2 ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳು ಗೈರು
•ನೋಂದಣಿ ಮಾಡಿಕೊಂಡಿದ್ದ 8509 ಅಭ್ಯರ್ಥಿಗಳ ಪೈಕಿ ಪರೀಕ್ಷೆ ಬರೆದವರು 6197 ಮಂದಿ
Team Udayavani, Jun 10, 2019, 10:59 AM IST
ಚಿತ್ರದುರ್ಗ: ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಪ್ರಥಮ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿಗೆ ಭಾನುವಾರ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಯಿತು. ಎರಡು ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳು ಗೈರುಹಾಜರಾಗಿದ್ದರು.
ಚಿತ್ರದುರ್ಗ ನಗರದ 21 ಪರೀಕ್ಷಾ ಕೇಂದ್ರಗಳಲ್ಲಿ ಬೆಳಿಗ್ಗೆ 10 ರಿಂದ 11:30 ರವರೆಗೆ ನಡೆದ ಪರೀಕ್ಷೆಗೆ 8509 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. 6232 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರೆ, 2277 ಅಭ್ಯರ್ಥಿಗಳು ಗೈರಾಗಿದ್ದರು. ಅದೇ ರೀತಿ ಮಧ್ಯಾಹ್ನ 2 ರಿಂದ 3:30 ರವರೆಗೆ ಪ್ರಥಮ ದರ್ಜೆ ಸಹಾಯಕ ಹುದ್ದೆಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆದಿದ್ದು, 8509 ಅಭ್ಯರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದು, 6197 ಅಭ್ಯರ್ಥಿಗಳು ಹಾಜರಾಗಿದ್ದರು. 2312 ಅಭ್ಯರ್ಥಿಗಳು ಗೈರಾಗಿದ್ದರು.
ಕೆಪಿಎಸ್‌ಸಿ ವತಿಯಿಂದ ನಡೆಸಲಾದ ಪ್ರದಸ ಹುದ್ದೆಗಳ ನೇಮಕಾತಿ ಪರೀಕ್ಷೆ ಸಮರ್ಪಕವಾಗಿ ನಡೆಯಿತು. ನಕಲು ಸೇರಿದಂತೆ ಯಾವುದೇ ರೀತಿಯ ಅಹಿತಕರ ಘಟನೆಗಳು ಪರೀಕ್ಷೆ ಕೇಂದ್ರದಲ್ಲಿ ನಡೆಯಲಿಲ್ಲ. ಪರೀಕ್ಷಾರ್ಥಿಗಳಿಗೆ ತೊಂದರೆಯಾಗದಂತೆ ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರು, ಶೌಚಾಲಯ, ವ್ಯವಸ್ಥಿತ ಆಸನ ಸೌಲಭ್ಯ ಮಾಡಲಾಗಿತ್ತು. ನಕಲು, ಅವ್ಯವಹಾರ ತಡೆಗಟ್ಟುವ ಉದ್ದೇಶದಿಂದ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ವೀಡಿಯೋ ಚಿತ್ರೀಕರಣ ಮಾಡಲಾಯಿತು.
ಜಿಲ್ಲೆಯಲ್ಲಿ 47 ವಿಕಲಚೇತನ ಅಭ್ಯರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದು, 39 ಅಭ್ಯರ್ಥಿಗಳು ಪರೀಕ್ಷೆ ಎದುರಿಸಿದರು. 8 ವಿಕಲಚೇತನ ಅಭ್ಯರ್ಥಿಗಳು ಗೈರುಹಾಜರಾಗಿದ್ದರು. ಚಿತ್ರದುರ್ಗ ನಗರದ ಚಳ್ಳಕೆರೆ ಟೋಲ್ಗೇಟ್ ಸಮೀಪದ ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್ನಲ್ಲಿ ವಿಕಲಚೇತನ ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿತ್ತು. ವಿಕಲಚೇತನರಿಗೆ ಪ್ರತ್ಯೇಕವಾಗಿ ಪರೀಕ್ಷೆ ಬರೆಯಲು 10 ಕೊಠಡಿಗಳನ್ನು ವ್ಯವಸ್ಥೆ ಮಾಡಲಾಗಿತ್ತು.ಪರೀಕ್ಷೆ ಬರೆಯಲು ಹೆಚ್ಚುವರಿಯಾಗಿ 10 ನಿಮಿಷ ಅವಧಿ ನೀಡಲಾಗಿತ್ತು. ಪ್ರತಿ 5 ವಿಕಲಚೇತನ ಅಭ್ಯರ್ಥಿಗಳಿಗೆ ಒಂದು ಕೊಠಡಿಯಂತೆ ವ್ಯವಸ್ಥೆ ಮಾಡಲಾಗಿತ್ತು.
ಜಿಲ್ಲೆಯಲ್ಲಿ 47 ವಿಕಲಚೇತನ ಅಭ್ಯರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದು, 39 ಅಭ್ಯರ್ಥಿಗಳು ಪರೀಕ್ಷೆ ಎದುರಿಸಿದರು. 8 ವಿಕಲಚೇತನ ಅಭ್ಯರ್ಥಿಗಳು ಗೈರುಹಾಜರಾಗಿದ್ದರು. ಚಿತ್ರದುರ್ಗ ನಗರದ ಚಳ್ಳಕೆರೆ ಟೋಲ್ಗೇಟ್ ಸಮೀಪದ ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್ನಲ್ಲಿ ವಿಕಲಚೇತನ ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿತ್ತು. ವಿಕಲಚೇತನರಿಗೆ ಪ್ರತ್ಯೇಕವಾಗಿ ಪರೀಕ್ಷೆ ಬರೆಯಲು 10 ಕೊಠಡಿಗಳನ್ನು ವ್ಯವಸ್ಥೆ ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.