ಮಲೆನಾಡಿನ ವಿವಿಧೆಡೆ ಆಲಿಕಲ್ಲು ಮಳೆ
ಆಲಿಕಲ್ಲು ಮಳೆ ಸುರಿದಿದ್ದರಿಂದ ಕಾಫಿ-ಅಡಕೆ-ಬಾಳೆಹಣ್ಣು-ಮಾವಿಗೆ ತೊಂದರೆ: ಆತಂಕ
Team Udayavani, Apr 24, 2019, 12:20 PM IST
ಬಾಳೆಹೊನ್ನೂರು: ಚರಂಡಿ ಮುಚ್ಚಿದ್ದರಿಂದ ಮಳೆ ನೀರು ಜೇಸಿ ವೃತ್ತದಲ್ಲಿ ರಸ್ತೆ ಮೆಲೆಯೇ ಹರಿಯುತ್ತಿರುವುದು
ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡಿನ ಕೆಲಭಾಗಗಳಲ್ಲಿ ಮಂಗಳವಾರ ಮಧ್ಯಾಹ್ನ ಆಲಿಕಲ್ಲಿನೊಂದಿಗೆ ಉತ್ತಮ ಮಳೆಯಾಗಿದ್ದು, ಬಿಸಿಲ ಬೇಗೆಯಿಂದ ತತ್ತರಿಸಿದ್ದ ಜನತೆ ಸಂತಸಗೊಂಡಿದ್ದಾರೆ.
ಮೂಡಿಗೆರೆ ತಾಲೂಕಿನ ಕಳಸ, ಹೊರನಾಡು ಭಾಗಗಳಲ್ಲಿ ಹಾಗೂ ಬಾಳೆಹೊನ್ನೂರಿನ ಸುತ್ತಲ ಪ್ರದೇಶಗಳಲ್ಲಿ ಬೆಳಗಿನಿಂದಲೂ ಮಳೆಯ ವಾತಾವರಣವಿತ್ತು. ಮಧ್ಯಾಹ್ನದ ನಂತರ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಆಲಿಕಲ್ಲಿನೊಂದಿಗೆ ಉತ್ತಮ ಮಳೆ ಸುರಿಯಿತು.
ಕಾಫಿಗೆ ತೊಂದರೆ: ಈ ಭಾಗಗಳಲ್ಲಿ ನಿರಂತರವಾಗಿ ಆಲಿಕಲ್ಲು ಮಳೆ ಸುರಿಯುತ್ತಿರುವುದರಿಂದಾಗಿ ಕಾಫಿ, ಅಡಕೆ, ಬಾಳೆಹಣ್ಣು, ಮಾವಿಗೆ ತೊಂದರೆಯಾಗಲಿದೆ ಎಂದು ಹೇಳಲಾಗುತ್ತಿದೆ. ಕೆಲವು ಕಾಫಿ ತೋಟಗಳಲ್ಲಿ ಈಗಾಗಲೆ ಹೂವು ಅರಳಿದ್ದು, ಅವುಗಳಿಗೆ ತೊಂದರೆಯಾಗುವುದಿಲ್ಲ. ಆದರೆ, ಕೆಲವು ತೋಟಗಳಲ್ಲಿ ಇದೀಗ ಕಾಫಿ ಮೊಗ್ಗಾಗುತ್ತಿತ್ತು. ಅಂತಹ ತೋಟಗಳಲ್ಲಿ ಮೊಗ್ಗಿನ ಮೇಲೆ ಆಲಿಕಲ್ಲು ಬಿದ್ದಲ್ಲಿ ಅದು ಉದುರಿ ಹೋಗುವುದರಿಂದಾಗಿ ನಷ್ಠವಾಗುತ್ತದೆ ಎಂದು ಬೆಳೆಗಾರರು ಹೇಳುತ್ತಿದ್ದಾರೆ.
ಉಳಿದಂತೆ ಚಿಕ್ಕಮಗಳೂರು ಮತ್ತು ಶೃಂಗೇರಿ ತಾಲೂಕುಗಳಲ್ಲಿ ಮಧ್ಯಾಹ್ನದ ನಂತರ ಮೋಡ ಮುಸುಕಿದ ವಾತಾವರಣವಿತ್ತು. ಶೃಂಗೇರಿ ತಾಲೂಕಿನ ವಿವಿಧೆಡೆಗಳಲ್ಲಿ ಗುಡುಗು, ಸಿಡಿಲು ಆರಂಭವಾಗುತ್ತಲ್ಲದೆ, ಭಾರೀ ಗಾಳಿಯೂ ಬೀಸುತ್ತಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
MUST WATCH
ಹೊಸ ಸೇರ್ಪಡೆ
BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.