ಮತ ಹಾಕದ 200ಕ್ಕೂ ಹೆಚ್ಚು ಪ್ರವಾಸಿಗರ ಪತ್ತೆ ಹಚ್ಚಿ ಸನ್ಮಾನ
ಮತದಾನ ಮಾಡದವರಿಗೆ ಮಂಗಳಾರತಿ
Team Udayavani, Apr 19, 2019, 11:17 AM IST
ಮತದಾನ ಮಾಡದೆ ಪ್ರವಾಸಕ್ಕೆ ಆಗಮಿಸಿದ್ದ ಪ್ರವಾಸಿಗರನ್ನು ಜಿಲ್ಲಾ ಪತ್ರಕರ್ತರ ಸಂಘದಿಂದ ಸನ್ಮಾನಿಸಲಾಯಿತು.
ಚಿಕ್ಕಮಗಳೂರು: ಮತ ಚಲಾಯಿಸದೆ ಮೋಜು ಮಸ್ತಿಗಾಗಿ ಜಿಲ್ಲೆಗೆ ಆಗಮಿಸಿದ್ದ ಪ್ರವಾಸಿಗರಿಗೆ ಜಿಲ್ಲಾ ಪತ್ರಕರ್ತರ ಸಂಘ ಗುರುವಾರ ಹಾರ ಹಾಕಿ, ಶಹಬ್ಟಾಸ್ ಗಿರಿ ನೀಡಿ ಸನ್ಮಾನಿಸುವ ಮೂಲಕ ಅವರ ಮುಖಕ್ಕೆ ಮಂಗಳಾರತಿ ಮಾಡಿದೆ!
ಕಳೆದ ಕೆಲ ದಿನಗಳಿಂದ ಜಿಲ್ಲಾ ಪತ್ರಕರ್ತರ ಸಂಘದ ಪದಾಧಿಕಾರಿಗಳು ಜಿಲ್ಲೆಗೆ ಆಗಮಿಸುವ ಪ್ರವಾಸಿಗರಲ್ಲಿ “ಮತದಾನ ಮಾಡಿ’ ಎಂದು ಜಾಗೃತಿ ಮೂಡಿಸುವ ಕಾರ್ಯ ಮಾಡುತ್ತಿದ್ದರು.
ಮತದಾನದ ದಿನ ರಜಾ ಇರುವುದರಿಂದ ಪ್ರವಾಸಕ್ಕೆ ಆಗಮಿಸದೆ ಮತ ಚಲಾಯಿಸಿದ ನಂತರ ಪ್ರವಾಸಕ್ಕೆ ಬರುವಂತೆ ಮನವಿ
ಮಾಡಿದ್ದರು. ಹೀಗಾಗಿ ಗುರುವಾರ ಮಾಗಡಿ ಹ್ಯಾಂಡ್ ಪೋಸ್ಟ್ ಮತ್ತು ಗಿರಿ ರಸ್ತೆ ಸೇರಿ ವಿವಿಧ ರಸ್ತೆಗಳಲ್ಲಿ ನಿಂತು ಪ್ರವಾಸಿಗರ ವಾಹನಗಳನ್ನು ತಡೆದು ಮತದಾನ ಮಾಡಿ ಬಂದಿರುವ ಬಗ್ಗೆ
ಪರಿಶೀಲಿಸಿದರು. ಈ ವೇಳೆ 200ಕ್ಕೂ ಅಧಿಕ ಪ್ರವಾಸಿಗರು ಮತ ಚಲಾಯಿಸದೇ ಬಂದಿರುವುದು ಬೆಳಕಿಗೆ ಬಂತು. ಅವರಲ್ಲಿ
ಬೆಂಗಳೂರಿನ ಐಟಿಬಿಟಿ ಉದ್ಯೋಗಿಗಳ ಸಂಖ್ಯೆಯೇ ಹೆಚ್ಚಿತ್ತು. ಹಲವರಿಗೆ ಇದೀಗ ನಡೆಯುತ್ತಿರುವುದು ಯಾವ ಚುನಾವಣೆ
ಎಂಬುದೇ ತಿಳಿದಿರಲಿಲ್ಲ. ಇನ್ನೂ ಕೆಲವರಿಗೆ ಮತದಾನದ ದಿನಾಂಕವೂ ಗೊತ್ತಿಲ್ಲದಿರುವುದು ದಂಗುಬಡಿಸಿತು.
ಈ ಹಿನ್ನೆಲೆಯಲ್ಲಿ ಸಂಘದ ಪದಾಧಿಕಾರಿಗಳು ಅವರಿಗೆ ಶಹಬ್ಟಾಸ್‌ಗಿರಿ ನೀಡಿ ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್, ಎಟಿಎಂ, ಡೆಬಿಟ್, ಕ್ರೆಡಿಟ್ ಕಾರ್ಡ್‌ಗಳ ಜೆರಾಕ್ಸ್ ಪ್ರತಿಯ ಮಾಲೆ ಹಾಕಿ, ಶಾಲು ಹೊದಿಸಿ ಸನ್ಮಾನಿಸಿದರು. ಮುಂದಿನ ಬಾರಿ ಮತದಾನ ಮಾಡದೇ ಆಗಮಿಸುವ ಪ್ರವಾಸಿಗರನ್ನು ವಾಪಸ್ ಕಳುಹಿಸುವ ಎಚ್ಚರಿಕೆ ನೀಡಿದರು. ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಜಿ.ಎಂ. ರಾಜಶೇಖರ್, ಪ್ರಧಾನ ಕಾರ್ಯದರ್ಶಿ
ಬ್ಯಾಲದಾಳ್ ಕುಮಾರ್, ಕಾರ್ಯದರ್ಶಿ ವಿ.ಜೆ. ರಾಜೇಶ್, ಪುರುಷೋತ್ತಮ್ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
High Court: ʼಅಪರಾಧಿ ಪತಿಯೊಂದಿಗೆ ನೆಲೆಸಿದ ಮಾತ್ರಕ್ಕೆ ಪತ್ನಿಯನ್ನೂ ಅಪರಾಧಿ ಮಾಡಲಾಗದುʼ
Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ
Kambala: ಕೋಣಗಳ ಸಂಖ್ಯೆ ದುಪ್ಪಟ್ಟು-ಕಂಬಳ ಆಸಕ್ತಿ ಮೂರುಪಟ್ಟು!
Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್
MUST WATCH
ಹೊಸ ಸೇರ್ಪಡೆ
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
Golden Jubliee: ಪತ್ರಿಕೆಯ ಓದು ಪ್ರತಿಯೊಬ್ಬರಿಗೂ ಆಹಾ! ಎನಿಸುವಂತಿರಲಿ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
High Court: ʼಅಪರಾಧಿ ಪತಿಯೊಂದಿಗೆ ನೆಲೆಸಿದ ಮಾತ್ರಕ್ಕೆ ಪತ್ನಿಯನ್ನೂ ಅಪರಾಧಿ ಮಾಡಲಾಗದುʼ
Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.