ಮುಲ್ಲಾಮಾರಿ ನಿರಾಶ್ರಿತರ ನರಕಯಾತನೆ
ಕೋಟ್ಯಂತರ ರೂ. ಖರ್ಚಾದರೂ ಕಾಮಗಾರಿ ಕಳಪೆ ಬಳಸುವ ಮುನ್ನವೇ ಹಾಳು ಮರುಗುತ್ತಿದ್ದಾರೆ ಪುನರ್ವಸತಿ ಕೇಂದ್ರದ ನಿವಾಸಿಗಳು
Team Udayavani, Dec 18, 2019, 10:45 AM IST
ಶಾಮರಾವ ಚಿಂಚೋಳಿ
ಚಿಂಚೋಳಿ: ಕೆಳದಂಡೆ ಮುಲ್ಲಾಮಾರಿ ನೀರಾವರಿ ಯೋಜನೆ ವ್ಯಾಪ್ತಿಯ ಮುಳುಗಡೆ ಪುನರ್ವಸತಿ ಕೇಂದ್ರಗಳಲ್ಲಿ ವಾಸಿಸುವ ಜನರಿಗಾಗಿ ಕೈಗೊಂಡಿರುವ ಕಾಮಗಾರಿಗಳನ್ನು ಕಳಪೆ ಮಟ್ಟದಲ್ಲಿ ನಿರ್ಮಿಸಲಾಗಿದ್ದು. ಸಂತ್ರಸ್ತರು ಇವುಗಳನ್ನು ಉಪಯೋಗಿಸುವ ಮೊದಲೇ ಹಾಳಾಗಿವೆ.
ಇದರಿಂದ ಸರ್ಕಾರ ನೀಡಿರುವ ಕೋಟ್ಯಂತರ ರೂ. ವ್ಯರ್ಥವಾಗಿದೆ. ತಾಲೂಕಿನ ಕೆಳದಂಡೆ ಮುಲ್ಲಾಮಾರಿ ನೀರಾವರಿ ಯೋಜನೆಯಲ್ಲಿ ಚೆನ್ನೂರ, ಗಡಿಲಿಂಗದಳ್ಳಿ, ಯಲ್ಮಡಗಿ ಗ್ರಾಮಗಳು ಸಂಪೂರ್ಣ ಮುಳುಗಡೆ ಆಗಿವೆ. ಈ ಗ್ರಾಮಸ್ಥರಿಗೆ ಅನುಕೂಲಕ್ಕೆ ತಕ್ಕಂತೆ ಒಟ್ಟು ಏಳು ಪುನರ್ವಸತಿ ಕೇಂದ್ರಗಳನ್ನು ನಿರ್ಮಿಸಲಾಗಿದೆ. ಆದರೆ ಪುನರ್ವಸತಿ ಕೇಂದ್ರಗಳಿಗೆ ನಿರ್ಮಿಸಿದ ಶೆಡ್‌ಗಳಲ್ಲಿ ಕಳೆದ ಮೂರು ದಶಕಗಳಿಂದ ವಾಸಿಸುತ್ತಿರುವ ನಿರಾಶ್ರತರಿಗೆ ಮೂಲ ಸೌಕರ್ಯಗಳನ್ನು ಒದಗಿಸಿಲ್ಲ. ಇದರಿಂದ ನಿರಾಶ್ರಿತರು ಪರದಾಡುವಂತೆ ಆಗಿದೆ.
ಸಂತ್ರಸ್ತರಿಗೆ ಕರ್ನಾಟಕ ನೀರಾವರಿ ನಿಗಮದಿಂದ ಕೋಟ್ಯಂತರ ರೂ. ಬಿಡುಗಡೆ ಮಾಡಿ ಡಾಂಬರೀಕರಣ ರಸ್ತೆ, ಕುಡಿಯುವ ನೀರು, ಚರಂಡಿ, ಶೌಚಾಲಯ, ಸಮುದಾಯ ಭವನ, ಶಾಲೆ ಕೋಣೆ, ದೇವಾಲಯ, ಮಸೀದಿ, ಕಲ್ಯಾಣ ಮಂಟಪಗಳನ್ನು ನಿರ್ಮಿಸಲಾಗಿದೆ. ಆದರೆ ಇವೆಲ್ಲ ಸೌಲಭ್ಯಗಳನ್ನು ಬಳಕೆ ಮಾಡುವ ಮೊದಲೇ ಕೆಟ್ಟು ಹೋಗಿವೆ.
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿ ಕಾರದಲ್ಲಿದ್ದಾಗ ಆಗಿನ ಶಾಸಕ ಡಾ| ಉಮೇಶ ಜಾಧವ ಮನವಿ ಮೇರೆಗೆ ಜಲ ಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾಗಿದ್ದ ಡಾ| ಶರಣಪ್ರಕಾಶ ಪಾಟೀಲ, ಜಲ ಸಂಪನ್ಮೂಲ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಕೇಶಸಿಂಗ್ ಕೆಳದಂಡೆ ಮುಲ್ಲಾಮಾರಿ ನೀರಾವರಿ ಯೋಜನೆಯ ಮುಳುಗಡೆ ಪ್ರದೇಶದ ಯಲ್ಮಾಡಗಿ ಪುನರ್ವಸತಿ ಕೇಂದ್ರ 2ಕ್ಕೆ ನವೆಂಬರ್ 2016ರಂದು ಭೇಟಿ ನೀಡಿದಾಗ, ಅಲ್ಲಿನ ಸಂತ್ರಸ್ತರ ಸಮಸ್ಯೆಗೆ ಸ್ಪಂದಿಸಿದ್ದ ಜಲ ಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ ಯೋಜನೆ ಎಇಇ ಅವರೊಂದಿಗೆ ಚರ್ಚಿಸಿ 19 ಕೋಟಿ ರೂ. ಅನುದಾನ ಬಿಡುಗಡೆಗೊಳಿಸಿದ್ದರು. ಅಲ್ಲದೇ ಯೋಜನೆ ಆಧುನೀಕರಣಕ್ಕಾಗಿ 39 ಕೋಟಿ ರೂ. ನೀಡಿದ್ದರು.
ಮುಳುಗಡೆ ಸಂತ್ರಸ್ತರಿಗೆ ಮೂಲ ಸೌಕರ್ಯಕ್ಕಾಗಿ ನೀಡಿದ ಅನುದಾನದಲ್ಲಿ ಚರಂಡಿ, ರಸ್ತೆ ಡಾಂಬರೀಕರಣ, ಶೌಚಾಲಯ, ಸಮುದಾಯ ಭವನಗಳು, ವಿದ್ಯುತ್ ಸಂಪರ್ಕದ ಕಂಬಗಳನ್ನು ನೆಡುವ ಕೆಲಸಗಳನ್ನು ಕಳಪೆಯಾಗಿ ಮಾಡಲಾಗಿದೆ ಎಂದು ನಿರಾಶ್ರಿತರು ದೂರಿದ್ದಾರೆ.
ಡಾಂಬರೀಕರಣ ರಸ್ತೆ ವಾಹನಗಳು ಸಂಚರಿಸುವ ಮೊದಲೇ ಕಿತ್ತುಹೋಗಿ, ಅನೇಕ ಕಡೆಗಳಲ್ಲಿ ತೆಗ್ಗು ಬಿದ್ದಿವೆ. ಚರಂಡಿಗಳಲ್ಲಿ ಕಲ್ಲುಗಳೇ ತುಂಬಿಕೊಂಡಿವೆ. ಕೆಲವೆಡೆ ಕಿತ್ತು ಹೋಗಿವೆ. ಮೂಲ ಸೌಕರ್ಯಗಳ ಕಾಮಗಾರಿಗಳೆಲ್ಲವೂ ಸಂಪೂರ್ಣ ಕಳಪೆಮಟ್ಟದಿಂದ ಕೂಡಿವೆ. ನಮ್ಮ ಹಿರಿಯರು ಗಳಿಸಿದ ಆಸ್ತಿಯನ್ನು ಯೋಜನೆಗೆ ನೀಡಿ ನಮ್ಮ ಜೀವನ ಹಾಳು ಮಾಡಿಕೊಂಡಿದ್ದೇವೆ ಎನ್ನುತ್ತಾರೆ ನಿರಾಶ್ರಿತರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ
Cleanliness: ಮನೆ ಮನೆಯಿಂದ ದೇಶವೇ ಸ್ವಚ್ಚ
Congress: ದ.ಕ ಗ್ರಾಮ ಪಂಚಾಯತ್; 24ರಲ್ಲಿ 19 ಸ್ಥಾನ ಕಾಂಗ್ರೆಸ್ ಬೆಂಬಲಿತರಿಗೆ ಗೆಲುವು
Siddapura: ಬುಲೆಟ್ ಬೈಕಿಗೆ ಜೆಸಿಬಿ ಡಿಕ್ಕಿ; ಸವಾರರಿಗೆ ಗಾಯ
Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.