ಇಲಾಖೆಗಳ ಪ್ರಗತಿ ಶೂನ್ಯ: ಡಿಸಿ ಅಸಮಾಧಾನ
Team Udayavani, Jan 1, 2020, 5:53 PM IST
ಚಿಕ್ಕಮಗಳೂರು: ಗಿರಿಜನ ಉಪಯೋಜನೆಯಡಿ ಸರ್ಕಾರ ವಿವಿಧ ಇಲಾಖೆಗಳಿಗೆ ಸಾಕಷ್ಟು ಅನುದಾನ ಬಿಡುಗಡೆ ಮಾಡಿದ್ದು, ಪ್ರಗತಿ ಶೂನ್ಯವಾಗಿರುವ ಬಗ್ಗೆ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಅಸಮಾಧಾನ ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗಿರಿಜನ ಉಪಯೋಜನೆಯಡಿ ವಿವಿಧ ಇಲಾಖೆಗಳಿಗೆ ಒದಗಿಸಿರುವ ಅನುದಾನದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರ ರೈತರಿಗೆ ಮತ್ತು ಸಾಮಾನ್ಯ ಜನರಿಗಾಗಿ ಜಾರಿಗೆ ತಂದಿರುವ ಯೋಜನೆಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವಲ್ಲಿ ಇಲಾಖೆಯ ಅಧಿಕಾರಿಗಳು ಎಡವಿರುವುದರಿಂದ ಅನುದಾನವನ್ನು ಸಂಪೂರ್ಣವಾಗಿ ಬಳಕೆ ಮಾಡಿಕೊಳ್ಳಲು ಸಾಧ್ಯವಾಗಿಲ್ಲ ಎಂದರು.
ಅಲ್ಲದೇ ಜನರಲ್ಲಿ ಅರಿವು ಉಂಟಾಗಿ ಸರ್ಕಾರದ ಯೋಜನೆಗಳ ಉಪಯೋಗ ಪಡೆಯಲು ಮುಂದಾದರೂ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ವಿಳಂಬ ಮಾಡುತ್ತಿರುವುದು ಪ್ರಮುಖ ಕಾರಣ ಎಂದರು.
ಅಧಿಕಾರಿಗಳು ಜಿಲ್ಲೆಯಲ್ಲಿ ಸಂಚರಿಸಿ ಸ್ಥಳ ಪರಿಶೀಲನೆ ಮತ್ತು ಸಮೀಕ್ಷೆ ನಡೆಸಿ ಯಾವ ಭಾಗಕ್ಕೆ ಯಾವ ಯೋಜನೆಗಳು ಸೂಕ್ತ ಎಂಬುದನ್ನು ಮನಗಂಡು ಯೋಜನೆ ಅಳವಡಿಸಿಕೊಳ್ಳಲು ಮುಂದಾಗುವಂತೆ ಜನರಲ್ಲಿ ಅರಿವು ಮೂಡಿಸಬೇಕು ಎಂದು ಹೇಳಿದರು.
ತೋಟಗಾರಿಕಾ ಇಲಾಖೆಯವರು ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ, ಹನಿ ನೀರಾವರಿ ಮತ್ತು ತುಂತುರು ನೀರಾವರಿ ಯೋಜನೆಯನ್ನು ಅನುಷ್ಠಾನಗೊಳಿಸುವಲ್ಲಿ ಹಿಂದುಳಿದಿದ್ದು, ಮುಂದಿನ ಸಭೆಯೊಳಗೆ ಪ್ರಗತಿಯ ವರದಿ ನೀಡಬೇಕು ಎಂದು ತಿಳಿಸಿದರು. ಕೃಷಿ ಇಲಾಖೆಯು ಎಸ್.ಇ.ಪಿ.ಟಿ.ಎಸ್.ಪಿ ಯೋಜನೆಯಡಿ ಜಾರಿಯಾದ ಮತ್ತು ಜನಸಾಮಾನ್ಯರಿಗೆ ಅನುಕೂಲಕರವಾದ ಎಲ್ಲಾ ಕಾರ್ಯಕ್ರಮಗಳನ್ನು ಸ್ಥಗಿತಗೊಳಿಸಿದಂತೆ ಕಾಣುತ್ತಿದ್ದು, ಸರ್ಕಾರದಿಂದ ಬಿಡುಗಡೆಯಾದ ರೂ.106.68 ಲಕ್ಷ ಅನುದಾನದಲ್ಲಿ ಶೇ.56 ರಷ್ಟು ಅನುದಾನವನ್ನು ಮಾತ್ರ ಬಳಕೆ ಮಾಡಿರುವುದು ಪ್ರಗತಿಯ ಮಿತಿಯನ್ನು ಸೂಚಿಸುತ್ತಿದೆ ಎಂದರು.
ಬುಡಕಟ್ಟು ಉಪಹಂಚಿಕೆಯಡಿ ಮೀನುಗಾರಿಕಾ ಇಲಾಖೆಗೆ 1.25 ಲಕ್ಷ ಅನುದಾನ ಬಿಡುಗಡೆಯಾಗಿದ್ದು, ಅನುದಾನ ಬಳಕೆಯಾಗಿಲ್ಲ. ಅಲ್ಲದೇ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದಲ್ಲಿ ಮುಖ್ಯಮಂತ್ರಿ ಸಡಕ್ ಯೋಜನೆ ಮತ್ತು ಜಿಲ್ಲಾ ಪಂಚಾಯತ್ ಅಭಿವೃದ್ಧಿ ಅನುದಾನದಲ್ಲಿ ಮಂಜೂರಾದ ಯೋಜನೆಗಳ ಕ್ರಿಯಾ ಯೋಜನೆಗಳನ್ನು ಅನುಮೋದನೆಗಾಗಿ ಜಿಲ್ಲಾ ಪಂಚಾಯತ್‌ಗೆ ಸಲ್ಲಿಸಲಾಗಿದ್ದು, ಅನುಮೋದನೆ ದೊರೆತ ನಂತರ ಕಾಮಗಾರಿಗಳನ್ನು ಪ್ರಾರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿಗೆ ತಿಳಿಸಿದರು.
ಸಾಮಾಜಿಕ ಅರಣ್ಯ ಇಲಾಖೆ ಅಧಿಕಾರಿಗಳು ಬುಡಕಟ್ಟು ಉಪಹಂಚಿಕೆಯಡಿ ರೂ. 1 ಕೋಟಿ ವೆಚ್ಚದಲ್ಲಿ ಕೈಗೊಂಡ 6 ಕಾಮಗಾರಿಗಳನ್ನು ಪೂರ್ಣಗೊಳಿಸಿದೆ ಎಂದು ಸಭೆಗೆ ತಿಳಿಸಿದರು. ಪ್ರಗತಿಯಲ್ಲಿ ಹಿಂದುಳಿದಿರುವ ಮತ್ತು ಪ್ರಗತಿ ಶೂನ್ಯವಾಗಿರುವ ಇಲಾಖೆಗಳು ಮುಂದಿನ ಪ್ರಗತಿ ಪರಿಶೀಲನಾ ಸಭೆಯೊಳಗಾಗಿ ಸರ್ಕಾರ ನೀಡಿರುವ ಎಲ್ಲಾ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಬೇಕು ಎಂದು ಸೂಚಿಸಿದರು.
ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಡಾ.ಪ್ರಭು, ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಪ್ರಕಾಶ್ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ; ಪ್ರಕರಣ ದಾಖಲು
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
Egg Thrown Case: 100-150 ಜನರಿಂದ ನನ್ನ ಮೇಲೆ ದಾಳಿ: ಶಾಸಕ ಮುನಿರತ್ನ ದೂರು
Congress: ಪಕ್ಷದೊಳಗೆ ಹೊಸ ನಾಯಕತ್ವಕ್ಕೆ ಅವಕಾಶ ಸಿಗಬೇಕು: ಮಲ್ಲಿಕಾರ್ಜುನ ಖರ್ಗೆ
ಉಳ್ಳಾಲದ ಸಿಂಧೂರ ಈಗ ವಿಜ್ಞಾನ ಸಿಂಧೂರ !
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್‌ಮೇಕಿಂಗ್ ಆಫ್ ಡಾ.ಸಿಂಗ್
Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ; ಪ್ರಕರಣ ದಾಖಲು
New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್; ಕುಟುಂಬದ 4 ಫೌಂಡೇಶನ್ ಆಸ್ತಿ ಹಂಚಿಕೆ
Tribute Dr.Singh: ಡಾ.ಸಿಂಗ್ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.