ತಂಬಾಕು ಉತ್ಪನ್ನದಿಂದ ದೂರವಿರಿ
ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಭೆಯಲ್ಲಿ ಡಿಸಿ ಡಾ| ಬಗಾದಿ ಗೌತಮ್ ಸಲಹೆ
Team Udayavani, Sep 11, 2019, 3:17 PM IST
ಚಿಕ್ಕಮಗಳೂರು: ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಮನ್ವಯ ಸಮಿತಿಯ ಎರಡನೇ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಚಿಕ್ಕಮಗಳೂರು: ಮಾನಸಿಕ ಹಾಗೂ ದೈಹಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವಂತಹ ತಂಬಾಕು ಉತ್ಪನ್ನ ಸೇವನೆಯಿಂದ ಪ್ರತಿಯೊಬ್ಬರೂ ದೂರವಿರಬೇಕೆಂದು ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್ ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿಯ ಎರಡನೇ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ತಂಬಾಕು ಉತ್ಪನ್ನಗಳಲ್ಲಿ 4 ಸಾವಿರಕ್ಕೂ ಹೆಚ್ಚು ರಾಸಾಯನಿಕ ಸಂಯುಕ್ತಗಳಿದ್ದು, ಇವುಗಳ ಸೇವನೆಯಿಂದ ಮಾರಕ ರೋಗಗಳಾದಂತಹ ಕ್ಯಾನ್ಸರ್, ಹೃದಯ ಸಂಬಂಧಿ ಕಾಯಿಲೆಗಳು ಬರುವ ಸಾಧ್ಯತೆಗಳಿವೆ. ಇವುಗಳಿಂದ ದೂರವಿದ್ದಲ್ಲಿ ಮಾತ್ರ ಉತ್ತಮ ಆರೋಗ್ಯ ಹೊಂದಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಶಾಲಾ-ಕಾಲೇಜು ಆವರಣದ ಸುತ್ತಮುತ್ತಲಿನ ಅಂಗಡಿ- ಮುಂಗಟ್ಟುಗಳಲ್ಲಿ ಅಪ್ರಾಪ್ತರಿಗೆ ತಂಬಾಕು ಉತ್ಪನ್ನಗಳ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ಇವುಗಳನ್ನು ಉಲ್ಲಂಘಿಸಿದಲ್ಲಿ ಅಂತಹ ಅಂಗಡಿ ಮಾಲಿಕರ ಪರವಾನಗಿಯನ್ನು ರದ್ದುಗೊಳಿಸಬೇಕೆಂದು ಸೂಚನೆ ನೀಡಿದರು.
ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್‌ಗಳ ವ್ಯಾಪ್ತಿಯ ಉದ್ಯಮಿದಾರರಿಗೆ ಅಂಗಡಿ ಪರವಾನಗಿ ನೀಡುವಾಗ ಕೋಟ್ಪಾ ಕಾಯ್ದೆ ನಿಯಮಗಳಲ್ಲಿ ಕಡ್ಡಾಯವಾಗಿ ಷರತ್ತು ವಿಧಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಈಗಾಗಲೇ ಆಯ್ದ ಶಾಲೆಗಳಲ್ಲಿ ತಂಬಾಕು ಮುಕ್ತ ಶಾಲೆಗಳೆಂದು ಘೋಷಿಸಲು ಕ್ರಮ ಕೈಗೊಳ್ಳಲಾಗುವುದು. ವಿದ್ಯಾರ್ಥಿಗಳಿಗೆ ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಬೇಕೆ ತಿಳಿಸಿದರು.
ಧೂಮಪಾನ ವ್ಯಸನಿಗಳು ವ್ಯಸನದಿಂದ ದೂರವಾಗಲು ಇಚ್ಛಿಸುವವರಿಗೆ ಅರಿವು ಮೂಡಿಸಿ ಅಗತ್ಯ ಚಿಕಿತ್ಸಾ ಸೌಲಭ್ಯಗಳನ್ನು ಜಿಲ್ಲಾಸ್ಪತ್ರೆಯ ಜಿಲ್ಲಾ ತಂಬಾಕು ವ್ಯಸನ ಮುಕ್ತ ಕೇಂದ್ರದ ಮೂಲಕ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ| ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ| ಪ್ರಭು, ಜಿಲ್ಲಾ ತಂಬಾಕು ನಿಯಂತ್ರಣ ಕೇಂದ್ರದ ಕಾರ್ಯಕ್ರಮಾಧಿಕಾರಿ ಎಚ್.ಕೆ.ಮಂಜುನಾಥ್, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಲಹೆಗಾರ ದಿನೇಶ್ ಹಾಗೂ ಮತ್ತಿತರರ ಜಿಲ್ಲಾ ಮಟ್ಟದ ಅನುಷ್ಠಾನ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!
Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?
MUST WATCH
ಹೊಸ ಸೇರ್ಪಡೆ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.