ಐ ಕಾಯಿನ್‌ ಹೆಸರಲ್ಲಿ ಭಾರೀ ವಂಚನೆ

ಐಎಂಎ ಮಾದರಿ ವಂಚನೆ ಪ್ರಕರಣ,ಹೂಡಿಕೆದಾರರು ಕಂಗಾಲು•ಮಹಿಳೆ ಬಂಧನ

Team Udayavani, Jun 23, 2019, 11:30 AM IST

23–June-15

ಚಿಕ್ಕಮಗಳೂರು: ವಂಚನೆ ಪ್ರಕರಣದ ಆರೋಪಿ ರುಕ್ಷಿಂದ ಬಾನುಳನ್ನು ಪೊಲೀಸರು ವಶಕ್ಕೆ ಪಡೆದಿರುವುದು.

ಚಿಕ್ಕಮಗಳೂರು: ಐಎಂಎ ಜ್ಯುವೆಲರ್ಸ್‌ ವಂಚನೆ ಪ್ರಕರಣ ದೇಶಾದ್ಯಂತ ಸದ್ದು ಮಾಡುತ್ತಿರುವ ಬೆನ್ನಲ್ಲೇ, ಚಿಕ್ಕಮಗಳೂರು ನಗರದಲ್ಲಿ ಇಂಥದ್ದೇ ವಂಚನೆ ಪ್ರಕರಣವೊಂದು ಬೆಳಕಿಗೆ ಬಂದಿದೆ.

ಬಿಟ್ ಕಾಯಿನ್‌ ಮಾದರಿಯಲ್ಲೇ ‘ಐ ಕಾಯಿನ್‌’ ಹೆಸರಿನಲ್ಲಿ ಈ ವ್ಯವಹಾರ ನಡೆದಿದ್ದು, ಹೂಡಿಕೆ ಮಾಡಿದ ಹಣವನ್ನು ಮೂರು ಪಟ್ಟು ಹೆಚ್ಚಿಸಿಕೊಡುವುದಾಗಿ ನಂಬಿಸಿ ನೂರಾರು ಜನರಿಂದ ಹಣ ಪಡೆದು ಕೋಟ್ಯಂತರ ರೂ. ವಂಚನೆ ಮಾಡಲಾಗಿದೆ ಎಂಬ ಆರೋಪ ಕೇಳಿಬರುತ್ತಿದೆ.

ನಗರದ ಪೆನ್ಷನ್‌ ಮೊಹಲ್ಲಾ ಬಡಾವಣೆಯ ರುಕ್ಷಿಂದ ಬಾನು ಎಂಬಾಕೆ ಈ ಪ್ರಕರಣದ ಪ್ರಮುಖ ರೂವಾರಿ ಎನ್ನಲಾಗಿದ್ದು, ಈಕೆಯನ್ನು ಪೊಲೀಸರು ಬಂಧಿಸಿದ್ದಾರೆ.

ಕಳೆದ ಒಂದು ವರ್ಷದ ಹಿಂದೆ ಆರಂಭಗೊಂಡ ಕಂಪನಿ, ಇಲ್ಲಿ ಹೂಡಿಕೆ ಮಾಡಿದ ಹಣವನ್ನು ಮೂರು ಪಟ್ಟು ಹೆಚ್ಚಿಸಿ ಮೂರು ಕಂತುಗಳಲ್ಲಿ ಹಿಂದಿರುಗಿಸುವುದಾಗಿ ಹೇಳಿತ್ತು. ಇದನ್ನು ನಂಬಿದ ನಗರದ ವಿಜಯಪುರ, ಪೆನ್ಷನ್‌ ಮೊಹಲ್ಲ, ಷರೀಫ್‌ಗಲ್ಲಿ ಇನ್ನಿತರೆ ಬಡಾವಣೆಗಳ ನೂರಾರು ಮಂದಿ 10 ಸಾವಿರ ರೂ.ನಿಂದ ಹತ್ತಾರು ಲಕ್ಷದವರೆಗೆ ಹಣ ಹೂಡಿಕೆ ಮಾಡಿದ್ದಾರೆ.

ವಂಚಕರು ಆರಂಭದಲ್ಲಿ ಕೆಲವು ಗ್ರಾಹಕರಿಗೆ ಹೇಳಿದಂತೆ ಮೂರು ಕಂತುಗಳಲ್ಲಿ ಅವರ ಹಣಕ್ಕೆ ಮೂರು ಪಟ್ಟು ಹೆಚ್ಚಿಗೆ ಹಣ ನೀಡಿ ನಂಬಿಕೆ ಹುಟ್ಟಿಸಿದ್ದರು. ಅಲ್ಲದೇ, ಇನ್ನೂ ನಾಲ್ಕು ಜನರಿಂದ ಹೂಡಿಕೆ ಮಾಡಿಸಿದರೆ ಕಮಿಷನ್‌ ಸಿಗಲಿದೆ ಎಂದು ಆಸೆ ತೋರಿಸಿದ್ದರು. ಇದರಿಂದ ಈ ವಂಚನೆ ಜಾಲಕ್ಕೆ ಸಿಕ್ಕಿಬಿದ್ದವರ ಸಂಖ್ಯೆಯೂ ಹೆಚ್ಚಾಗಿದೆ.

ಆದರೆ ಕಳೆದ ನಾಲ್ಕೈದು ದಿನಗಳ ಹಿಂದೆ ಈ ವ್ಯವಹಾರ ನಡೆಸುತ್ತಿರುವವರು ಪರಾರಿಯಾಗುತ್ತಾರೆ ಎನ್ನುವ ಸಂಶಯ ಬಂದ ಹಿನ್ನೆಲೆಯಲ್ಲಿ ಕೆಲವರು ತಾವು ಹೂಡಿಕೆ ಮಾಡಿದ ಹಣ ಹಿಂದಿರುಗಿಸುವಂತೆ ಒತ್ತಾಯಿಸಿದ್ದಾರೆ. ಅವರಿಗೆ ಸಬೂಬು ಹೇಳಿ ಸಾಗಹಾಕಲಾಗಿತ್ತು. ಆದರೆ, ಕೆಲವರು ವಂಚಕಿ ಮನೆಗೆ ತೆರಳಿ ಅವರ ಕಂಪ್ಯೂಟರ್‌ನಲ್ಲಿ ತಮಗೆ ನೀಡಲಾಗಿದ್ದ ಐಡಿ ಬಗ್ಗೆ ಪರಿಶೀಲಿಸಿದ್ದಾರೆ. ಆದರೆ, ಅದರಲ್ಲಿ ಯಾವುದೇ ಮಾಹಿತಿ ಇರಲಿಲ್ಲ.

ನಂತರ ಗ್ರಾಹಕರು ಪೊಲೀಸರಿಗೆ ಸುದ್ದಿ ಮುಟ್ಟಿಸಿದ ಹಿನ್ನೆಲೆಯಲ್ಲಿ ನಗರ ಸರ್ಕಲ್ ಇನ್ಸ್‌ಪೆಕ್ಟರ್‌ ಮತ್ತು ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರುಕ್ಷಿಂದ ಬಾನುಳನ್ನು ವಶಕ್ಕೆ ಪಡೆದಿದ್ದಾರೆ. ವಿಚಾರ ಗೊತ್ತಾದ ಕೂಡಲೇ ನಗರ ಠಾಣೆ ಎದುರು 50 ರಿಂದ 60ಜನರು ಜಮಾಯಿಸಿ ತಾವೂ ವಂಚನೆಗೊಳಗಾಗಿರುವುದಾಗಿ ಹೇಳಿಕೊಂಡಿದ್ದು ಕಂಡುಬಂದಿತು.

ವಂಚನೆಗೊಳಗಾದ ವಿಜಯಪುರದ ಸೈಯದ್‌ ಮಾತನಾಡಿ, ಹೆಚ್ಚಿನ ಹಣ ಸಿಗುತ್ತದೆ ಎಂಬ ಆಸೆಯಿಂದ ತಾವೂ ಸೇರಿದಂತೆ ಕೆಲವರು, 4, 7, 10ಲಕ್ಷ ರೂ. ಹೀಗೆ ದೊಡ್ಡ ಪ್ರಮಾಣದಲ್ಲಿ ಹಣ ಹೂಡಿಕೆ ಮಾಡಿದ್ದೇವೆ. ಹಣ ನೀಡುವಂತೆ ಕೇಳಿದಾಗಲೆಲ್ಲ ಇಂದು, ನಾಳೆ ಎಂದು ಹೇಳುತ್ತಿದ್ದಾರೆ ಎಂದು ಅಳಲು ತೋಡಿಕೊಂಡರು. ಇದೇ ರೀತಿ ದಾದು, ಫಾತಿಮಾ, ಸೈಯದ್‌, ರಿಯಾಜ್‌, ರಫೀಕ್‌ ಇನ್ನಿತರರು ಸಹ ಹಣ ಕಳೆದುಕೊಂಡಿರುವುದಾಗಿ ತಿಳಿಸಿದರು.

ಬಂಧಿತ ರುಕ್ಷಿಂದ ಬಾನುಳಿಂದ ಕೃತ್ಯಕ್ಕೆ ಬಳಸಿದ ಮೊಬೈಲ್ ಫೋನ್‌ಗಳು, 105 ಗ್ರಾಂ ಬಂಗಾರದ ಒಡವೆ, 53,210ರೂ. ನಗದು, ಒಂದು ಇಕೋ ನ್ಪೋರ್ಟ್ಸ್ ಕಾರು, ಒಂದು ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿತೆಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು 14ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಟಾಪ್ ನ್ಯೂಸ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-koo

Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-koo

Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.