ಚಿಂಚೋಳಿ ಉಪ ಚುನಾವಣೆ: ಇವಿಎಂ ಹಂಚಿಕೆಗೆ ರ್‍ಯಾಂಡಮೈಸೇಶನ್
Team Udayavani, May 9, 2019, 5:19 PM IST
ಕಲಬುರಗಿ: ಚಿಂಚೋಳಿ ಮೀಸಲು ವಿಧಾನಸಭೆ ಉಪ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾ ಚುನಾವಣಾಧಿಕಾರಿ ಆರ್. ವೆಂಕಟೇಶಕುಮಾರ ನೇತೃತ್ವದಲ್ಲಿ ಇವಿಎಂ ಹಂಚಿಕೆ, ಸಿಬ್ಬಂದಿ ನಿಯೋಜನೆ ಕುರಿತಂತೆ ಯಾದೃಚ್ಛೀಕರಣ ನಡೆಸಲಾಯಿತು
ಕಲಬುರಗಿ: ಮೇ 19ರಂದು ನಡೆಯಲಿರುವ 42-ಚಿಂಚೋಳಿ ಮೀಸಲು (ಎಸ್‌ಸಿ) ವಿಧಾನಸಭೆ ಉಪ ಚುನಾವಣೆಗೆ ಸಿದ್ಧತೆ ಭರದಿಂದ ಸಾಗಿದ್ದು, ಬುಧವಾರ ಜಿಲ್ಲಾ ಚುನಾವಣಾಧಿಕಾರಿಗಳಾದ ಆರ್. ವೆಂಕಟೇಶಕುಮಾರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇವಿಎಂ ಹಂಚಿಕೆ ಹಾಗೂ ಸಿಬ್ಬಂದಿ ನಿಯೋಜನೆ ಕುರಿತಂತೆ ರ್‍ಯಾಂಡಮೈಸೇಶನ್ (ಯಾದೃಚ್ಛೀಕರಣ) ನಡೆಸಲಾಯಿತು.
42-ಚಿಂಚೋಳಿ ಮೀಸಲು (ಎಸ್.ಸಿ.) ವಿಧಾನಸಭೆ ಉಪ ಚುನಾವಣೆಗೆ ನೇಮಕವಾಗಿರುವ ಸಾಮಾನ್ಯ ವೀಕ್ಷಕ ಬಿ. ರಾಮರಾವ್ ಹಾಗೂ ಕಣದಲ್ಲಿರುವ ಅಭ್ಯರ್ಥಿಗಳು, ವಿವಿಧ ರಾಜಕೀಯ ಪಕ್ಷಗಳ ಮುಖಂಡರ ಸಮ್ಮುಖದಲ್ಲಿ ಮತಗಟ್ಟೆಗಳಿಗೆ ಮೈಕ್ರೋ ಅಬ್ಸರ್ವರ್ ನಿಯೋಜನೆ ಕುರಿತು ಮೊದಲ ಹಂತದ ರ್‍ಯಾಂಡಮೈಸೇಶನ್ ಹಾಗೂ ಮತಗಟ್ಟೆಗಳಿಗೆ ಚುನಾವಣಾ ಸಿಬ್ಬಂದಿ, ಇವಿಎಂಗಳ ಹಂಚಿಕೆ ಕುರಿತು 2ನೇ ಹಂತದ ರ್‍ಯಾಂಡಮೈಸೇಶನ್ ನಡೆಸಲಾಯಿತು.
ಚಿಂಚೋಳಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಒಟ್ಟು 241 ಮತಕೇಂದ್ರಗಳ ಪೈಕಿ, 60 ಸಂದಿಗ್ದ (ಅತಿ ಸೂಕ್ಷ್ಮ) ಮತಗಟ್ಟೆಗಳೆಂದು ಗುರುತಿಸಲಾಗಿದ್ದು, ಕೇಂದ್ರ ಪ್ಯಾರಾ ಮಿಲಿಟರಿ ಪಡೆ ನಿಯೋಜಿಸಲಾಗುತ್ತಿದೆ. ಈ ಪೈಕಿ 25 ಮತಕೇಂದ್ರಗಳಲ್ಲಿ ವೆಬ್ ಕ್ಯಾಮೆರಾ ಅಳವಡಿಸಲಾಗಿದೆ. ಉಳಿದ 35 ಮತಗಟ್ಟೆಗಳಿಗೆ ಮೈಕ್ರೋ ಅಬ್ಸರ್ವರ್ ನೇಮಿಸುವ ರ್‍ಯಾಂಡಮೈಸೇಶನ್ ಪ್ರಕ್ರಿಯೆ ಕೈಗೊಳ್ಳಲಾಯಿತು.
ಚಿಂಚೋಳಿ ವಿಧಾನಸಭೆ ಉಪ ಚುನಾವಣೆ ಚುನಾವಣಾಧಿಕಾರಿ ಸೋಮಶೇಖರ ಎಸ್.ಜಿ., ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಯೋಗೇಶ, ವೆಬ್ ಕ್ಯಾಸ್ಟಿಂಗ್ ಮತ್ತು ಮೈಕ್ರೋ ಅಬ್ಸರ್ವರ್ ನೋಡಲ್ ಅಧಿಕಾರಿ ಕೆ. ರಾಮೇಶ್ವರಪ್ಪ, ಎನ್‌ಐಸಿ ಕೇಂದ್ರದ ಅಧಿಕಾರಿ ಸುಧೀಂದ್ರ ಅವಧಾನಿ ಇದ್ದರು.
ಕಲಬುರಗಿ ಲೋಕಸಭೆ ಚುನಾವಣೆ ಕರ್ತವ್ಯಕ್ಕೆ ಗೈರು ಹಾಜರಾದ ಸಿಬ್ಬಂದಿ ವಿರುದ್ಧ ಕಾರಣ ಕೇಳಿ ನೋಟಿಸ್ ನೀಡಲಾಗಿತ್ತು. ಇದೀಗ ಕರ್ತವ್ಯ ಲೋಪ ಎಸಗಿರುವಂತ ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಹಾಗೆಯೇ ಚಿಂಚೋಳಿ ವಿಧಾನಸಭೆ ಉಪ ಚುನಾವಣೆಗೆ ಸಂಬಂಧಿಸಿದಂತೆ ಮೇ 3ರಂದು ಕರೆದಿದ್ದ ತರಬೇತಿಗೆ ಗೈರು ಹಾಜರಾದ ಸಿಬ್ಬಂದಿಗೆ ಕಾರಣ ಕೇಳಿ ನೋಟಿಸ್ ನೀಡುವಂತೆ ಸೂಚಿಸಲಾಗಿದೆ.
•ಆರ್. ವೆಂಕಟೇಶಕುಮಾರ, ಜಿಲ್ಲಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್ ವಿಚಾರವಾಗಿ ವಾಗ್ವಾದ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.