ಆರ್ಥಿಕ ಗಣತಿ ಕಾರ್ಯ ಶ್ರದ್ಧೆಯಿಂದ ಮಾಡಿ

ಸಾಮಾನ್ಯ ಸೇವಾ ಕೇಂದ್ರಗಳ ಮೇಲ್ವಿಚಾರಕರಿಗೆ ಅಪರ ಜಿಲ್ಲಾಧಿಕಾರಿ ಡಾ| ಕುಮಾರ್‌ ಸಲಹೆ

Team Udayavani, Jun 15, 2019, 5:26 PM IST

15-June-38

ಚಿಕ್ಕಮಗಳೂರು: ನಗರದಲ್ಲಿ ಆಯೋಜಿಸಿದ್ದ ಆರ್ಥಿಕ ಗಣತಿದಾರರ ತರಬೇತಿ ಕಾರ್ಯಾಗಾರಕ್ಕೆ ಅಪರ ಜಿಲ್ಲಾಧಿಕಾರಿ ಡಾ|ಕುಮಾರ್‌ ಚಾಲನೆ ನೀಡಿದರು.

ಚಿಕ್ಕಮಗಳೂರು: ಆರ್ಥಿಕ ಗಣತಿ ಕಾರ್ಯವನ್ನು ಅರ್ಪಣಾ ಮನೋಭಾವದಿಂದ ಪರಿಣಾಮಕಾರಿಯಾಗಿ ಮಾಡಬೇಕೆಂದು ಅಪರ ಡೀಸಿ ಡಾ|ಕುಮಾರ್‌ ಸಾಮಾನ್ಯ ಸೇವಾ ಕೇಂದ್ರಗಳ ಮೇಲ್ವಿಚಾರಕರಿಗೆ ಸಲಹೆ ನೀಡಿದರು.

7ನೇ ಆರ್ಥಿಕ ಗಣತಿ ಹಿನ್ನೆಲೆಯಲ್ಲಿ ಕೇಂದ್ರ ಸಾಂಖ್ಯೀಕ ಮತ್ತು ಕಾರ್ಯಕ್ರಮ ಅನುಷ್ಠಾನ ಮಂತ್ರಾಲಯ ಹಾಗೂ ಶಿವಮೊಗ್ಗಾದ ರಾಷ್ಟ್ರೀಯ ಮಾದರಿ ಸಮೀಕ್ಷೆ ಕಚೇರಿ ನಗರದ ವಸಂತದತ್ತ ಸಭಾಂಗಣದಲ್ಲಿ ಸಾಮಾನ್ಯ ಸೇವಾ ಕೇಂದ್ರಗಳ ಮೇಲ್ವಿಚಾರಕರಿಗೆ ಶುಕ್ರವಾರ ಏರ್ಪಡಿಸಿದ್ದ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಹಿಂದಿನ ಎಲ್ಲಾ ಆರ್ಥಿಕ ಗಣತಿಯನ್ನು ಸರ್ಕಾರದ ತಳಮಟ್ಟದ ಅಧಿಕಾರಿಗಳಿಂದ ಮಾಡಿಸಲಾಗುತ್ತಿತ್ತು. ಅದರಿಂದ ಅವರಿಗೆ ಕೆಲಸದ ಹೊರೆ ಜಾಸ್ತಿಯಾಗಿ ಪರಿಣಾಮಕಾರಿಯಾಗಿ ಗಣತಿ ಮಾಡಲು ಸಾಧ್ಯ ವಾಗುತ್ತಿರಲಿಲ್ಲ. ಈ ಹಿನ್ನೆಲೆಯಲ್ಲಿ ಈ ಬಾರಿ ಖಾಸಗೀ ಸಹಭಾಗಿತ್ವದಲ್ಲಿ ನಡೆಸಲಾಗುತ್ತಿದೆ ಎಂದರು.

ಶ್ರದ್ಧೆಯಿಂದ ಕೆಲಸ ಮಾಡಿ: ಆರ್ಥಿಕ ಗಣತಿ ಕಾರ್ಯ ಪರಿಣಾಮಕಾರಿಯಾಗಿ ಆಗಬೇಕಾದರೆ ಶ್ರದ್ಧೆ ಮತ್ತುಆಸಕ್ತಿ ತೀರಾ ಅಗತ್ಯ. ಕಾಟಾಚಾರಕ್ಕಾಗಿ ಕಾರ್ಯನಿರ್ವ ಹಿಸಬಾರದು. ಯಾವುದೇ ಯೂನಿಟ್‌ಗಳನ್ನೂ ಬಿಡದೇ ಗಣತಿ ಮಾಡಬೇಕೆಂದು ಕಿವಿಮಾತು ಹೇಳಿದರು.

ಆರ್ಥಿಕ ಗಣತಿ ಅಭಿವೃದ್ಧಿಗೆ ಪೂರಕ: ಜನರನ್ನು ಪ್ರೀತಿ ಮತ್ತು ವಿಶ್ವಾಸದಿಂದ ಕಾಣುವ ಮೂಲಕ ಅವರಿಂದ ಆರ್ಥಿಕ ಮಾಹಿತಿಯನ್ನು ನಿಖರವಾಗಿ ಪಡೆದುಕೊಳ್ಳಬೇಕು. ದೇಶ ಆರ್ಥಿಕವಾಗಿ ಅಭಿವೃದ್ಧಿ ಹೊಂದುವ ನಿಟ್ಟಿನಲ್ಲಿ ಸರ್ಕಾರ ಕಾರ್ಯಕ್ರಮಗಳನ್ನು ಮತ್ತು ಯೋಜನೆಗಳನ್ನು ರೂಪಿಸಲು ಆರ್ಥಿಕ ಗಣತಿ ಅತ್ಯಂತ ಅಗತ್ಯ ಎಂದು ತಿಳಿಸಿದರು.

ಸಾಮಾನ್ಯ ಸೇವಾ ಕೇಂದ್ರಗಳ ಜಿಲ್ಲಾ ವ್ಯವಸ್ಥಾಪಕ ಸಿ.ಎನ್‌.ಹೇಮಂತ್‌ ಕುಮಾರ್‌ ಮಾತನಾಡಿ, ಆರ್ಥಿಕ ಗಣತಿ ಕಾರ್ಯ ಯಶಸ್ವಿಯಾಗಲು ಸಹಕರಿಸುವಂತೆ ಶಿಬಿರಾರ್ಥಿಗಳಿಗೆ ಮನವಿ ಮಾಡಿದರು. ತರಬೇತುದಾರ ಜಯಪ್ರಕಾಶ್‌, ಜಿಲ್ಲಾ ನೋಡಲ್ ಅಧಿಕಾರಿ ಉಪೇಂದ್ರ ಉಪಸ್ಥಿತರಿದ್ದರು. ಡಿ.ಕೆ.ಸೋಮಶೇಖರ್‌ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕರೀಗೌಡ ಸ್ವಾಗತಿಸಿ, ಸಹ ಸಾಂಖ್ಯೀಕ ಅಧಿಕಾರಿ ರಘು ವಂದಿಸಿದರು.

ಟಾಪ್ ನ್ಯೂಸ್

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Urwa: ಬಾಯ್ದೆರೆದ ಕಾಂಕ್ರೀಟ್‌ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

6

Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ

5

Udupi: ಜಿಲ್ಲೆಯ ಬ್ಲ್ಯಾಕ್‌ ಸ್ಪಾಟ್‌ 30ರಿಂದ 20ಕ್ಕೆ ಇಳಿಕೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

7

Urwa: ಬಾಯ್ದೆರೆದ ಕಾಂಕ್ರೀಟ್‌ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

6

Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ

5

Udupi: ಜಿಲ್ಲೆಯ ಬ್ಲ್ಯಾಕ್‌ ಸ್ಪಾಟ್‌ 30ರಿಂದ 20ಕ್ಕೆ ಇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.