ ನಡೆಯುವ ಆಯಾ ಪುರಸಭೆ ಹಾಗೂ ಪಟ್ಟಣ ಪಂಚಾಯತ್‌ಗಳಲ್ಲಿ ಕರ್ತವ್ಯಕ್ಕೆ ನೇಮಕವಾಗಿರುವ ಆರ್‌ಒ ಮತ್ತು ಎಆರ್‌ಒಗಳ ಜವಾಬ್ದಾರಿಯು ಮಹತ್ವದ್ದಾಗಿದ್ದು, ಚುನಾವಣಾ ಆಯೋಗ ನೀಡಿರುವ ನಿರ್ದೇಶನಗಳನ್ನು ಚಾಚು ತಪ್ಪದೇ ಪಾಲಿಸುವಂತೆ ತಿಳಿಸಿದ ಅವರು, ಚುನಾವಣೆಯು ಶಾಂತಿಯುತವಾಗಿ ನಡೆಯಲು ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು ಎಂದರು.
ಅಪರ ಜಿಲ್ಲಾಧಿಕಾರಿ ಡಾ| ಕುಮಾರ್ ಮಾತನಾಡಿ, ಸ್ಥಳೀಯ ಸಂಸ್ಥೆಗಳ ಚುನಾವಣೆಯು ಮೊದಲು ಬ್ಯಾಲೆಟ್ ಪೇಪರ್‌ನಲ್ಲಿ ನಡೆಯುತ್ತಿತ್ತು. ಈ ಬಾರಿ ವಿದ್ಯುನ್ಮಾನ ಮತ ಯಂತ್ರಗಳ ಮೂಲಕ ನಡೆಯಲಿದೆ. ಇದರ ಕುರಿತಾಗಿ ಆರ್‌ಒ ಹಾಗೂ ಎಆರ್‌ಒ ಅವರು ಮತದಾರರಲ್ಲಿ ಜಾಗೃತಿ ಮೂಡಿಸುವುದಲ್ಲದೆ ಚುನಾವಣಾ ಕರ್ತವ್ಯಕ್ಕೆ ಸ್ಥಳೀಯ ಅಧಿಕಾರಿಗಳನ್ನು ನೇಮಿಸದಂತೆ ಎಚ್ಚರ ವಹಿಸಬೇಕು ಎಂದರು.
ಒಂದು ವಾರ್ಡ್‌ನ ಮತದಾರರು ಇನ್ನೊಂದು ವಾರ್ಡ್‌ಗೆ ಹೋಗಿ ಮತ ಹಾಕದಂತೆ ಎಚ್ಚರ ವಹಿಸಿಬೇಕು. ಆದ್ದರಿಂದ ಆಯಾ ವ್ಯಾಪ್ತಿಯ ಮುನ್ಸಿಪಾಲ್ ಬಿಲ್ ಕಲೆಕ್ಟರ್‌ಗಳನ್ನು ಚುನಾವಣಾ ಕೆಲಸಕ್ಕೆ ಬಳಸಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮೀಸಲಾತಿಗೆ ಅನುಗುಣವಾಗಿ ಚುನಾವಣೆ ನಡೆಯುವುದರಿಂದ ಇದನ್ನು ಅರಿತು ಅಧಿಕಾರಿಗಳು ಮುನ್ನೆಚ್ಛರಿಕೆಯಿಂದ ಕಾರ್ಯ ನಿರ್ವಹಿಸಬೇಕು ಹಾಗೂ ಪೋಲಿಂಗ್ ಬೂತ್‌ಗಳನ್ನು ಆರ್‌ಒ ಮತ್ತು ಎಆರ್‌ಒ ಮಾಹಿತಿ ಪಡೆದು ಹೊಸ ಮತದಾರರ ಪಟ್ಟಿಯನ್ನು ಸಿದ್ಧತೆ ಮಾಡಿ ಅದನ್ನು ಪರಿಶೀಲಿಸಬೇಕು ಎಂದು ತಿಳಿಸಿದರು.
ನಾಮಪತ್ರಗಳನ್ನು ಆರ್‌ಒಗಳು ಕುಲಂಕುಶವಾಗಿ ಪರಿಶೀಲಿಸಬೇಕು. ಅರೆಕಾಲಿಕ ನ್ಯಾಯಾಧೀಶನಂತೆ ಯಾವುದೇ ಪಕ್ಷಪಾತವಿಲ್ಲದೆ ಚುನಾವಣಾ ಕರ್ತವ್ಯ ನಿರ್ವಹಿಸಬೇಕು ಎಂದು ಸಲಹೆ ನೀಡಿದರು. ಸಭೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನೇಮಕವಾಗಿರುವ ಆರ್‌ಒ ಹಾಗೂ ಎಆರ್‌ಒಗಳು ಉಪಸ್ಥಿತರಿದ್ದರು.
ಮೇ. 9 ರಂದು ಕಡೂರು ಪುರಸಭೆ ಹಾಗೂ ಮೂಡಿಗೆರೆ, ಕೊಪ್ಪ, ಶೃಂಗೇರಿ, ನರಸಿಂಹರಾಜಪುರ ಪಟ್ಟಣ ಪಂಚಾಯತ್‌ಗಳಿಗೆ ಅಧಿಸೂಚನೆ ಪ್ರಕಟವಾಗಲಿದೆ. ಚುನಾವಣೆ ನಡೆಯುವ ಆಯಾ ಪುರಸಭೆ ಹಾಗೂ ಪಟ್ಟಣ ಪಂಚಾಯತ್‌ಗಳಲ್ಲಿ ಕರ್ತವ್ಯಕ್ಕೆ ನೇಮಕವಾಗಿರುವ ಆರ್‌ಒ ಮತ್ತು ಎಆರ್‌ಒಗಳ ಜವಾಬ್ದಾರಿಯು ಮಹತ್ವದ್ದಾಗಿದ್ದು, ಚುನಾವಣಾ ಆಯೋಗ ನೀಡಿರುವ ನಿರ್ದೇಶನಗಳನ್ನು ಚಾಚು ತಪ್ಪದೇ ಪಾಲಿಸಬೇಕು.
•ಡಾ| ಬಗಾದಿ ಗೌತಮ್, ಜಿಲ್ಲಾಧಿಕಾರಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.