ಸಂತ ಜೋಸೆಫರ ಶಿಕ್ಷಣ ಸಂಸ್ಥೆ ಅಧ್ಯಕ್ಷರ ವಿರುದ್ಧ ಕೇಸ್
ಸಂಸ್ಥೆಗೆ ಸೇರಿದ ನಿವೇಶನ ಅಕ್ರಮ ಮಾರಾಟ ಮಾಡಲು ಯತ್ನ: ಮೈಕಲ್ ಆರೋಪ
Team Udayavani, Aug 30, 2019, 3:35 PM IST
ಚಿಕ್ಕಮಗಳೂರು: ಎಫ್‌ಐಆರ್ ಪ್ರತಿ.
ಚಿಕ್ಕಮಗಳೂರು: ಸಂತ ಜೋಸೆಫರ ಎಜುಕೇಷನಲ್ ಸೊಸೈಟಿಗೆ ಸೇರಿದ ನಿವೇಶನವನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸಿದ ಹಿನ್ನೆಲೆಯಲ್ಲಿ ಸೊಸೈಟಿ ಅಧ್ಯಕ್ಷ ಬಿಷಪ್ ಟಿ.ಆಂತೋನಿ ಸ್ವಾಮಿ ಹಾಗೂ ಸೊಸೈಟಿ ಮಾಜಿ ಉಪಾಧ್ಯಕ್ಷ ಫಾದರ್ ಎ.ಶಾಂತರಾಜ್ ವಿರುದ್ಧ ನ್ಯಾಯಾಲಯ ಆದೇಶ ಮೇರೆಗೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಸೊಸೈಟಿ ಆಡಳಿತ ಮಂಡಳಿ ಸದಸ್ಯ ಮೈಕಲ್ ಸದಾನಂದ ಬ್ಯಾಪ್ಟಿಸ್ಟ್ ತಿಳಿಸಿದರು.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಸಂತ ಜೋಸೆಫರ ಎಜುಕೇಷನಲ್ ಸೊಸೈಟಿಗೆ ಸೇರಿದ ಸಂತ ಜೋಸೆಫರ ಬಾಲಕರ ಪ್ರೌಢಶಾಲೆ ಹಾಸ್ಟೆಲ್ ಕಟ್ಟಡ ನಿರ್ಮಾಣಕ್ಕೆ ಮೀಸಲಿಟ್ಟಿದ್ದ ನಿವೇಶನವನ್ನು ಅಕ್ರಮವಾಗಿ ಮಾರಾಟ ಮಾಡುವ ಯತ್ನ ನಡೆದಿತ್ತು ಎಂದು ತಿಳಿಸಿದರು.
ನಗರದ ಜ್ಯೋತಿನಗರ ಬಡಾವಣೆಯ ಕೆ.ಎಂ. ರಸ್ತೆಯ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಸ್ಥಾಪನೆಗೊಂಡ ಸಂತ ಜೋಸೆಫರ ಬಾಲಕರ ಪ್ರೌಢಶಾಲೆ ಕಟ್ಟಡವಿರುವ ಜಮೀನು ಸುಮಾರು 5 ಎಕರೆ ವಿಸ್ತೀರ್ಣ ಹೊಂದಿದೆ. ಶಾಲೆಯ ಈ ಕಟ್ಟಡ ಪಕ್ಕದ ಕುಪ್ಪೇನಹಳ್ಳಿ ಬಡಾವಣೆಗೆ ಸಾಗುವ ರಸ್ತೆ ಬದಿ ಕೆ.ಎಂ. ರಸ್ತೆ ಪಕ್ಕ 20 ಗುಂಟೆ ನಿವೇಶನವನ್ನು ಬಡ ಮಕ್ಕಳ ಶಿಕ್ಷಣಕ್ಕೆ ಅನುಕೂಲವಾಗಲೆಂದು 1984ರಲ್ಲಿ ಎಫ್.ಜಿ.ಎಚ್. ಫೆರ್ನಾಂಡಿಸ್ ಎಂಬುವರು ಹಾಸ್ಟೆಲ್ ಕಟ್ಟಡ ನಿರ್ಮಾಣಕ್ಕೆ ದಾನವಾಗಿ ಕೊಟ್ಟಿದ್ದರು. ಈ ನಿವೇಶನದ ಪಕ್ಕದಲ್ಲೇ ಶಾಲೆಯ ಕೌಂಪೌಂಡ್ ಒಳಭಾಗದಲ್ಲಿ 20 ಗುಂಟೆ ವಿಸ್ತೀರ್ಣದ ಮತ್ತೂಂದು ನಿವೇಶನವಿದ್ದು, ಈ ಎರಡೂ ನಿವೇಶನಗಳು ಪ್ರತ್ಯೇಕ ಷೆಡ್ಯೂಲ್ ಮತ್ತು ಸರಹದ್ದು ಹೊಂದಿವೆ. ಆಂತೋನಿ ಸ್ವಾಮಿ ಮತ್ತು ಶಾಂತರಾಜ್ ಅವರು ಪರಸ್ಪರ ಹೊಂದಾಣಿಕೆಯಿಂದ ಮಾರುಕಟ್ಟೆ ದರಕ್ಕಿಂತ ಕಡಿಮೆ ಬೆಲೆಗೆ ಮಾರಾಟ ಮಾಡಲು ಮುಂದಾಗಿದ್ದರು ಎಂದು ದೂರಿದರು.
ಈ ಹಿನ್ನೆಲೆಯಲ್ಲಿ ಶಾಲೆಗೆ ಸೇರಿದ ಜಾಗ ಉಳಿಸಿ ಮಕ್ಕಳ ಶಿಕ್ಷಣಕ್ಕೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ತಾವು ನ್ಯಾಯಾಲಯ ಮೊರೆ ಹೋಗಿದ್ದು, ವಿಚಾರಣೆ ನಡೆಸಿ ಪ್ರಕರಣ ದಾಖಲಿಸುವಂತೆ ಆದೇಶ ನೀಡಿತ್ತು. ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದರು. ಕ್ರೈಸ್ತ ಸಮುದಾಯದ ಮುಖಂಡರಾದ ಸಿಲ್ವಸ್ಟರ್ ಸಾಲ್ಡಾನ, ನೆಲ್ಸನ್ ಇತರರು ಸುದ್ದಿಗೋಷ್ಠಿಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
MUST WATCH
ಹೊಸ ಸೇರ್ಪಡೆ
Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು
BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.