7ರಿಂದ ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿ: ಅಧಿಕಾರಿಗಳ ಸಭೆ
Team Udayavani, Nov 4, 2019, 5:33 PM IST
ಚಿಕ್ಕಮಗಳೂರು: 2019-20 ನೇ ಸಾಲಿನ 14 ರಿಂದ 17 ವರ್ಷದೊಳಗಿನ ಬಾಲಕ ಮತ್ತು ಬಾಲಕಿಯರ ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿ ನ.7 ರಿಂದ 9 ರವರೆಗೆ ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಪಂದ್ಯಾವಳಿಗೆ ವಿವಿಧ ಜಿಲ್ಲೆಗಳಿಂದ ಆಗಮಿಸುವ ಸ್ಪರ್ಧಾಳುಗಳಿಗೆ ಅವಶ್ಯಕವಿರುವ ಮೂಲ ಸೌಕರ್ಯಗಳನ್ನು ಸಮರ್ಥವಾಗಿ ಒದಗಿಸಬೇಕು ಎಂದು ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಡಾ| ಕುಮಾರ್ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸುತ್ತಿರುವ ಸ್ಪರ್ಧಾರ್ಥಿಗಳು, ತರಬೇತುದಾರರು ಹಾಗೂ ತೀರ್ಪುಗಾರರಿಗೆ ಊಟೋಪಚಾರ, ವಸತಿ, ಸಾರಿಗೆ ಹಾಗೂ ಮತ್ತಿತರ ಅಗತ್ಯ ಮೂಲ ಸೌಕರ್ಯ ಒದಗಿಸಬೇಕು ಎಂದು ಹೇಳಿದರು.
ಕುಸ್ತಿ ಪಂದ್ಯಾವಳಿಗಳು ಸುಗಮವಾಗಿ ನಡೆಸಲು ವಿವಿಧ ಉಪ ಸಮಿತಿಗಳನ್ನು ರಚಿಸಲಾಗಿದ್ದು, ಸಮಿತಿಗಳ ಅಧ್ಯಕ್ಷರು ವ್ಯವಸ್ಥೆಯಲ್ಲಿ ಯಾವುದೇ ಲೋಪವಾಗದಂತೆ ಗಮನಹರಿಸಿ ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕು ಎಂದರು.
ಆಹಾರ ವ್ಯವಸ್ಥೆಯ ಬಗ್ಗೆ ಕಾಳಜಿ ವಹಿಸಿ ಆಹಾರ ನಿರೀಕ್ಷಕರಿಂದ ಪ್ರಮಾಣೀಕರಿಸಿದ ಬಳಿಕ ಸ್ಪರ್ಧಾಳುಗಳಿಗೆ ಆಹಾರ ನೀಡಬೇಕು. ವಸತಿ ಸೌಲಭ್ಯಕ್ಕೆ ನಿಗದಿಪಡಿಸಿದ ವಿದ್ಯಾಸಂಸ್ಥೆಗಳಿಗೆ ಮೂಲ ಸೌಕರ್ಯ ಒದಗಿಸುವ ಜವಾಬ್ದಾರಿ ಶಾಲಾ ಮುಖ್ಯೋಪಾಧ್ಯಾಯರದ್ದಾಗಿದೆ ಎಂದು ಹೇಳಿದರು.
ಸ್ಪರ್ಧಾರ್ಥಿಗಳ ಆರೋಗ್ಯಕ್ಕೆ ಸಂಬಂಧಿಸಿದಂತೆ ಮೈದಾನದಲ್ಲಿ ಮತ್ತು ಪ್ರತಿ ವಸತಿ ಕೇಂದ್ರಗಳಲ್ಲಿ ವೈದ್ಯರು, ನರ್ಸ್, ಪ್ರಥಮ ಚಿಕಿತ್ಸೆಯ ಸಾಮಗ್ರಿಗಳು, ತುರ್ತು ಚಿಕಿತ್ಸಾ ಸಾಮಗ್ರಿಗಳು ಹಾಗೂ ಆ್ಯಂಬುಲೆನ್ಸ್
ವ್ಯವಸ್ಥೆ ಮಾಡುವ ಹೊಣೆಗಾರಿಕೆ ಆರೋಗ್ಯ ಇಲಾಖೆ ಮೇಲಿದೆ ಎಂದು ತಿಳಿಸಿದರು. ಆಟದ ಮೈದಾನದಲ್ಲಿ, ವಸತಿ ಕೇಂದ್ರದ ಬಳಿ ಟ್ರಾಫಿಕ್ ನಿಯಂತ್ರಣ ಹಾಗೂ ಸುರಕ್ಷತೆಯ ಹೊಣೆಯನ್ನು ಪೊಲೀಸ್ ಇಲಾಖೆ ಮುತುವರ್ಜಿಯಿಂದ ನಿರ್ವಹಿಸಬೇಕು ಎಂದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ಎನ್. ಜಯಣ್ಣ, ಡಯಟ್ ಪ್ರಾಂಶುಪಾಲ ಎನ್.ವಿ.ಶಿವಪ್ಪ, ನಗರಸಭೆ ಪೌರಾಯುಕ್ತ ಪರಮೇಶಿ ಸೇರಿದಂತೆ ವಿವಿಧ ಇಲಾಖೆಗಳ ಅನುಷ್ಠಾನಾಧಿಕಾರಿಗಳು ಹಾಗೂ ವಿವಿಧ ಶಾಲೆಗಳ ಮುಖ್ಯೋಪಾಧ್ಯಾಯರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್ ಜಾಮ್
Eshwara Khandre; ಕುಕ್ಕೆ, ಧರ್ಮಸ್ಥಳದಲ್ಲಿ: ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕಾರ
Dakshina Kannada; ಜಿಲ್ಲಾ ಕೆಡಿಪಿ ಸಭೆ: ಕರಾವಳಿ ನಿರ್ಲಕ್ಷ್ಯ ಆರೋಪಿಸಿ ಬಿಜೆಪಿ ಸಭಾತ್ಯಾಗ
Udupi: ಕೋಳಿ ಅಂಕಕ್ಕೆ ದಾಳಿ; 9 ಕೋಳಿ ಸಹಿತ ನಾಲ್ವರ ವಶ
Ullal; ಲೋಕಾಯುಕ್ತ ಅಧಿಕಾರಿ ಹೆಸರಲ್ಲಿ ವಂಚನೆ ಯತ್ನ: ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hindu Temple: ಸಂಭಲ್ ಬಳಿಕ ಬುಲಂದ್‌ಶಹರ್‌ನಲ್ಲಿ ಮತ್ತೊಂದು ಹಳೇ ದೇವಾಲಯ ಪತ್ತೆ
Rahul Gandhi: ದಲಿತನೆಂಬ ಕಾರಣಕ್ಕೆ ಪೊಲೀಸ್ ವಶದಲ್ಲಿ ವ್ಯಕ್ತಿ ಕೊ*ಲೆ
Congress MP: ವಾರಕ್ಕೆ 70 ಗಂಟೆ ಬೇಡ, 4 ದಿನ ಕೆಲಸ ಸಾಕು: ತ.ನಾಡು ಸಂಸದ ಕಾರ್ತಿ
ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ
Uppinangady; ಕಾಡಾನೆ ಸಂಚಾರದಿಂದ ಹಿರೇಬಂಡಾಡಿ ಗ್ರಾಮಸ್ಥರು ಭಯಭೀತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.