ಡೆಂಘೀ ಹರಡದಂತೆ ಜಾಗೃತಿ ಮೂಡಿಸಿ
ಸೊಳ್ಳೆ ನಿಯಂತ್ರಣಕ್ಕೆ ಕ್ರಮವಹಿಸಿತೊಟ್ಟಿ -ಚರಂಡಿ ಸ್ವಚ್ಛಗೊಳಿಸಲು ಸೂಚನೆ
Team Udayavani, Dec 2, 2019, 6:42 PM IST
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಡೆಂಘೀ, ಚಿಕೂನ್ ಗುನ್ಯಾ ಹಾಗೂ ಮಲೇರಿಯಾ ರೋಗಗಳು ಹರಡದಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವಲ್ಲಿ ಆರೋಗ್ಯ ಇಲಾಖೆ, ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತ್ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ನಡೆದ ಡೆಂಘೀ ಮತ್ತು ಚಿಕೂನ್ ಗುನ್ಯಾ ಜಾಗೃತಿ ಕಾರ್ಯಕ್ರಮದಡಿ ನಾಗರಿಕರಿಗೆ ಒಂದು ಸವಾಲು ಅಭಿಯಾನದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ, ನಗರಸಭೆ ಹಾಗೂ ಪಪಂ ಅಧಿಕಾರಿಗಳು ಪ್ರತಿ ಮನೆ ಮನೆಗಳಿಗೆ ಭೇಟಿ ನೀಡಿ ಡೆಂಘೀ, ಚಿಕೂನ್ ಗುನ್ಯಾ ಹಾಗೂ ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದರು.
ಜಿಲ್ಲೆಯಲ್ಲಿ ಅಕ್ಟೋಬರ್ ಅಂತ್ಯದವರೆಗೆ ಮಲೇರಿಯಾ ರೋಗಕ್ಕೆ ತುತ್ತಾದವರ ಸಂಖ್ಯೆ 7, ಡೆಂಘೀ 188, ಚಿಕೂನ್ ಗುನ್ಯಾ 91 ಮತ್ತು ಮಿದುಳು ಜ್ವರಕ್ಕೆ ತುತ್ತಾದವರ 8 ಪ್ರಕರಣಗಳು ಕಂಡುಬಂದಿದ್ದು, ಇದಕ್ಕೆ ಸುತ್ತಮುತ್ತಲಿನ ಅನೈರ್ಮಲ್ಯದ ವಾತಾವರಣವೇ ಕಾರಣ. ಇಂತಹ ಸ್ಥಳಗಳಿಗೆ ಭೇಟಿ ನೀಡಿ ಸೊಳ್ಳೆ ನಿಯಂತ್ರಣಕ್ಕೆ ಕ್ರಮವಹಿಸಬೇಕು ಎಂದು ಹೇಳಿದರು.
ಜಿಲ್ಲೆಯಲ್ಲಿ ಪ್ರತಿ ಗ್ರಾಮಗಳಿಗೆ ಭೇಟಿ ನೀಡಿ ಅಧಿಕಾರಿಗಳು ಗುಂಡಿಗಳು, ಸಾರ್ವಜನಿಕ ನಲ್ಲಿಗಳು, ಚರಂಡಿ, ಕೊಳವೆ ಬಾವಿ, ಮೇಲ್ಛಾವಣಿಯ ತೊಟ್ಟಿಗಳಲ್ಲಿ ನೀರು ಸಂಗ್ರವಾಗಿರುವ ಕಡೆ ಸ್ವಚ್ಛಗೊಳಿಸಬೇಕು. ಸಾಂಕ್ರಾಮಿಕ ರೋಗಗಳ ಬಗ್ಗೆ ಮಾಹಿತಿ ಹಾಗೂ ಸೊಳ್ಳೆ ಉತ್ಪತ್ತಿ ನಿವಾರಣೆಯ ಕುರಿತು ಗ್ರಾಮಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಬೇಕು ಎಂದರು.
ನಗರದಲ್ಲಿ ಸೊಳ್ಳೆ ಉತ್ಪತ್ತಿ ನಿಯಂತ್ರಣಗೊಳಿಸಲು ವಾರಕ್ಕೊಮ್ಮೆ ಸೊಳ್ಳೆ ನಾಶಕ ದ್ರಾವಣ ಸಿಂಪಡಿಸಬೇಕು. ರಸ್ತೆ ಬದಿ ತೆರೆದ ವಾತಾವರಣದಲ್ಲಿ ಹಣ್ಣುಗಳ ಮಾರಾಟ ನಿಷೇಧಿಸಿ, ಹೋಟೆಲ್‌ಗಳಲ್ಲಿ ಸ್ವತ್ಛತೆ ಕಾಪಾಡುವಂತೆ ನೋಡಿಕೊಳ್ಳಬೇಕು. ನಗರದಲ್ಲಿ ಚರಂಡಿಗಳನ್ನು ಸ್ವಚ್ಛಗೊಳಿಸಿ ನೀರು ಸರಾಗವಾಗಿ ಹರಿಯುವಂತೆ ಕ್ರಮ ವಹಿಸಬೇಕು. ನಗರದ ವಿವಿಧ ಕೇಂದ್ರಗಳಿಂದ ನೀರನ್ನು ಸಂಗ್ರಹಿಸಿ ಕಾಲಕಾಲಕ್ಕೆ ತಪಾಸಣೆಗೆ ಒಳಪಡಿಸಬೇಕು ಎಂದು ಹೇಳಿದರು.
ಶಾಲೆ, ಅಂಗನವಾಡಿ ಕೇಂದ್ರಗಳು ಹಾಗೂ ವಸತಿ ನಿಲಯಗಳ ಸುತ್ತ ಮುತ್ತ ವಾತಾವರಣವನ್ನು ಸ್ವಚ್ಛಗೊಳಿಸಿ ಆರೋಗ್ಯ ಶಿಕ್ಷಣ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸಬೇಕು. ಸಾಂಕ್ರಾಮಿಕ ರೋಗಗಳು ಹಾಗೂ ನಿಯಂತ್ರಣದ ಬಗ್ಗೆ ಪಠ್ಯ ಕ್ರಮದಲ್ಲಿ ಅಳವಡಿಸುವುದು ಹಾಗೂ ರೋಗಗಳು ಹರಡದಂತೆ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ತಾಲೂಕು ಆರೋಗ್ಯಾಧಿಕಾರಿಗಳು ಎಚ್ಚರಿಕೆಯ ಕ್ರಮ ವಹಿಸಬೇಕು ಎಂದು ಹೇಳಿದರು.
ಕೈಗಾರಿಕಾ ಸ್ಥಳಗಳಲ್ಲಿ ಸೊಳ್ಳೆ ಉತ್ಪತ್ತಿ ಹೆಚ್ಚಾಗಿದ್ದು, ಕಾರ್ಮಿಕರಿಗೆ ಸೊಳ್ಳೆ ಪರದೆ ಹಾಗೂ ರೆಪಲೆಂಟ್ ಗಳ ಉಪಯೋಗ, ಕಿಟಕಿಗಳಿಗೆ ಜಾಲರಿ ಹಾಕುವಂತೆ ತಿಳಿಸಬೇಕು. ಕೈಗಾರಿಕಾ ವಲಯಗಳಿಗೆ ವಲಸೆ ಬರುವ ಕಾರ್ಮಿಕರಿಗೆ ಪ್ರತ್ಯೇಕ ಆರೋಗ್ಯ ಚೀಟಿ ನೀಡಿ ಆರೋಗ್ಯಾಧಿಕಾರಿಗಳು ಅವರನ್ನು ಆರೋಗ್ಯ ತಪಾಸಣೆಗೆ ಒಳಪಡಿಸಬೇಕು ಎಂದರು.
ಅರಣ್ಯ ವ್ಯಾಪ್ತಿಗಳಲ್ಲಿ ವಾಸಿಸುತ್ತಿರುವ ವನಪಾಲಕರು ಹಾಗೂ ಸಾರ್ವಜನಿಕರಿಗೆ ಕೆಎಫ್‌ಡಿ ನಿಯಂತ್ರಣ ಮತ್ತು ಮುಂಜಾಗ್ರತೆ ಬಗ್ಗೆ ಅರಿವು ಮೂಡಿಸಿ ಅರಣ್ಯ ವ್ಯಾಪ್ತಿಯಲ್ಲಿ ಸೊಳ್ಳೆ ಉತ್ಪತ್ತಿಗೆ ಕಾರಣವಾಗದಂತೆ ಗಪ್ಪಿ ಮತ್ತು ಗಾಂಬೂಸಿಯಾ ಮೀನು ಮರಿಗಳನ್ನು ಬಿಡಲು ಇಲಾಖೆಗಳೊಂದಿಗೆ ವಿನಿಮಯ ಮಾಡಿಕೊಂಡು ಕಾರ್ಯಗತಗೊಳಿಸಬೇಕು ಎಂದು ತಿಳಿಸಿದರು.
ಆರೋಗ್ಯ ಇಲಾಖೆ, ನಗರ ಸಭೆಗಳು ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಮಾಧ್ಯಮಗಳ ಮೂಲಕ ಜಾಗೃತಿ ಮೂಡಿಸುವಂತಹ ಆರೋಗ್ಯ ಶಿಕ್ಷಣ ನೀಡಿ ರೋಗಗಳ ಹತೋಟಿಗೆ ಅಧಿಕಾರಿಗಳು ಮುಂದಾಗಬೇಕು ಎಂದು ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಪ್ರಭು, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ಅಶ್ವಥ್ ಬಾಬು, ತಾಲೂಕು ಆರೋಗ್ಯಧಿಕಾರಿ ಡಾ.ಸೀಮಾ, ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಡಿ.ಎಂ.ದೇವರಾಜ್ ಸೇರಿದಂತೆ ವಿವಿಧ ಇಲಾಖಾಧಿಕಾರಿಗಳು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ; ಪ್ರಕರಣ ದಾಖಲು
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
Egg Thrown Case: 100-150 ಜನರಿಂದ ನನ್ನ ಮೇಲೆ ದಾಳಿ: ಶಾಸಕ ಮುನಿರತ್ನ ದೂರು
Congress: ಪಕ್ಷದೊಳಗೆ ಹೊಸ ನಾಯಕತ್ವಕ್ಕೆ ಅವಕಾಶ ಸಿಗಬೇಕು: ಮಲ್ಲಿಕಾರ್ಜುನ ಖರ್ಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.