ಗ್ರಾಮಗಳ ಸಮಸ್ಯೆ ಬಗೆಹರಿಸಿ
ಸಮರ್ಪಕ ನೀರು-ವಿದ್ಯುತ್ ಒದಗಿಸಿ•ಹಾಸ್ಟೆಲ್ನಲ್ಲಿ ಗುಣಮಟ್ಟದ ಊಟ ನೀಡಿ
Team Udayavani, Jul 27, 2019, 12:44 PM IST
ಚಿಂಚೋಳಿ: ಚಿಮ್ಮನಚೋಡ ಗ್ರಾಮದಲ್ಲಿ ದಲಿತ ಸೇನೆ ಕಾರ್ಯಕರ್ತರು ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಸ್ತೆ ತಡೆ ನಡೆಸಿದರು. ಬಂಡಪ್ಪ ಯಂಗನೋರ, ಜಗದೇವ ಗೌತಮ, ಬಸವರಾಜ ಇದಲಾಯಿ ಇನ್ನಿತರರಿದ್ದರು.
ಚಿಂಚೋಳಿ: ತಾಲೂಕಿನ ಚಿಮ್ಮನಚೋಡ ಜಿಪಂ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸಲು ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ತಾಲೂಕು ದಲಿತ ಸೇನೆ ಮುಖಂಡರು ಚಿಂಚೋಳಿ-ಹುಮನಾಬಾದ ರಾಜ್ಯ ಹೆದ್ದಾರಿ ಮೇಲೆ ರಸ್ತೆ ತಡೆ ನಡೆಸಿ ಸರಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.
ದಲಿತ ಮುಖಂಡ ಜಿಲ್ಲಾ ಉಪಾಧ್ಯಕ್ಷ ಜಗದೇವ ಗೌತಮ ಮಾತನಾಡಿ, ಚಿಮ್ಮನಚೋಡ ವಲಯದಲ್ಲಿ ವಿದ್ಯುತ್ ಸಂಪರ್ಕದಲ್ಲಿ ಆಗುತ್ತಿರುವ ತೊಂದರೆಯಿಂದಾಗಿ ಗ್ರಾಮಗಳು ಕತ್ತಲೆಯಲ್ಲಿ ಕಾಲ ಕಲೆಯುವಂತಾಗಿದೆ. ಅಲ್ಲದೇ ಜನರಿಗೆ ಕುಡಿಯಲು ನೀರು ಪೂರೈಕೆ ಆಗುತ್ತಿಲ್ಲ. ಇಲ್ಲಿ 33 ಕೆ.ವಿ ಉಪ ಕೇಂದ್ರ ಇದ್ದರೂ ಇಲ್ಲದಂತಾಗಿದೆ. ಕೆಳದಂಡೆ ಮುಲ್ಲಾಮಾರಿ ನೀರಾವರಿ ಯೋಜನೆ ಅಡಿಯಲ್ಲಿ ಜಮೀನು ಕಳೆದುಕೊಂಡ ನಿರಾಶ್ರಿತರ ಜಮೀನುಗಳಲ್ಲಿ ಎಸ್.ಸಿ.ಪಿ ಮತ್ತು ಟಿಎಸ್ಪಿ ಯೋಜನೆ ಅಡಿಯಲ್ಲಿ ಕೊಳವೆ ಬಾವಿ ಕೊರೆಯಲಾಗಿದೆ. ಆದರೆ ಕೊಳವೆ ಬಾವಿಗಳು ವಿಫಲ ಆಗಿರುವುದರಿಂದ ರೈತರಿಗೆ ಯಾವುದೇ ಪ್ರಯೋಜನ ಆಗಿಲ್ಲ ಎಂದರು.
ಗ್ರಾಮದಲ್ಲಿದ್ದ ಪ್ರಾಥಮಿಕ ಆರೋಗ್ಯ ಕೇಂದ್ದ ರೋಗಗ್ರಸ್ಥವಾಗಿದೆ. ಇಲ್ಲಿ ರೋಗಿಗಳಿಗೆ ಸೂಕ್ತ ಚಿಕಿತ್ಸೆ ಸಿಗುತ್ತಿಲ್ಲ. ವೈದ್ಯರ ನಿರ್ಲಕ್ಷ್ಯತನ, ಸಿಬ್ಬಂದಿಗಳ ಬೇಜವಾದ್ದಾರಿತನದಿಂದ ಹಳ್ಳಿಯ ರೋಗಿಗಳು ತೊಂದರೆ ಪಡಬೇಕಾಗಿದೆ. ಬಿಸಿಎಂ ಹಾಸ್ಟೆಲ್ದಲ್ಲಿ ಮಕ್ಕಳಿಗೆ ಕಳಪೆ ಮಟ್ಟದ ಊಟ ನೀಡಲಾಗುತ್ತಿದೆ. ಅಲ್ಲದೇ ಶುದ್ಧ ನೀರು ಮತ್ತು ಶೌಚಾಲಯ ಇಲ್ಲದೇ ಇರುವುದರಿಂದ ಮಕ್ಕಳು ತೊಂದರೆ ಪಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ತಾಲೂಕು ಅಧ್ಯಕ್ಷ ಬಂಡೆಪ್ಪ ಯಂಗನೋರ ಮಾತನಾಡಿ, ಚಿಮ್ಮನಚೋಡ ಗ್ರಾಮದಲ್ಲಿ ಕೈಗೊಂಡಿರುವ ಮುಖ್ಯಮಂತ್ರಿಗಳ ಗ್ರಾಮ ವಿಕಾಸ ಯೋಜನೆ ಮತ್ತು ದೋಟಿಕೋಳ ಗ್ರಾಮದಲ್ಲಿ ಕೃಷಿ ಇಲಾಖೆಯಿಂದ ನಡೆದ ಸುಜಲಾ ಯೋಜನೆ ಅಡಿಯಲ್ಲಿ ಮಾಡಲಾದ ಕಾಮಗಾರಿಗಳು ಸಂಪೂರ್ಣ ಕಳಪೆಮಟ್ಟದ್ದಾಗಿವೆ. ಹಳೆ ಕಾಮಗಾರಿಗಳನ್ನೇ ಹೊಸ ಕಾಮಗಾರಿಗಳೆಂದು ಬಿಲ್ ಸೃಷ್ಟಿಸಿ ಕೃಷಿ ಇಲಾಖೆ ಅಧಿಕಾರಿಗಳು ಕೋಟ್ಯಂತರ ರೂ. ಗುಳುಂ ಮಾಡಿದ್ದಾರೆ ಎಂದು ದೂರಿದರು.
ಬಸವರಾಜ ಚಿಮ್ಮಾಇದಲಾಯಿ, ಜಗನ್ನಾಥ ರೇವಣೋರ, ಸುರೇಶ ರಾಣಾಪುರ, ಬಾಬುರಾವ್ ಮಾಲೆ ಮಾತನಾಡಿದರು.
ದಲಿತ ಸೇನೆ 18 ಬೇಡಿಕೆಗಳ ಮನವಿ ಪತ್ರವನ್ನು ತಹಶೀಲ್ದಾರ್ ಪಂಡಿತ ಬಿರಾದಾರಗೆ ಸಲ್ಲಿಸಲಾಯಿತು. ಆರೋಗ್ಯಾಧಿಕಾರಿ ಡಾ| ಮಹಮ್ಮದ ಗಫಾರ, ಸಿಪಿಐ ಎಚ್.ಎಂ. ಇಂಗಳೇಶ್ವರ, ಸಾರಿಗೆ ವ್ಯವಸ್ಥಾಪಕ ವಿಜಯಕುಮಾರ ಹೊಸಮನಿ, ಕೃಷಿ ಅಧಿಕಾರಿ ಶ್ರೀಮಂತ ಮೋತಕಪಳ್ಳಿ ಹಾಜರಿದ್ದರು.
ದಲಿತ ಸೇನೆ ಮುಖಂಡರಾದ ಸಂಜೀವಕುಮಾರ ಕಟ್ಟಿಮನಿ, ಸಾಗರ ಕಟ್ಟಿಮನಿ, ಸತೀಶ ಮೇಲ್ಕರ, ರಾಹುಲ್, ಶ್ರೀಧರ ವಗ್ಗಿ, ರವಿ, ನಿಂಗಪ್ಪ ರಾಜನೋರ, ಪ್ರಕಾಶ ನೂಲಕರ, ಭೀಮಶಾ ಯಂಗನೋರ, ಯಲ್ಲಾಲಿಂಗ ಕೊಡಂಬಲ ಇನ್ನಿತರರಿದ್ದರು. ಚಿಂಚೋಳಿ ಪಿಎಸ್ಐ ಸಂತೋಷ ರಾಠೊಡ ಸೂಕ್ತ ಬಂದೊಬಸ್ತ್ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Protest: ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್ಮೇಕಿಂಗ್ ಆಫ್ ಡಾ.ಸಿಂಗ್
Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.