ಸ್ವಾರ್ಥ ಸಾಧನೆಗೆ ನಿಸರ್ಗದ ದುರ್ಬಳಕೆ ಸರಿಯಲ್ಲ: ಶಿಮುಶ

ನೈಸರ್ಗಿಕ ಸಂಪನ್ಮೂಲವನ್ನು ಯಥಾವತ್ತಾಗಿ ಕಾಪಾಡುವುದು ಪ್ರತಿಯೊಬ್ಬರ ಹೊಣೆ

Team Udayavani, Apr 25, 2019, 4:58 PM IST

25-April-25

ಚಿತ್ರದುರ್ಗ: ರೈತರ ಸಮಾಲೋಚನಾ ಸಭೆಯಲ್ಲಿ ಡಾ| ಶಿವಮೂರ್ತಿ ಮುರುಘಾ ಶರಣರು ಮಾತನಾಡಿದರು.

ಚಿತ್ರದುರ್ಗ: ವೇದಾವತಿ ನದಿ ದಡ ಸೇರಿದಂತೆ ಇತರೆ ಜಲಮೂಲಗಳ ರಕ್ಷಣೆಗೆ ಪ್ರತಿಯೊಬ್ಬರೂ ಮುಂದಾಗಬೇಕು ಎಂದು ಡಾ| ಶಿವಮೂರ್ತಿ ಮುರುಘಾ ಶರಣರು ಕರೆ ನೀಡಿದರು.

ಇಲ್ಲಿನ ಮುರುಘಾಮಠದಲ್ಲಿ ವೇದಾವತಿ ನದಿ ಪಾತ್ರದ ಅಭಿವೃದ್ಧಿ ಕುರಿತು ರೂಪುರೇಷೆ ಸಿದ್ಧಪಡಿಸಲು ನಡೆದ ರೈತರ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಶರಣರು ಮಾತನಾಡಿದರು.

ನೈಸರ್ಗಿಕ ಸಂಪನ್ಮೂಲಗಳನ್ನು ಅದರಲ್ಲೂ ಜಲಸಂಪನ್ಮೂಲವನ್ನು ಯಥಾತ್ತಾಗಿ ಉಳಿಸಿಕೊಂಡಲ್ಲಿ ರೈತರೇ ಸರ್ಕಾರಕ್ಕೆ ಹಣ ನೀಡಬಹುದು. ಆದರೆ ಅಲ್ಲಿಯವರೆಗೂ ಸರ್ಕಾರವನ್ನು ಅವಲಂಬಿಸಬೇಕಾದ ಅನಿವಾರ್ಯತೆ ಇದೆ. ಇದು ಅಪಹಾಸ್ಯವೂ ಹೌದು, ವಿಪರ್ಯಾಸವೂ ಹೌದು. ರೈತ ಸಮುದಾಯದಲ್ಲಿ ಇಂದು ಸ್ವಾಭಿಮಾನದ ಬದುಕು ಅತ್ಯಂತ ಕಷ್ಟಕರವಾಗಿದೆ. ಕಾರಣ ಕೆರೆಗಳು ಮಾಯವಾಗುತ್ತಿವೆ, ನದಿಗಳು ನಾಪತ್ತೆಯಾಗುತ್ತಿವೆ. ಮಳೆ ಮುಗಿಲು ಸೇರುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.

ನಿಸರ್ಗ ಇದ್ದರೆ ಮಾತ್ರ ಮಾನವ. ಆದರೆ ಮಾನವ ತನ್ನಿಂದಾಗಿಯೇ ನಿಸರ್ಗವಿದೆ ಎಂದು ತಪ್ಪಾಗಿ ಭಾವಿಸಿದ್ದಾನೆ. ತನ್ನ ಸ್ವಂತ ಲಾಭಕ್ಕಾಗಿ, ಸ್ವಾರ್ಥಕ್ಕಾಗಿ ನಿಸರ್ಗವನ್ನು ದುರ್ಬಳಕೆ ಮಾಡುತ್ತಿದ್ದಾನೆ. ಜಲಕ್ಷಾಮದ ಇಂದಿನ ದಿನಗಳಲ್ಲಿ ಜಲ ಮೂಲಗಳನ್ನು ರಕ್ಷಿಸಬೇಕಿದೆ. ಅದಕ್ಕಾಗಿ ವೇದಾವತಿ ನದಿಯನ್ನು ಸಂರಕ್ಷಿಸಬೇಕಾಗಿದೆ. ಯಥಾವತ್ತಾಗಿ ಹರಿಯುವಂತೆ ಮಾಡಬೇಕಾಗಿದೆ. ವಿವಿ ಸಾಗರದವರೆಗೂ ತುಂಬಿ ಹರಿಯುವಂತೆ ಮಾಡಬೇಕಾದ ಸವಾಲಿದೆ. ವೇದಾವತಿ ನದಿ ಪಾತ್ರದ ಸಂರಕ್ಷಣೆಗಾಗಿ ಬೇಕಾದ ಕ್ರಮಗಳ ಜಾರಿಗಾಗಿ ಪರಿಸರವಾದಿಗಳು ಮತ್ತು ರೈತರೊಂದಿಗೆ ಕೈಜೋಡಿಸಲು ಶ್ರೀಮಠ ಸದಾ ಸಿದ್ಧವಾಗಿದೆ. ಚಿತ್ರದುರ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಸಾವಿರಾರು ರೈತರ ಬದುಕಿಗೆ ಹಾಗೂ ಕುಡಿಯುವ ನೀರಿಗೆ ಅಗತ್ಯ ಕ್ರಮ ಕೈಗೊಳ್ಳಲೇಬೇಕಾಗಿದೆ ಎಂದು ಪ್ರತಿಪಾದಿಸಿದರು.

ಚಿಕ್ಕಮಗಳೂರಿನ ಪರಿಸರವಾದಿ ಗಿರೀಶ್‌ ಮಾತನಾಡಿ, ವೇದಾವತಿ ನದಿಯ ಪುನಶ್ಚೇತನ ಕಾರ್ಯವನ್ನು ಮುರುಘಾ ಮಠದ ಸ್ವಾಮೀಜಿಯವರ ನೇತೃತ್ವದಲ್ಲಿ ನಡೆಸಬೇಕು. ನದಿಯ ಪುನಶ್ಚೇತನ ಕಾರ್ಯಕ್ಕೆ ರೈತರು ಸಂಪೂರ್ಣ ಬೆಂಬಲ ನೀಡಬೇಕು. ವೇದಾವತಿ ನದಿಯ ನಾಲ್ಕು ಮೂಲಗಳನ್ನು ಸಂರಕ್ಷಿಸಿ ನದಿ ಮೊದಲಿನಂತೆ ಹರಿಯಬೇಕಿದೆ. ವೇದಾವತಿ ನದಿ ಪುನಶ್ಚೇತನದಿಂದ ಅಂತರ್ಜಲ ಮಟ್ಟದಲ್ಲೂ ವೃದ್ಧಿಯಾಗಲಿದೆ. ನದಿ ಸರಾಗವಾಗಿ ಏಕೆ ಹರಿಯುತ್ತಿಲ್ಲ ಎನ್ನುವುದನ್ನು ತಿಳಿದುಕೊಳ್ಳಬೇಕು. ಈ ಕುರಿತು ಪ್ರತಿಯೊಬ್ಬರಿಗೂ ಅರಿವು ಮೂಡಿಸಬೇಕು ಎಂದರು.

ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಈಚಗಟ್ಟದ ಸಿದ್ಧವೀರಪ್ಪ ಮಾತನಾಡಿ, ಮರಳಿಗಾಗಿ ಹಾಗೂ ಮತ್ತಿತರ ಕಾರಣಗಳಿಗಾಗಿ ವೇದಾವತಿ ನದಿ ಇಂದು ಬಲಿಯಾಗುವಂತಾಗಿದೆ. ನದಿ ಪಾತ್ರದ ಜನರೆಲ್ಲರಲ್ಲಿಯೂ ಜಾಗೃತಿ ಮೂಡಿಸಿ ವೇದಾವತಿ ನದಿಯನ್ನು ಜೀವಂತವಾಗಿಡಲು ರೈತರೆಲ್ಲರೂ ಸದಾ ಸಿದ್ಧರಾಗಿದ್ದೇವೆ ಎಂದು ಘೋಷಿಸಿದರು.

ಸಭೆಯಲ್ಲಿ ಚಿಕ್ಕಮಗಳೂರಿನ ಭರತ್‌ ಮಣ್‌ಮಯಿ, ಆಕಾಶವಾಣಿಯ ಮಧುಸೂದನ್‌, ರೈತ ಸಂಘದ ಜಿಲ್ಲಾಧ್ಯಕ್ಷ ರೆಡ್ಡಿಹಳ್ಳಿ ವೀರಣ್ಣ, ಕಾರ್ಯದರ್ಶಿ ಮಲ್ಲಿಕಾರ್ಜುನ್‌, ಕಾರ್ಯಾಧ್ಯಕ್ಷ ಜಯಪ್ಪ, ತಾಲೂಕು ಅಧ್ಯಕ್ಷ ರಾಜಶೇಖರಪ್ಪ, ಹೊಸದುರ್ಗ ತಾಲೂಕು ಅಧ್ಯಕ್ಷ ಕೊರಟಗೆರೆ ರಮೇಶ್‌, ಹೊಳಲ್ಕೆರೆ ತಾಲೂಕು ಅಧ್ಯಕ್ಷ ಬಸವರಾಜಪ್ಪ, ಹಿರಿಯೂರು ತಾಲೂಕು ಕಾರ್ಯರದರ್ಶಿ ರಮೇಶ್‌ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಹಲವು ರೈತರು ಭಾಗವಹಿಸಿದ್ದರು.

ಕಾನೂನಿನ ಕಣ್ತಪ್ಪಿಸಿ ಕಾಡು ಕಡಿದು ವೇದಾವತಿ ನದಿ ಮೂಲಗಳನ್ನು ಕೆಲವರು ತಮ್ಮ ಆರ್ಥಿಕ ಲಾಭಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ. ಅದರಲ್ಲೂ ಹೊರ ರಾಜ್ಯದಿಂದ ಬರುವ ಉದ್ಯಮಿಗಳು ವೇದಾವತಿ ನದಿ ನಶಿಸಿ ಹೋಗಲು ಕಾರಣರಾಗಿದ್ದಾರೆ. ಆದ್ದರಿಂದ ವೇದಾವತಿ ನದಿ ನೀರಿನ ದುರ್ಬಳಕೆಯನ್ನು ತಪ್ಪಿಸಬೇಕು.
• ಗಿರೀಶ್‌,
ಚಿಕ್ಕಮಗಳೂರಿನ ಪರಿಸರವಾದಿ.

ಟಾಪ್ ನ್ಯೂಸ್

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Gangolli, Ajekaru; ಮಹಿಳೆಯರಿಗೆ ಜೀವ ಬೆದರಿಕೆ

death

Belthangady : ಸೊಪ್ಪು ತರಲು ಹೋಗಿದ್ದ ವ್ಯಕ್ತಿ ಆಕಸ್ಮಿಕ ಸಾ*ವು

baby

Sullia: ಒಂಟಿಯಾಗಿ ಪತ್ತೆಯಾದ ಮಗು ಪೋಷಕರ ಮಡಿಲಿಗೆ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

suicide (2)

Manipal: ಬಾವಿಗೆ ಬಿದ್ದು ಕಾರ್ಮಿಕ ಸಾ*ವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

police crime

Gangolli, Ajekaru; ಮಹಿಳೆಯರಿಗೆ ಜೀವ ಬೆದರಿಕೆ

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

death

Belthangady : ಸೊಪ್ಪು ತರಲು ಹೋಗಿದ್ದ ವ್ಯಕ್ತಿ ಆಕಸ್ಮಿಕ ಸಾ*ವು

baby

Sullia: ಒಂಟಿಯಾಗಿ ಪತ್ತೆಯಾದ ಮಗು ಪೋಷಕರ ಮಡಿಲಿಗೆ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.