ಅವ್ಯವಸ್ಥೆ ಮಧ್ಯೆ ನಾಡಕಚೇರಿ ಉತ್ತಮ ಸೇವೆ
ಸಿಬ್ಬಂದಿ ಸಮಸ್ಯೆ ಕೇಳುವವರೇ ಇಲ್ಲ ಐನಾಪುರದಲ್ಲಿ ಸಹಕಾರಿ ಬ್ಯಾಂಕ್‌ನಲ್ಲೇ ಕಾರ್ಯ ನಿರ್ವಹಣೆ
Team Udayavani, Jan 9, 2020, 10:40 AM IST
ಚಿಂಚೋಳಿ: ತಾಲೂಕಿನ ಗ್ರಾಮೀಣ ಪ್ರದೇಶದಲ್ಲಿ ಜನಪರ ಆಡಳಿತ ಕೊಡುವ ದೃಷ್ಟಿಯಿಂದ ರಾಜ್ಯ ಸರಕಾರ ನಾಡ ಕಚೇರಿಗಳನ್ನು ಪ್ರಾರಂಭಿಸಿದೆ. ಆದರೆ ಕೆಲ ನಾಡ ಕಚೇರಿಗಳು ಮೂಲ ಸೌಕರ್ಯಗಳಿಂದ ವಂಚಿತವಾಗಿ ನರಳಾಡುತ್ತಿವೆ. ಇನ್ನು ಕೆಲವು ನಾಡ ಕಚೇರಿಗಳು ಸ್ವಂತ ಕಟ್ಟಡ ಇಲ್ಲದೇ ಬಾಡಿಗೆ ಕಟ್ಟಡಗಳಲ್ಲಿರುವ ಅವ್ಯವಸ್ಥೆ ಮಧ್ಯೆಯೇ ನಿತ್ಯ ಸಾರ್ವಜನಿಕರಿಗೆ ಸೇವೆ ನೀಡುತ್ತಿವೆ.
ತಾಲೂಕಿನ ಸುಲೇಪೇಟ, ಕೋಡ್ಲಿ, ಐನಾಪುರ ಹೋಬಳಿ ಪ್ರದೇಶಗಳಲ್ಲಿ ನಾಡ ಕಚೇರಿಗಳು ಕಳೆದ 25 ವರ್ಷಗಳಿಂದ ಕೆಲಸ ನಿರ್ವಹಿಸುತ್ತಿವೆ. ಆದರೆ ಕಚೇರಿಗಳಲ್ಲಿ ಮೂಲ ಸೌಕರ್ಯಗಳೇ ಇಲ್ಲ. ಸುಲೇಪೇಟ ಮತ್ತು ಐನಾಪುರ ಹೋಬಳಿಯಲ್ಲಿ ಸ್ವಂತ ಕಟ್ಟಡವಿದೆ. ಆದರೆ ಕೋಡ್ಲಿಯಲ್ಲಿ ಪ್ರತ್ಯೇಕ ಕಟ್ಟಡವಿಲ್ಲ. ಆದ್ದರಿಂದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಾಡ ಕಚೇರಿ ತನ್ನ ಕಾರ್ಯ ನಿರ್ವಹಿಸುತ್ತಿದೆ. ನಾಡ ಕಚೇರಿ ಸಿಬ್ಬಂದಿ ಸಮಸ್ಯೆ ಕೇಳುವವರೇ ಇಲ್ಲದಂತಾಗಿದೆ. ನಾಡ ಕಚೇರಿಗಳಲ್ಲಿ ಕುಡಿಯುವ ನೀರು, ಶೌಚಾಲಯ, ವಿದ್ಯುತ್ ಉಪಕರಣಗಳ ಅವ್ಯವಸ್ಥೆ ಮಧ್ಯೆಯೇ ಜನ ಸಾಮಾನ್ಯರಿಗೆ ಸಿಬ್ಬಂದಿ ಉತ್ತಮ ಸೇವೆ ನೀಡುತ್ತಿದ್ದಾರೆ.
ಸುಲೇಪೇಟ ನಾಡ ಕಚೇರಿಯು ಶಿಕ್ಷಣ ಇಲಾಖೆಗೆ ಒಳಪಟ್ಟಂತಹ ಸಿಆರ್‌ಸಿ ಕೇಂದ್ರದಲ್ಲಿ ಕಳೆದ 15 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದೆ. ಐನಾಪುರ ನಾಡ ಕಚೇರಿ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ಖಾಸಗಿ ಕಟ್ಟಡದಲ್ಲಿ ಕೆಲಸ ನಿರ್ವಹಿಸುತ್ತಿದೆ.
ತಾಲೂಕಿನ ಎಲ್ಲ ನಾಡ ಕಚೇರಿಗಳಲ್ಲಿ ಸಾರ್ವಜಕನಿಕರು ಕುಳಿತುಕೊಳ್ಳಲು ಫ್ಯಾನ್, ಕುರ್ಚಿಗಳ ವ್ಯವಸ್ಥೆ ಇಲ್ಲ. ಸರ್ಕಾರದ ವಿವಿಧ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಆಗಮಿಸುವ ಸಾರ್ವಜನಿಕರು ನಿಂತುಕೊಂಡೇ ಅರ್ಜಿ ನಮೂನೆ ತುಂಬಬೇಕು. ಕಚೇರಿ ಸಿಬ್ಬಂದಿ ಊಟಕ್ಕೆ ಹೋದರೆ ಅವರಿಗಾಗಿ ತಾಸು ಗಟ್ಟಲೆ ನಿಲ್ಲಬೇಕು. ಇಲ್ಲವೇ ಕಚೇರಿ ಎದುರೇ ಕುಳಿತುಕೊಳ್ಳುವಂತಾಗಿದೆ. ಆದ್ದರಿಂದ ಕಚೇರಿಗೆ ಆಗಮಿಸುವ ಜನರಿಗೆ ಕುರ್ಚಿಗಳ ವ್ಯವಸ್ಥೆ ಮಾಡಬೇಕು ಎಂದು ಸಾಮಾಜಿಕ ಕಾರ್ಯಕರ್ತ ಅಂಬರೀಶ ಗೋಣಿ ಒತ್ತಾಯಿಸಿದ್ದಾರೆ.
ನಾಡ ಕಚೇರಿಗಳಲ್ಲಿ ವಿದ್ಯುತ್ ಸಂಪರ್ಕ ಸಮಸ್ಯೆ ಹೆಚ್ಚಾಗಿದೆ. ವಿದ್ಯುತ್ ಸಂಪರ್ಕ ಕಡಿತವಾದರೆ ಕಚೇರಿ ಕೆಲಸಗಳು ಸ್ಥಗಿತಗೊಳ್ಳುತ್ತವೆ. ನಾಡ ಕಚೇರಿಗಳಲ್ಲಿ ವಿವಿಧ ಪ್ರಮಾಣ ಪತ್ರಕ್ಕೆ ಅರ್ಜಿ ಸಲ್ಲಿಸಲು ಜನರು ನಿತ್ಯ ಸಾಲುಗಟ್ಟಿ ನಿಲ್ಲುತ್ತಾರೆ. ವಿದ್ಯುತ್ ಸಂಪರ್ಕ ಕಡಿತವಾದರೆ ದಿನವಿಡಿ ಕಾಯುವಂತಾಗುತ್ತಿದೆ. ಇದರಿಂದ 30-40 ಕಿ.ಮೀ ದೂರದಿಂದ ಬರುವ ಜನರು ನಿರಾಶೆ ಪಡುವಂತಾಗುತ್ತದೆ. ಇಷ್ಟೆಲ್ಲ ಸಮಸ್ಯೆಗಳಿದ್ದರೂ ಕಂದಾಯ ಇಲಾಖೆ ಅ ಧಿಕಾರಿಗಳು ಮತ್ತು ಶಾಸಕರು, ಸಂಸದರು ಗಮನ ಹರಿಸುತ್ತಿಲ್ಲ ಎಂದು ಐನಾಪುರ ಗ್ರಾಮದ ಶಿವಾನಂದ ಪಾಟೀಲ ದೂರಿದ್ದಾರೆ.
ನಾಡ ಕಚೇರಿಯಲ್ಲಿ ವಿದ್ಯುತ್ ಉಪಕರಣಗಳು ಕೆಟ್ಟು ತೊಂದರೆ ಆಗುತ್ತಿದೆ. ವಿದ್ಯುತ್ ಸಮಸ್ಯೆ ಆದರೆ ಅಗತ್ಯ ದಾಖಲೆ ಸರಿಯಾದ ಸಮಯಕ್ಕೆ ಪಡೆಯಲಾಗದೇ ರೈತರು, ಕೃಷಿ ಕೂಲಿಕಾರರು, ಕಾರ್ಮಿಕರು, ಶಾಲೆ-ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ. ಕಂದಾಯ ಇಲಾಖೆ ಅಧಿಕಾರಿಗಳು ಗಮನ ಹರಿಸಿ ನಾಡಕಚೇರಿಗಳಲ್ಲಿ ಬ್ಯಾಟರಿಗಳನ್ನು ಅಳವಡಿಸಿ ಸಮಸ್ಯೆ ಬಗೆಹರಿಸಬೇಕು.
ಭೀಮಶೆಟ್ಟಿ ಎಂಪಳ್ಳಿ,
ಜಿಲ್ಲಾ ಪ್ರಾಂತ ಕೃಷಿ ಕೂಲಿಕಾರರ ಸಂಘದ ಜಿಲ್ಲಾಧ್ಯಕ್ಷ
ನಾಡ ಕಚೇರಿಯಲ್ಲಿ ಯುಪಿಎಸ್ ಬ್ಯಾಟರಿಗಳು ಹಾಳಾಗಿರುವ ಕುರಿತು ಗಮನಕ್ಕೆ ಬಂದಿದೆ. ಜಿಲ್ಲಾಧಿಕಾರಿ ಗಮನಕ್ಕೆ ತರಲಾಗಿದೆ. ಶೀಘ್ರವೇ ಎಲ್ಲ ನಾಡ ಕಚೇರಿಗಳಲ್ಲಿ ಯುಪಿಎಸ್ ಬ್ಯಾಟರಿ ವ್ಯವಸ್ಥೆ ಮಾಡಿ, ಸಾರ್ವಜನಿಕರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲಾಗುವುದು.
ಅರುಣಕುಮಾರ ಕುಲಕರ್ಣಿ,
ತಹಶೀಲ್ದಾರ್
ಶಾಮರಾವ ಚಿಂಚೋಳಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.