ಜಿಲ್ಲಾದ್ಯಂತ ಬಿಗಿ ಬಂದೋಬಸ್ತ್
ಅಯೋಧ್ಯೆ ತೀರ್ಪು ಹಿನ್ನೆಲೆಯಲ್ಲಿ 144ನೇ ಸೆಕ್ಷನ್ ಜಾರಿ: ಎಸ್‌ಪಿ ಹರೀಶ್ ಪಾಂಡೆ
Team Udayavani, Nov 10, 2019, 12:42 PM IST
ಚಿಕ್ಕಮಗಳೂರು: ಅಯೋಧ್ಯೆ ರಾಮ ಜನ್ಮಭೂಮಿ ಪ್ರಕರಣದ ತೀರ್ಪು ಪ್ರಕಟವಾದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾದ್ಯಂತ ಬಿಗಿ ಬಂದೋಬಸ್ತ್ ಮಾಡಲಾಗಿದ್ದು, ಮುಂದುವರಿಯಲಿದೆ.
ಜಿಲ್ಲಾದ್ಯಂತ 144ನೇ ಸೆಕ್ಷನ್ ಜಾರಿಗೊಳಿಸಲಾಗಿದ್ದು, ಪ್ರಾರ್ಥನಾ ಮಂದಿರಗಳು, ಹೆಚ್ಚಿನ ಜನ ಸೇರುವ ಪ್ರದೇಶಗಳು, ಪಕ್ಷದ ಕಚೇರಿಗಳು, ಸಭೆ-ಸಮಾರಂಭಗಳು ನಡೆಯುವ ಪ್ರದೇಶಗಳಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿತ್ತು. ಹೆಚ್ಚು ಜನ ಸೇರುವ ಪ್ರದೇಶಗಳಲ್ಲಿ ಶ್ವಾನದಳ ಹಾಗೂ ಬಾಂಬ್ ಪತ್ತೆ ದಳದವರು ತಪಾಸಣೆ ನಡೆಸಿದರು.
ಅಯೋಧ್ಯೆ ರಾಮಮಂದಿರ ಪ್ರಕರಣದ ತೀರ್ಪು, ಟಿಪ್ಪು ಜಯಂತಿ ಹಾಗೂ ಈದ್‌ಮಿಲಾದ್ ಹಬ್ಬದ ಅಂಗವಾಗಿ ಜಿಲ್ಲಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದ್ದು, ಇನ್ನೂ 2-3 ದಿನಗಳ ಕಾಲ ಬಂದೋಬಸ್ತ್ ವ್ಯವಸ್ಥೆ ಮುಂದುವರೆಸುವ ಸಾಧ್ಯತೆಗಳಿವೆ.
ಬಂದೋಬಸ್ತ್ ವ್ಯವಸ್ಥೆ ಕುರಿತು ಸುದ್ದಿಗಾರರಿಗೆ ಮಾಹಿತಿ ನೀಡಿದ ಎಸ್‌ಪಿ ಹರೀಶ್ ಪಾಂಡೆ ಅವರು, ಜಿಲ್ಲಾದ್ಯಂತ ಅಯೋಧ್ಯೆ ತೀರ್ಪಿನ ಹಿನ್ನೆಲೆಯಲ್ಲಿ ಶನಿವಾರ ಬೆಳಗ್ಗೆ 10 ಗಂಟೆಯಿಂದ ಭಾನುವಾರ ಬೆಳಗ್ಗೆ 6 ಗಂಟೆ ವರೆಗೆ 144ನೇ ವಿಧಿಯನ್ನು ಜಿಲ್ಲಾಡಳಿತ ಜಾರಿಗೊಳಿಸಿದೆ. ಶನಿವಾರ ರಾತ್ರಿ ಪರಿಸ್ಥಿತಿಯನ್ನು ಅವಲೋಕಿಸಿ 144ನೇ ವಿಧಿಯನ್ನು ಮತ್ತೆ ವಿಸ್ತರಿಸುವ ಬಗ್ಗೆ ನಿರ್ಧರಿಸುವುದಾಗಿ ತಿಳಿಸಿದರು.
ಜಿಲ್ಲಾದ್ಯಂತ ತೀರ್ಪು ಹೊರಬಂದ ನಂತರವೂ ಯಾವುದೇ ರೀತಿಯ ಸಣ್ಣ ಅಹಿತಕರ ಘಟನೆಯೂ ನಡೆದಿಲ್ಲ. ಜನ ಶಾಂತಿ- ಸುವ್ಯವಸ್ಥೆ ಕಾಪಾಡಲು ಸಹಕರಿಸಿದ್ದಾರೆಂದು ಹೇಳಿದರು. ಜಿಲ್ಲೆಯಲ್ಲಿ ಅಯೋಧ್ಯೆ ತೀರ್ಪಿನ ಹಿನ್ನೆಲೆಯಲ್ಲಿ ಶುಕ್ರವಾರ ರಾತ್ರಿಯಿಂದಲೇ 2 ಸಾವಿರಕ್ಕೂ ಹೆಚ್ಚು ಮಂದಿಯನ್ನು ರಕ್ಷಣಾ ಕಾರ್ಯಕ್ಕೆ ನಿಯೋಜಿಸಲಾಗಿದೆ. ಜಿಲ್ಲಾ ಸಶಸ್ತ್ರ ಮೀಸಲು ಪಡೆ, ಕೆಎಸ್‌ಆರ್‌ಪಿ, ಗೃಹರಕ್ಷಕ ದಳ ಹಾಗೂ ಸಿವಿಲ್ ಪೊಲೀಸರನ್ನು ರಕ್ಷಣಾ ಕಾರ್ಯಕ್ಕೆ ಬಳಸಿಕೊಳ್ಳಲಾಗಿದೆ ಎಂದರು.
ತೀರ್ಪು ಬರುವ ನಿರೀಕ್ಷೆಯಲ್ಲಿದ್ದ ಕಾರಣ ಜಿಲ್ಲೆಯ ಸೂಕ್ಷ್ಮ ಪ್ರದೇಶ, ಜನ ಸೇರುವ ಹಾಗೂ ಸಭೆ- ಸಮಾರಂಭಗಳು ನಡೆಯುವ ಪ್ರದೇಶಗಳನ್ನು ಗುರುತಿಸಿದ್ದು, ಆ ಎಲ್ಲಾ ಪ್ರದೇಶಗಳಲ್ಲಿ ಸೂಕ್ತ ರಕ್ಷಣಾ ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆಯ ಎಲ್ಲಾ ದೇವಸ್ಥಾನಗಳು, ಮಸೀದಿ ಸೇರಿದಂತೆ ಧಾರ್ಮಿಕ ಸ್ಥಳಗಳಿಗೂ, ಬಿಜೆಪಿ ಕಚೇರಿ ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಾಲಯಗಳಿಗೂ ಶನಿವಾರ ಬೆಳಗಿನಿಂದಲೇ ಭದ್ರತೆ ಒದಗಿಸಿರುವುದಾಗಿ ತಿಳಿಸಿದರು.
ಈ ಭದ್ರತಾ ವ್ಯವಸ್ಥೆ ನ.12ರ ವರೆಗೂ ಮುಂದುವರೆಯುವ ಸಂಭವವಿದೆ. 144ನೇ ವಿಧಿ ಜಾರಿಗೊಳಿಸಿರುವುದರಿಂದ ಸಭೆ, ಮೆರವಣಿಗೆ, ಶಸ್ತ್ರ ಹಿಡಿದು ತಿರುಗಾಡುವುದನ್ನು ಹಾಗೂ ಗುಂಪು ಕಟ್ಟಿಕೊಂಡು ಓಡಾಡುವುದನ್ನು ನಿಷೇಧಿಸಲಾಗಿದೆ ಎಂದು ಮಾಹಿತಿ ನೀಡಿದರು.
ಈ ಬಾರಿ ಪೊಲೀಸ್ ಇಲಾಖೆ ಜಿಲ್ಲೆಯ ಎಲ್ಲಾ ಸಮುದಾಯದ ಮುಖಂಡರಿಗೆ ಸಾಮಾಜಿಕ ಜಾಲತಾಣಗಳ ಮೂಲಕ ಹಾಗೂ ಇನ್ನಿತರ ಸಂವಹನ ಮಾರ್ಗಗಳ ಮೂಲಕ ಶಾಂತಿ ಕಾಪಾಡಲು ಮನವಿ ಮಾಡಿತ್ತು. ಶಾಂತಿ ಭಂಗ ಮಾಡುವ ವ್ಯಕ್ತಿಗಳನ್ನು ಗುರುತಿಸಿತ್ತು. ಆದರೆ, ಯಾರನ್ನೂ ಸಹ ವಶಕ್ಕೆ ಪಡೆದಿಲ್ಲ ಎಂದು ಹೇಳಿದರು.
ಫೇಸ್‌ಬುಕ್‌ನಲ್ಲಿ ಯಾವುದೇ ರೀತಿಯ ಆತಂಕಕಾರಿ ಹಾಗೂ ಉದ್ರೇಕಕಾರಿ ಸಂದೇಶ ಕಳುಹಿಸುವುದು, ಭಾವನೆಗಳಿಗೆ ಧಕ್ಕೆ ತರುವ ವ್ಯಂಗ್ಯ ಚಿತ್ರಗಳನ್ನು ಬಳಸಿದಲ್ಲಿ ಅತ್ಯಂತ ಕಠಿಣ ಕ್ರಮ ಕೈಗೊಳ್ಳಲು ಇಲಾಖೆ ತೀರ್ಮಾನಿಸಿತ್ತು. ಈ ರೀತಿ ಪ್ರಕರಣಗಳನ್ನು ಅತ್ಯಂತ ತೀವ್ರ ಅಪರಾಧ ಕೃತ್ಯವೆಂದು ಭಾವಿಸಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಉತ್ತಮವಾಗಿರುವ ಹಿನ್ನೆಲೆಯಲ್ಲಿ ನ.10 ರಂದು ನಡೆಯುವ ಈದ್ ಮಿಲಾದ್ ಮೆರವಣಿಗೆಗೆ ಈವರೆಗೂ ಯಾವುದೇ ರೀತಿಯ ನಿರ್ಬಂಧವನ್ನು ವಿಧಿಸಿಲ್ಲ. ಶನಿವಾರ ರಾತ್ರಿ ಪರಿಸ್ಥಿತಿ ಅವಲೋಕಿಸಿ ಯಾವುದೇ ರೀತಿ ಗಲಭೆ ಅಥವಾ ಅಶಾಂತಿ ಸಂಭವಿಸುವ ಮುನ್ಸೂಚನೆ ಸಿಕ್ಕಲ್ಲಿ ಆನಂತರ ಬೇರೆ ರೀತಿಯಲ್ಲಿ ನಿರ್ಧಾರವನ್ನು ಜಿಲ್ಲಾಡಳಿತ ಕೈಗೊಳ್ಳಲಿದೆ. ಪರಿಸ್ಥಿತಿ ಅವಲೋಕಿಸಿದಾಗ ಶಾಂತಿ ಕದಡುವ ಯಾವುದೇ ಸೂಚನೆ ಇಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ
Kambala Time Table: ಡಿ.13ರ ವರೆಗೆ ಸಾಂಪ್ರದಾಯಿಕ ಕಂಬಳ ಹಬ್ಬ
Vikram Gowda Encounter: ನಕ್ಸಲ್ ಪುನರ್ವಸತಿ, ಶರಣಾಗತಿ ಸಮಿತಿ ಭೇಟಿ, ಪರಿಶೀಲನೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.