ಫೆ.8 ರಂದು ರಾಷ್ಟ್ರೀಯ ಲೋಕ ಅದಾಲತ್
ಹಿರಿಯ ಶ್ರೇಣಿ ನ್ಯಾಯಾಧೀಶ ಬಸವರಾಜ ಚೇಂಗಟಿ ಮಾಹಿತಿ
Team Udayavani, Jan 2, 2020, 4:27 PM IST
ಚಿಕ್ಕಮಗಳೂರು: ರಾಷ್ಟ್ರೀಯ ಲೋಕ ಅದಾಲತ್‌ನ್ನು ಫೆ.8 ರಂದು ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಶ್ರೇಣಿ ನ್ಯಾಯಾಧೀಶ ಬಸವರಾಜ ಚೇಂಗಟಿ ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯರ ದ್ವೆ„ವಾರ್ಷಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಾಷ್ಟ್ರೀಯ ಲೋಕ ಅದಾಲತ್ ರಾಷ್ಟ್ರ, ರಾಜ್ಯ, ಜಿಲ್ಲೆ ಹಾಗೂ ತಾಲೂಕುಗಳ ಆಯಾ ನ್ಯಾಯಾಲಯಗಳಲ್ಲಿ ನಡೆಯಲಿದೆ.
ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಮೋಟಾರು ವಾಹನ ಅಪಘಾತಗಳು, ಅಸಲು ದಾವೆಗಳು, ಬ್ಯಾಂಕುಗಳಿಗೆ ಸಂಬಂಧಿಸಿದ ಪ್ರಕರಣಗಳು, ವೈವಾಹಿಕ ಹಾಗೂ ಜೀವನಾಂಶ ಪ್ರಕರಣಗಳು ಸೇರಿದಂತೆ ಕಾನೂನಿನನ್ವಯ ರಾಜಿಯಾಗಬಹುದಾದ ಎಲ್ಲಾ ತರಹದ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲಾಗುತ್ತದೆ ಎಂದರು.
ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವಗಳ ಪ್ರಾಧಿಕಾರ ಇವರ ನಿರ್ದೇಶನದ ಮೇರೆಗೆ ನಡೆಯುವ ಈ ಅದಾಲತ್‌ಗಳ ಸದುಪಯೋಗವನ್ನು ಕಕ್ಷಿದಾರರು, ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದರು.
ವಿಕ್ಟಿಮ್ ಕಾಂಪೆನ್‌ಸೇಷನ್ ಯೋಜನೆಯಡಿ ಏಳು ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ಠಾಣೆಗಳಲ್ಲಿ ಕಾನೂನು ನೆರವು ಕೇಂದ್ರಗಳನ್ನು ಸ್ಥಾಪಿಸುವ ಕುರಿತು ಚರ್ಚಿಸಿ, ಎಲ್ಲಾ ಠಾಣೆಗಳಲ್ಲಿ ಕಾನೂನು ನೆರವು ಕೇಂದ್ರಗಳನ್ನು ಸ್ಥಾಪಿಸಲು ಪೊಲೀಸ್ ಠಾಣೆಗಳು ಚಿಕ್ಕದಾಗಿರುತ್ತವೆ. ಜಿಲ್ಲಾ ಕೇಂದ್ರದಲ್ಲಿ ಜಿಲ್ಲಾ ರಕ್ಷಣಾಧಿಕಾರಿಗಳ ಕಚೇರಿಯಲ್ಲಿ ಸ್ಥಾಪಿಸಲು ಕ್ರಮ ವಹಿಸಬಹುದೆಂದು ಸಭೆಯಲ್ಲಿ ತೀರ್ಮಾನಿಸಲಾಯಿತು.
ನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಬೀದಿ ನಾಯಿಗಳ ಹಾವಳಿಯನ್ನು ಕಡಿಮೆ ಮಾಡಲು ನಗರಸಭೆ ಕ್ರಮ ವಹಿಸಬೇಕೆಂದು ಹಾಗೂ ವಿಜಯನಗರ ಒಂದನೇ ಮುಖ್ಯ ರಸ್ತೆಯ ಚರಂಡಿ ಅವೈಜ್ಞಾನಿಕವಾಗಿ ನಿರ್ಮಾಣವಾಗುತ್ತಿರುವ ಕುರಿತು ಸಾರ್ವಜನಿಕರಿಂದ ದೂರುಗಳು ಬರುತ್ತಿದ್ದು, ಈ ಕುರಿತು ಪರಿಶೀಲಿಸಿ ಕ್ರಮ ವಹಿಸುವಂತೆ ನಗರ ಸಭೆ ಅಧಿಕಾರಿಗಳಿಗೆ ತಿಳಿಸಿದರು.
ಸಭೆಯಲ್ಲಿ ಉಪವಿಭಾಗಾಧಿಕಾರಿ ಎಚ್. ಎಲ್.ನಾಗರಾಜ್, ವಕೀಲರ ಸಂಘದ ಅಧ್ಯಕ್ಷ ಕೆ.ಸಿ.ಶಿವ, ಸರ್ಕಲ್ ಇನ್ಸ್‌ಪೆಕ್ಟರ್ ಸಲೀಂ
ಅಬ್ಟಾಸ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.