ಅಸಂಘಟಿತ ಕಾರ್ಮಿಕರ ಬಾಳು ದುರ್ಬರ
ಕಾನೂನು ಮಾಲೀಕರ ಪರವಾಗಿಸಲು ಯತ್ನ•ದುಡಿಯುವ ಜನರ ಹೆಮ್ಮೆಯ ದಿನ ಮೇ
Team Udayavani, May 5, 2019, 4:02 PM IST
ಚಿತ್ತಾಪುರ: ಅಂಬಿಗರ ಚೌಡಯ್ಯ ಕಲ್ಯಾಣ ಮಂಟಪದಲ್ಲಿ ಸಿಐಟಿಯು ನೇತೃತ್ವದಲ್ಲಿ ನಡೆದ ವಿಶ್ವ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ದೇವಮ್ಮ ಅನ್ನದಾನಿ ಮಾತನಾಡಿದರು.
ಚಿತ್ತಾಪುರ: ಕಾರ್ಮಿಕ ವಿರೋಧಿ ನೀತಿಯಿಂದ ಅಸಂಘಟಿತ ಕಾರ್ಮಿಕರ ಬಾಳು ದುರ್ಬರವಾಗುತ್ತಿದೆ ಎಂದು ಸಿಐಟಿಯು ನಾಯಕಿ ದೇವಮ್ಮ ಅನ್ನದಾನಿ ಹೇಳಿದರು.
ಪಟ್ಟಣದ ಅಂಬಿಗರ ಚೌಡಯ್ಯ ಕಲ್ಯಾಣ ಮಂಟಪದಲ್ಲಿ ಸೇಂಟರ್ ಆಫ್ ಇಂಡಿಯನ್ ಟ್ರೇಟ್ ಯೂನಿಯನ್(ಸಿಐಟಿಯು), ಕರ್ನಾಟಕ ಪ್ರಾಂತ ರೈತ ಸಂಘದ ತಾಲೂಕು ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾರ್ಮಿಕ ವರ್ಗದ ಕಾನೂನುಗಳನ್ನು ಮಾಲೀಕರ ಪರವಾಗಿ ಬದಲಾಯಿಸಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ. ಇದರಿಂದಾಗಿ ಕಾರ್ಮಿಕ ವರ್ಗ ಸಂಕಷ್ಟಕ್ಕೆ ಸಿಲಿಕಿದೆ ಎಂದು ಹೇಳಿದರು.
ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕೆಂಬ ಸುಪ್ರೀಂಕೋರ್ಟ್ ತೀರ್ಪನ್ನು ಜಾರಿ ಮಾಡುವ ಜೊತೆಗೆ, ಗುತ್ತಿಗೆ ಮುಂತಾದ ಕಾರ್ಮಿಕ ವಿರೋಧಿ ನೀತಿಗಳನ್ನು ಕೈಬಿಡಬೇಕು ಎಂದರು.
ಪ್ರಾಂತ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಅಶೋಕ ಮ್ಯಾಗೇರಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕಾರ್ಮಿಕರು 8ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿರಾಮಕ್ಕಾಗಿ ಕೈಗೊಂಡ ಸುದೀರ್ಘವಾದ ಹೋರಾಟದ ಅಂತಿಮ ಜಯವೇ ಮೇ ದಿನವಾಗಿದೆ ಎಂದು ಹೇಳಿದರು.
ಮೇ ದಿನಾಚರಣೆ ಜಗತ್ತಿನ ಎಲ್ಲ ದೇಶಗಳ ದುಡಿಯುವ ಜನ ಆಚರಿಸುವ ಹೆಮ್ಮೆಯ ದಿನವಾಗಿದೆ. ಮೇ ದಿನವನ್ನು ದೇಶ, ಭಾಷೆ, ಧರ್ಮಗಳ ಗಡಿಗಳ ಅಡಚಣೆ ಇಲ್ಲದೆ ಆಚರಿಸಲಾಗುತ್ತದೆ. ತಮ್ಮ ಹಕ್ಕುಗಳಿಗಾಗಿ ಎಲ್ಲ ಕಾರ್ಮಿಕರು ಒಗ್ಗೂಡಿ ಹೋರಾಟ ಮಾಡುವುದು ಬಹಳ ಮುಖ್ಯವಾಗಿದೆ ಎಂದು ಹೇಳಿದರು.
ಸಿಐಟಿಯು ತಾಲೂಕು ಅಧ್ಯಕ್ಷೆ ಶೇಖಮ್ಮ ಕುರಿ ಅಧ್ಯಕ್ಷತೆ ವಹಿಸಿದ್ದರು.
ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಡಾ| ಬಸಲಿಂಗಪ್ಪ ಡಿಗ್ಗಿ, ಕಸಾಪ ಅಧ್ಯಕ್ಷ ಕಾಶಿನಾಥ ಗುತ್ತೇದಾರ ಮುಖ್ಯ ಅತಿಥಿಗಳಾಗಿದ್ದರು.
ಸಿಐಟಿಯು ಮುಖಂಡರಾದ ಚಿತ್ರಶೇಖರ ದೇವರಮನಿ, ಸಂಗೀತಾ ಗುತ್ತೇದಾರ, ರೇಣುಕಾ ಕುಲಕರ್ಣಿ, ಶಾಂತಾ ಹರೇಮಠ, ಸಾಬಮ್ಮ ಕಾಳಗಿ, ಶಾಂತಾ ಗಾಯಕವಾಡ, ಶಿವುಕುಮಾರ ಜೀವಣಗಿ, ಮರೇಪ್ಪ ಕದ್ದರಗಿ, ಶಿವಪ್ಪ ಜೀವಣಗಿ, ಮಲ್ಲಿಕಾರ್ಜುನ ತೆಂಗಳಿ, ಜಯಪಾಲಸಿಂಗ್ ಠಾಕೂರ್ ಇದ್ದರು.
ಕಲ್ಯಾಣಿ ಏರಿ ಭಾಗೋಡಿ ನಿರೂಪಿಸಿ, ವಂದಿಸಿದರು. ಕಾರ್ಯಕ್ರಮಕ್ಕೂ ಮುನ್ನ ಪಟ್ಟಣದ ರೈಲ್ವೆ ನಿಲ್ದಾಣದಿಂದ ಪ್ರಾರಂಭವಾದ ಮೆರವಣಿಗೆ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ
Mollywood: ಸೂಪರ್ ಸ್ಟಾರ್ ಮೋಹನ್ ಲಾಲ್‌ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ : ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.