ಉಪವಾಸ ಸತ್ಯಾಗ್ರಹ:ಐವರು ಅಸ್ವಸ್ಥ
ಮೆಟ್ರಿಕ್ಸ್ ಅಗ್ರೋ ವಿದ್ಯುತ್ ಉತ್ಪಾದನಾ ಘಟಕ ಬಂದ್‌ಗೆ ಆಗ್ರಹಿಸಿ ಧರಣಿ
Team Udayavani, Oct 18, 2019, 10:55 AM IST
ಚಿಂಚೋಳಿ: ಪಟ್ಟಣದ ಹೊರ ವಲಯ ಪೋಲಕಪಳ್ಳಿ ಬಳಿ ಸ್ಥಾಪಿಸಲಾಗಿರುವ ಮೆಟ್ರಿಕ್ಸ್ ಅಗ್ರೋ ಪ್ರಾವೇಟ್ ವಿದ್ಯುತ್ ಉತ್ಪಾದನಾ ಘಟಕ ಬಂದ್ ಮಾಡುವಂತೆ ಒತ್ತಾಯಿಸಿ ನಡೆಸುತ್ತಿರುವ ಉಪವಾಸ ಸತ್ಯಾಗ್ರಹದಲ್ಲಿ ಐವರು ಅಸ್ವಸ್ಥರಾಗಿದ್ದು, ವೈದ್ಯರು ಧರಣಿ ಸ್ಥಳದಲ್ಲಿ ಗುರುವಾರ ಚಿಕಿತ್ಸೆ ನೀಡಿದರು.
ಮೆಟ್ರಿಕ್ಸ್ ಅಗ್ರೋ ಪ್ರಾವೇಟ್ ವಿದ್ಯುತ್ ಉತ್ಪಾದನಾ ಘಟಕ ವಿಷಾನೀಲ ಬಿಡುತ್ತಿದೆ. ಇದರಿಂದ ಸಾರ್ವಜನಿಕರು ಮತ್ತು ಶಾಲೆ ಕಾಲೇಜು ವಿದ್ಯಾರ್ಥಿಗಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಹಾಗಾಗಿ ಘಟಕ ಬಂದ್ ಮಾಡುವಂತೆ ಒತ್ತಾಯಿಸಿ ತಾಲೂಕು ನಾಗರಿಕ ಹಿತರಕ್ಷಣಾ ವೇದಿಕೆ ಮುಖಂಡರು ಕಳೆದ ನಾಲ್ಕು ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.
ಮುಖಂಡರಾದ ವಿಶ್ವನಾಥ ಬೀರನಳ್ಳಿ, ಸಂತೋಷ ಗುತ್ತೇದಾರ, ಲೋಕೇಶ ಐನೋಳಿ, ಗೋಪಾಲ ರಾಂಪೂರೆ, ಆನಂದ ಟೈಗರ್, ಉಲ್ಲಾಸ ಕೆರೋಳಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಡಾ| ಮಹಮ್ಮದ್ ಶಫೀ, ಡಾ| ಮಹಮ್ಮದ್ ಗಫಾರ, ತಾಲೂಕು ಸಾರ್ವಜನಿಕ ಆಸ್ಪತ್ರೆ ವೈದ್ಯಾಧಿ ಕಾರಿ ಸಂಜಯ ಗೋಳೆ ಹಾಗೂ ಸಿಬ್ಬಂದಿ ಸ್ಥಳದಲ್ಲಿಯೇ ಧರಣಿನಿತರ ಆರೋಗ್ಯ ತಪಾಸಣೆ ಮಾಡಿ ಚಿಕಿತ್ಸೆ ನೀಡಿದರು.
ಧರಣಿ ಉಪವಾಸ ಸತ್ಯಾಗ್ರಹ ಸ್ಥಳದಲ್ಲಿ ಇಬ್ಬರು ವೈದ್ಯರು, ಒರ್ವ ನರ್ಸ್ ನಿಯೋಜಿಸಲಾಗಿದೆ ಎಂದು ತಹಶೀಲ್ದಾರ್ ಪಂಡಿತ ಬಿರಾದಾರ ತಿಳಿಸಿದ್ದಾರೆ.
ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ನಿಯಮದ ಪ್ರಕಾರ ವಿದ್ಯುತ್ ಉತ್ಪಾದನಾ ಘಟಕ ಕೆಲಸ ಮಾಡುತ್ತಿಲ್ಲ. ಇದರಿಂದ ಸುತ್ತಲಿನ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ.
ಇಂತಹ ಸನ್ನಿವೇಶದಲ್ಲಿ ಜನರ ಬದುಕು ನರಕಯಾತನೆಯಾಗುತ್ತಿದೆ. ಶಾಸಕರು ಇದರ ಬಗ್ಗೆ ಉನ್ನತ ಮಟ್ಟದ ಅಧಿ ಕಾರಿಗಳೊಂದಿಗೆ ಸಭೆ ನಡೆಸಿ ಘಟಕ ಬಂದ್ ಮಾಡಿಸಬೇಕು ಎಂದು ತಾಲೂಕು ಜೆಡಿಎಸ್ ಅಧ್ಯಕ್ಷ ರವಿಶಂಕರರೆಡ್ಡಿ ಮುತ್ತಂಗಿ ಆಗ್ರಹಿಸಿದರು.
ಲೂಕು ವಕೀಲರ ಸಂಘದ ಅಧ್ಯಕ್ಷ ಶ್ರೀಮಂತ ಕಟ್ಟಿಮನಿ, ವಾಮನರಾವ ಕೊರವಿ, ಪುರಸಭೆ ಸದಸ್ಯ ಬಸವರಾಜ ಸಿರಸಿ, ಅಮರ ಲೊಡನೊರ, ವಿಜಯ ಶಾಬಾದಿ, ಆರ್. ಗಣಪತರಾವ, ಶ್ರೀಕಾಂತ ಜಾನಕಿ, ತುಳಸೀರಾಮ ಪೋಳ, ಪಂಢರಿ ಲೊಡನೊರ, ನಾಗೇಶ ಕಟ್ಟಿ, ಮಾಜೀದ್ ಪಟೇಲ್, ಹರ್ಷವರ್ಧನ ಮ್ಯಾಕಲ್ ಭಾಗವಹಿಸಿದ್ದಾರೆ.
ಸಿಪಿಐ ಎಚ್.ಎಂ. ಇಂಗಳೇಶ್ವರ ಮತ್ತು ಪಿಎಸ್‌ಐ ಸಂತೋಷ ರಾಠೊಡ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.