ಜಿಲ್ಲಾದ್ಯಂತ ಯೋಗ ದಿನಾಚರಣೆ ಸಂಭ್ರಮ
•ಜಿಲ್ಲಾ ಕೇಂದ್ರ ಸೇರಿದಂತೆ ಎಲ್ಲಾ ತಾಲೂಕುಗಳಲ್ಲಿ ಸಾಮೂಹಿಕ ಯೋಗಾಭ್ಯಾಸ •ವಿವಿಧ ಭಂಗಿಗಗಳಲ್ಲಿ ತಾಲೀಮು
Team Udayavani, Jun 22, 2019, 11:25 AM IST
ಚಿಕ್ಕಮಗಳೂರು: ನಗರದ ಜಿಲ್ಲಾ ಒಕ್ಕಲಿಗರ ಸಮುದಾಯ ಭವನದಲ್ಲಿ ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ಯೋಗಾಸನ ಶಿಬಿರ ನಡೆಯಿತು.
ಚಿಕ್ಕಮಗಳೂರು: ಜಿಲ್ಲಾದ್ಯಂತ ಶುಕ್ರವಾರ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.
ಜಿಲ್ಲಾ ಕೇಂದ್ರದ ನಗರದ ಜಿಲ್ಲಾ ಒಕ್ಕಲಿಗರ ಸಮುದಾಯ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ ಹಾಗೂ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಸಮಿತಿಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಯೋಗಸ್ಥಿತಿಯಲ್ಲಿ ಸಾವಿರಾರು ಯೋಗಾಭ್ಯಾಸಿಗಳು ಕಾಡಾಸನ, ವೃಶ್ಚಿಕಾಸನ, ಪಾದ ಹಸ್ತಾಸನ, ಚಕ್ರಾಸನದ ಮೂಲಕ ನಿಂತು ದೇಹ ದಂಡಿಸಿದರೆ, ನಂತರ ಕುಳಿತು ಭದ್ರಾಸನ, ವಕ್ರಾಸನಗಳನ್ನು ಮಾಡಿದರು. ಪ್ರತಿ ಆಸನದ ಬಗ್ಗೆ ಸೂಕ್ತ ವಿವರಣೆ ನೀಡಿದ ಪ್ರಭೋದಿನಿ ಯೋಗ ಸಂಸ್ಥೆ ಮುಖ್ಯಸ್ಥ ಶಿವಪ್ಪ, ಆ ಆಸನಗಳು ನೀಡುವ ಉಪಶಮನಗಳ ಬಗ್ಗೆ ಮಾಹಿತಿ ನೀಡಿದರು.
ಮಲಗಿಕೊಂಡು ಮಾಡುವ ಮಕ್ರಾಸನ, ಭುಜಂಗಾಸನ, ಶಲಭಾಸನಗಳ ನಂತರ ಅಂಗಾತನಾಗಿ ಮಲಗಿ ಮಾಡುವ ಸೇತುಬಂಧಾಸನ, ಉತ್ತಾನಪಾದಾಸನ, ಪವನಮುಕ್ತಾಸನ ಪ್ರದರ್ಶಿಸಿ ಕೊನೆಗೆ ಶವಾಸನದ ಸ್ಥಿತಿಯಲ್ಲಿ ವಿಶ್ರಮಿಸಿಕೊಳ್ಳಲು ಹೇಳಲಾಯಿತು.
ಆಸನಗಳು ಮುಗಿದ ನಂತರ ಯೋಗಾಚಾರ್ಯ ದಿವಾಕರ ಭಟ್ಟರಿಂದ ಕಪಾಲಬಾತಿ, ಅದರ ಉದ್ದೇಶ, ದೇಹಕ್ಕಾಗುವ ಲಾಭಗಳ ವಿವರಣೆಯೊಂದಿಗೆ ಸಾಮೂಹಿಕ ಅಭ್ಯಾಸ ನಡೆಯಿತು. ಉಸಿರಾಟದ ನಿಯಂತ್ರಣ ಮತ್ತು ಅನುಕೂಲಗಳ ಬಗ್ಗೆ ಅರ್ಥವತ್ತಾದ ವಿವರಣೆ ನೀಡಿದರು. ಅಂತ್ಯದಲ್ಲಿ ಬ್ರಹ್ಮಕುಮಾರಿ ಸಂಸ್ಥೆಯಿಂದ ರಾಜಯೋಗ ಹಾಗೂ ಧ್ಯಾನದ ಉಪಯುಕ್ತತೆ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮಕ್ಕೆ ಜಿಲ್ಲಾಡಳಿತದ ಜೊತೆ ಭಾರತ್ ಸ್ವಾಭಿಮಾನ ಪತಂಜಲಿ ಯೋಗ ಸಮಿತಿ, ಶ್ರೀ ಪತಂಜಲಿ ಯೋಗ ಶಿಕ್ಷಣ ಟ್ರಸ್ಟ್, ಪ್ರಭೋನಿ ಯೋಗ ಶಿಕ್ಷಣ ಟ್ರಸ್ಟ್, ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ, ಸಮರ್ಪಣಾ ಟ್ರಸ್ಟ್ ಮತ್ತು ಧರ್ಮಸ್ಥಳ ಮಂಜುನಾಥೇಶ್ವರ ನಿಸರ್ಗ ಚಿಕಿತ್ಸಾ ಕೇಂದ್ರಗಳು ಕೈಜೋಡಿಸಿದ್ದವು.
ಕೆಲವು ಮುಸ್ಲಿಮರೂ ಸಹ ಯೋಗಾಸನ ಮಾಡುವ ಮೂಲಕ ಗಮನ ಸೆಳೆದರು.
ಜಿಪಂ ಅಧ್ಯಕ್ಷೆ ಸುಜಾತಾ ಕೃಷ್ಣಪ್ಪ, ಪಲ್ಲವಿ ಸಿ.ಟಿ.ರವಿ, ಅಪರ ಜಿಲ್ಲಾಧಿಕಾರಿ ಡಾ.ಕುಮಾರ್, ಅಪರ ಜಿಲ್ಲಾ ರಕ್ಷಣಾಧಿಕಾರಿ ಶೃತಿ, ಜಿಪಂ ಉಪ ಕಾರ್ಯದರ್ಶಿ ರಾಜಗೋಪಾಲ್, ಡಿಎಚ್ಒ ಡಾ.ಅಶ್ವತ್ಥಬಾಬು, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ.ನಂಜಯ್ಯ ಇತರರು ಯೋಗಾಸನ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
MUST WATCH
ಹೊಸ ಸೇರ್ಪಡೆ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.