ಗ್ರಾಮಗಳಿಗೆ ಸೌಲಭ್ಯ ಒದಗಿಸಿ: ಕೃಷ್ಣನಾಯ್ಕ
ಚಿತ್ರದುರ್ಗ: ಬೆಳಗಟ್ಟ ಗ್ರಾಪಂ ಅಧ್ಯಕ್ಷರು-ಸದಸ್ಯರೊಂದಿಗೆ ತಾಪಂ ಇಒ ಕೃಷ್ಣನಾಯ್ಕ ಸಭೆ ನಡೆಸಿದರು.
Team Udayavani, Jul 27, 2019, 4:46 PM IST
ಚಿತ್ರದುರ್ಗ: ಬೆಳಗಟ್ಟ ಗ್ರಾಪಂ ಅಧ್ಯಕ್ಷರು-ಸದಸ್ಯರೊಂದಿಗೆ ತಾಪಂ ಇಒ ಕೃಷ್ಣನಾಯ್ಕ ಸಭೆ ನಡೆಸಿದರು.
ಚಿತ್ರದುರ್ಗ: ಗ್ರಾಮಗಳಿಗೆ ಮೂಲ ಸೌಲಭ್ಯ ಒದಗಿಸಿ ಸಮಸ್ಯೆ ಪರಿಹರಿಸುವ ಕೆಲಸ ಮಾಡಬೇಕು ಎಂದು ತಾಪಂ ಇಒ ಕೃಷ್ಣನಾಯ್ಕ ಕಾರ್ಯದರ್ಶಿ ಮತ್ತು ಪಿಡಿಒಗಳಿಗೆ ಸೂಚಿಸಿದರು.
ತಾಲೂಕಿನ ಬೆಳಗಟ್ಟ ಗ್ರಾಪಂ ಕಾರ್ಯಾಲಯದಲ್ಲಿ ಶುಕ್ರವಾರ ಅಧ್ಯಕ್ಷರು, ಸದಸ್ಯರ ಸಭೆ ನಡೆಸಿ ಮಾತನಾಡಿದ ಅವರು, ಸೋಮವಾರದೊಳಗೆ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವುದಾಗಿ ಗ್ರಾಮಸ್ಥರಿಗೆ ಭರವಸೆ ನೀಡಿದರು.
2015ರಿಂದ ಇಲ್ಲಿಯ ತನಕ ಹದಿನಾಲ್ಕನೇ ಹಣಕಾಸು ಯೋಜನೆಯಡಿ ಕ್ರಿಯಾ ಯೋಜನೆ ತಯಾರಿಸಿದ್ದು, ಯಾವ ಸದಸ್ಯರ ಗಮನಕ್ಕೂ ತಂದಿಲ್ಲ. ಜಿಪಿಆರ್‌ಎಸ್ ಕ್ಯಾಮೆರಾದಲ್ಲಿ ನೀರು ಪೂರೈಸುವ ಟ್ಯಾಂಕರ್ ಫೋಟೋ ತೆಗೆಯಬೇಕೆಂಬ ನಿಯಮವಿದೆ. ಒಂದೇ ಶೌಚಾಲಯಕ್ಕೆ ಮೂರು ಬಾರಿ ದಾಖಲೆ ನೀಡಿ ಹಣ ಲಪಟಾಯಿಸಲಾಗಿದೆ. ನರೇಗಾ ಯೋಜನೆಯಡಿ ಬೆಳಗಟ್ಟದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಕಾಂಪೌಂಡ್ ನಿರ್ಮಿಸಿರುವುದಾಗಿ ಹಣ ದುರುಪಯೋಗ ನಡೆಸಲಾಗಿದೆ. ಟ್ಯಾಂಕರ್ ಮಾಫಿಯಾದವರು ನೀರಿಗೆ ಕೃತಕ ಅಭಾವ ಸೃಷ್ಟಿಸುತ್ತಿದ್ದಾರೆ. ಯಾರ ಅನುಮತಿ ಪಡೆದು ಟ್ಯಾಂಕರ್ ನೀರು ಪೂರೈಸಿದ್ದೀರಿ ಎಂದು ಸದಸ್ಯ ವೆಂಕಟೇಶ್‌ರೆಡ್ಡಿ ತಾಪಂ ಕಾರ್ಯನಿರ್ವಹಣಾಧಿಕಾರಿ ಗಮನಕ್ಕೆ ತಂದಾಗ ಇಂಜಿನಿಯರ್ ಅವರನ್ನು ಕಳಿಸಿ ತಪಾಸಣೆ ಮಾಡಿಸಿ ತಪ್ಪಿತಸ್ಥರು ಕಂಡು ಬಂದರೆ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಗ್ರಾಮ ಪಂಚಾಯಿತಿಯಲ್ಲಿ ಪಾರದರ್ಶಕವಾಗಿ ಕೆಲಸ ನಡೆಯಬೇಕಾದರೆ ಅಧ್ಯಕ್ಷರು, ಸದಸ್ಯರು, ಪಿಡಿಒ ಹಾಗೂ ಕಾರ್ಯದರ್ಶಿಗಳು ಪರಸ್ಪರ ಸಹಕಾರದಿಂದ ಅಭಿವೃದ್ಧಿಗೆ ಕೈ ಜೋಡಿಸಿ ಎಂದು ತಾಕೀತು ಮಾಡಿದರು. ಬೆಳಗಟ್ಟ ಗ್ರಾಪಂ ಅಧ್ಯಕ್ಷೆ ಚಿತ್ರಮ್ಮ, ಸದಸ್ಯರಾದ ಬೋರಣ್ಣ, ಕುರಿ ನಾಗರಾಜ್, ಹಾಯ್ಕಲ್ ಸತ್ಯನಾರಾಯಣರೆಡ್ಡಿ ಸೇರಿದಂತೆ ಇತರು ಸದಸ್ಯರು ಭಾಗವಹಿಸಿದ್ದರು. ಬೆಳಗಟ್ಟದಲ್ಲಿ ಕುಡಿಯುವ ನೀರಿನ ಸಮಸ್ಯೆ ಮೊದಲು ಬಗೆಹರಿಸುವಂತೆ ಕೆಲವು ಮಹಿಳೆಯರು ಖಾಲಿ ಕೊಡಗಳೊಂದಿಗೆ ಸಭೆಗೆ ಪ್ರವೇಶಿಸಿ ಆಕ್ರೋಶ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Atul Subhash Case: ಪತ್ನಿ ಮೇಲಿನ ಕೇಸ್ ರದ್ದತಿಗೆ ನಿರಾಕರಣೆ
Suspend: ನಕಲಿ ದಾಖಲೆ ಕೊಟ್ಟು ಹುದ್ದೆ ಪಡೆದ ಪಿಎಸ್‌ಐ ಸಸ್ಪೆಂಡ್
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Atul Subhash Case: ಪತ್ನಿ ಮೇಲಿನ ಕೇಸ್ ರದ್ದತಿಗೆ ನಿರಾಕರಣೆ
Junior Doctor: ಮಾತನಾಡಲು ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…
Suspend: ನಕಲಿ ದಾಖಲೆ ಕೊಟ್ಟು ಹುದ್ದೆ ಪಡೆದ ಪಿಎಸ್‌ಐ ಸಸ್ಪೆಂಡ್
Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.