ಅಕ್ರಮ-ಸಕ್ರಮ ಹಕುಪತ್ರ ವಿತರಣೆಗೆ ಕ್ರಮ
Team Udayavani, Dec 27, 2019, 6:19 PM IST
ಚಿಕ್ಕಮಗಳೂರು: ಅಕ್ರಮ-ಸಕ್ರಮ ಯೋಜನೆಯಡಿ 94ಸಿ ನಮೂನೆಯಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಪರಿಶೀಲಿಸಿ ಜನವರಿ ಅಂತ್ಯದೊಳಗೆ ಹಕ್ಕುಪತ್ರ ವಿತರಣೆಗೆ ಕ್ರಮ ವಹಿಸಲಾಗುವುದು ಎಂದು ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಕ್ಕರೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ ಹೇಳಿದರು.
ನಗರದ ತಾಲೂಕು ಕಚೇರಿ ಆವರಣದಲ್ಲಿ 176 ಫಲಾನುಭವಿಗಳಿಗೆ ಹಕ್ಕುಪತ್ರಗಳನ್ನು ವಿತರಿಸಿ ಅವರು ಮಾತನಾಡಿದರು. ಚಿಕ್ಕಮಗಳೂರು ತಾಲೂಕು ಕಚೇರಿಗೆ 94ಸಿ ನಲ್ಲಿ ಒಟ್ಟು 10,140 ಅರ್ಜಿಗಳು ಸಲ್ಲಿಕೆಯಾಗಿದ್ದು, ಇವುಗಳಲ್ಲಿ 9,135 ಅರ್ಜಿಗಳು ವಿಲೇವಾರಿಯಾಗಿವೆ. 1,005 ಅರ್ಜಿಗಳು ಬಾಕಿ ಇದ್ದು, ಅವುಗಳನ್ನು ಪರಿಶೀಲಿಸಿ ಹಕ್ಕುಪತ್ರ ವಿತರಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಜಾಗರ ಮತ್ತು ಕಸಬಾ ಹೋಬಳಿಯ ಜನರಿಗೆ ಮೊದಲನೆ ಹಂತದಲ್ಲಿ ಜನವರಿ ಅಂತ್ಯದೊಳಗಾಗಿ 94 ಸಿ ನಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳ ದಾಖಲೆಗಳನ್ನು ಪರಿಶೀಲಿಸಿ ಹಕ್ಕುಪತ್ರ ನೀಡಲಾಗುವುದು. 94ಸಿಸಿ ನಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳಲ್ಲಿ ತಾಂತ್ರಿಕ ಆಡಚಣೆಯಿದ್ದು, ಅವುಗಳನ್ನು ಪರಿಶೀಲಿಸಿ ಶೀಘ್ರದಲ್ಲಿಯೇ ಬಗೆಹರಿಸಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಜಿಪಂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಜಸಿಂತಾ ಅನಿಲ್ ಕುಮಾರ್, ತಾಲೂಕು ಪಂಚಾಯತ್ ಅಧ್ಯಕ್ಷ ಜಯಣ್ಣ ನೆಟ್ಟೆಕೆರೆಹಳ್ಳಿ, ತಹಶೀಲ್ದಾರ್ ನಂದಕುಮಾರ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.