ಕಾಂಗ್ರೆಸ್‌ಗೆ ಆಪರೇಷನ್ ಕಮಲ ಭೀತಿ!
ಇನ್ನೂ ಆಗಿಲ್ಲ ಅಧ್ಯಕ್ಷ-ಉಪಾಧ್ಯಕ್ಷ ಮೀಸಲಾತಿ ಪ್ರಕಟ
Team Udayavani, Dec 29, 2019, 3:18 PM IST
ಶಾಮರಾವ ಚಿಂಚೋಳಿ
ಚಿಂಚೋಳಿ: ಪುರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಮೀಸಲಾತಿ ಕುರಿತು ರಾಜ್ಯ ಚುನಾವಣಾ ಆಯೋಗ ಪಟ್ಟಿ ಪ್ರಟಿಸುವ ಮುನ್ನವೇ ಆಪರೇಶನ್ ಕಮಲದ ಭೀತಿಯಿಂದ ಕಾಂಗ್ರೆಸ್ ಪಕ್ಷದ ಪುರಸಭೆ ಚುನಾಯಿತ ಸದಸ್ಯರೆಲ್ಲ ಒಟ್ಟಾಗಿ ತೆಲಂಗಾಣಕ್ಕೆ ಪ್ರವಾಸಕ್ಕೆ ತೆರಳಿದ್ದಾರೆ ಎನ್ನಲಾಗಿದೆ.
ಪುರಸಭೆಯ 23 ಸ್ಥಾನಗಳಿಗೆ ಕಳೆದ 2018 ಸೆ.3ರಂದು ಚುನಾವಣೆ ನಡೆದಿತ್ತು. ಚುನಾವಣೆಯಲ್ಲಿ 12 ಕಾಂಗ್ರೆಸ್, ಐವರು ಬಿಜೆಪಿ, ಒಬ್ಬರು ಜೆಡಿಎಸ್, ಒಬ್ಬರು ಬಿಎಸ್‌ಪಿ, ನಾಲ್ವರು ಪಕ್ಷೇತರರು ಗೆಲುವು ಸಾ ಧಿಸಿದ್ದರು. ಆಗ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ರಾಜ್ಯ ಚುನಾವಣೆ ಆಯೋಗ ಪುರಸಭೆ ಅಧ್ಯಕ್ಷ ಬಿಸಿಎ ಮತ್ತು ಬಿಸಿಬಿ ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿ ಘೋಷಣೆ ಮಾಡಿತ್ತು. ಆದರೆ ಮೀಸಲಾತಿಯಲ್ಲಿ ಆಗಿರುವ ಅನ್ಯಾಯ ಸರಿಪಡಿಸುವುದಕ್ಕಾಗಿ ಕೆಲವರು ನ್ಯಾಯಾಲಯಕ್ಕೆ ಮೊರೆ ಹೋಗಿದ್ದರಿಂದ ಕಳೆದ 15 ತಿಂಗಳಿಂದ ಇನ್ನುವರೆಗೆ ಯಾವುದೇ ಮೀಸಲಾಗಿ ಪ್ರಕಟವಾಗಿಲ್ಲ.
ಪುರಸಭೆಗೆ ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ (ಮಹಿಳೆ), ಉಪಾಧ್ಯಕ್ಷ ಸ್ಥಾನ ಬಿಸಿಬಿ (ಮಹಿಳೆ) ಇಲ್ಲವೇ ಎಸ್‌ಟಿಗೆ ಬದಲಾವಣೆ ಆಗಲಿದೆ. ಇನ್ನು ಕೆಲವೆಡೆ ಈ ಮೊದಲು ಹೊರಡಿಸಿದ ಮೀಸಲಾತಿಯೇ ಪ್ರಕಟವಾಗಲಿದೆ ಎನ್ನುವ ವದಂತಿ ಹರಡಿದೆ. ಹೀಗಾಗಿ ಸ್ಪಷ್ಟ ಬಹುಮತ ಹೊಂದಿದ ಕಾಂಗ್ರೆಸ್ ಪಕ್ಷದ 12 ಸದಸ್ಯರು ಬಿಜೆಪಿಯ
ಆಪರೇಶನ್ ಕಮಲ ಭೀತಿಯಿಂದ ಶುಕ್ರವಾರ ಸಂಜೆ ಪ್ರವಾಸಕ್ಕೆ ತೆರಳಿದ್ದಾರೆ ಎನ್ನಲಾಗಿದೆ.
ಚಿಂಚೋಳಿ ಮೀಸಲು ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಪುರಸಭೆ ಸದಸ್ಯರು ತೆರೆಮರೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸಿ ಪ್ರಚಾರ ನಡೆಸಿದ್ದರಿಂದ ವಾರ್ಡ್ 21 ಕಾಂಗ್ರೆಸ್ ಪಕ್ಷದ ಪುರಸಭೆ ಸದಸ್ಯೆ ಸವಿತಾಬಾಯಿ ರಾಜು ಪವಾರ ಬಿಜೆಪಿಗೆ ಸೇರಲಿದ್ದಾರೆ ಎಂದು ಹೇಳಲಾಗುತ್ತಿದೆ. ಅವರ ಪತಿ ರಾಜು ಪವಾರ ಬಿಜೆಪಿ ಪರ ಚುನಾವಣೆ ಪ್ರಚಾರ ನಡೆಸಿದ್ದರಿಂದ ಅವರು ಬಿಜೆಪಿಗೆ ಹೋಗುವುದು ಖಚಿತವಾಗಿದೆ. ಆದರೆ ಕಾಂಗ್ರೆಸ್ ಎಲ್ಲ ಸದಸ್ಯರಿಗೆ ವಿಪ್ ಜಾರಿ ಮಾಡುವ ಸಾಧ್ಯತೆ ಇದೆ ಪುರಸಭೆ ಪಕ್ಷೇತರ ಸದಸ್ಯರಾದ ಆನಂದ ಟೈಗರ್, ಬಸವರಾಜ ಶಿರಸಿ, ರಾಧಾಬಾಯಿ ವಲಗಿರಿ, ಭೀಮರಾವ್ ಸುಬ್ಬಣ್ಣ ರಾಠೊಡ ಅವರನ್ನು ಬಿಜೆಪಿಯತ್ತ ಸೆಳೆಯಲು ತೆರೆಮರೆಯಲ್ಲಿ ಕಸರಸ್ತು ನಡೆಸುತ್ತಿದೆ. ಅಲ್ಲದೇ ಜೆಡಿಎಸ್ ಸದಸ್ಯನಾಗೀಂದ್ರಪ್ಪ ಗುರಂಪಳ್ಳಿ, ಬಿಎಸ್‌ಪಿ
ಸದಸ್ಯ ಸುಶೀಲಕುಮಾರ ಬೊಮ್ಮನಳ್ಳಿ ಅವರನ್ನು ಬಿಜೆಪಿ ಮುಖಂಡರು ಭೇಟಿ ಮಾಡಿ ಬಿಜೆಪಿಗೆ ಬೆಂಬಲ ಸೂಚಿಸುವಂತೆ ಮನವೊಲಿಸುತ್ತಿದ್ದಾರೆ ಎನ್ನಲಾಗಿದೆ. ಆದರೆ ಪಕ್ಷೇತರ, ಜೆಡಿಎಸ್ ಮತ್ತು ಬಿಎಸ್‌ಪಿ ಪುರಸಭೆ ಸದಸ್ಯರು ಬಿಜೆಪಿಗೆ ಬೆಂಬಲಿಸುವ ಕುರಿತು ಯಾವುದೇ ನಿರ್ಧಾರ ಕೈಗೊಂಡಿಲ್ಲ ಎನ್ನಲಾಗಿದೆ.
ಪುರಸಭೆಯಲ್ಲಿ 2013ರಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆದು ಅಧಿಕಾರದ ಚುಕ್ಕಾಣಿ ಹಿಡಿದಿತ್ತು. ಅಲ್ಲದೇ 2018ರ ಚುನಾವಣೆಯಲ್ಲಿಯೂ ಕಾಂಗ್ರೆಸ್ 12 ಸ್ಥಾನಗಳಲ್ಲಿ ಬಹುಮತ ಹೊಂದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.