ರಾಹುಲ್‌ ಗಾಂಧಿ ಕ್ಷಮೆಯಾಚನೆಗೆ ಆಗ್ರಹ

Team Udayavani, Nov 17, 2019, 3:12 PM IST

17-November-19

ಚಿತ್ರದುರ್ಗ: ದೇಶದ ಪ್ರಧಾನಿ ನರೇಂದ್ರ ಮೋದಿ ಕುರಿತು ಅವಹೇಳನಕಾರಿಯಾಗಿ ಮಾತನಾಡಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಶನಿವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಒನಕೆ ಓಬವ್ವ ವೃತ್ತಕ್ಕೆ ಆಗಮಿಸಿದ ಬಿಜೆಪಿ ಕಾರ್ಯಕರ್ತರು, ಕಾಂಗ್ರೆಸ್‌ ಹಾಗೂ ರಾಹುಲ್‌ ಗಾಂಧಿ ವಿರುದ್ಧ ಧಿಕ್ಕಾರ ಕೂಗಿದದರು. ಸುಪ್ರೀಂ ಕೋರ್ಟ್‌ನಿಂದ ಛೀಮಾರಿ ಹಾಕಿಸಿಕೊಂಡಿರುವ ರಾಹುಲ್‌ ಗಾಂಧಿ  ತಕ್ಷಣ ದೇಶದ ಜನತೆ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಎಸ್‌. ನವೀನ್‌, ಸುಪ್ರೀಂ ಕೋರ್ಟ್‌ ಹೆಸರನ್ನು ದುರ್ಬಳಕೆ ಮಾಡಿಕೊಂಡು ಪ್ರಧಾನಿ ನರೇಂದ್ರ ಮೋದಿ ಅವರನ್ನು ರಫೇಲ್‌ ಯುದ್ಧ ವಿಮಾನ ಖರೀದಿ ವಿಚಾರದಲ್ಲಿ ರಾಹುಲ್‌ ಗಾಂಧಿ “ಚೌಕಿದಾರ್‌ ಚೋರ್‌’ ಎಂದು ಕರೆದಿದ್ದಾರೆ. ಇದರಿಂದ ದೇಶದ ಪ್ರಧಾನಿಯ ಘನತೆಗೆ ಧಕ್ಕೆ ತಂದಂತಾಗಿದೆ. ಈ ಬಗ್ಗೆ ಸುಪ್ರೀಂ ಕೋರ್ಟ್‌ ಕೂಡಾ ರಾಹುಲ್‌ ಗಾಂಧಿಗೆ ಎಚ್ಚರಿಕೆ ನೀಡಿದೆ ಎಂದರು.

ರಫೇಲ್‌ ಯುದ್ಧ ವಿಮಾನ ಖರೀದಿ ವಿಚಾರದಲ್ಲಿ ರಾಹುಲ್‌ ಗಾಂಧಿ  ಒಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿದ್ದುಕೊಂಡು ಅತ್ಯಂತ ಬಾಲಿಶವಾಗಿ ನಡೆದುಕೊಂಡಿದ್ದಾರೆ. ದೇಶದ ರಕ್ಷಣೆಯ ಆಂತರಿಕ ವಿಚಾರಗಳನ್ನು ಬಹಿರಂಗಪಡಿಸಿದ್ದಾರೆ. ಸುಖಾ ಸುಮ್ಮನೆ ರಫೇಲ್‌ ವಿಚಾರವನ್ನು ಬೀದಿಗೆ ತಂದು ವಿವಾದ ಎಬ್ಬಿಸಿದ್ದಾರೆ ಎಂದು ಟೀಕಿಸಿದರು.

ರಾಹುಲ್‌ ಗಾಂಧಿ  ಅವರ ಅಪ್ರಬುದ್ಧ ಹೇಳಿಕೆಗಳನ್ನು ಖಂಡಿಸಿ ಬಿಜೆಪಿಯ ದೆಹಲಿ ಸಂಸದೆ ಮೀನಾಕ್ಷಿ ಲೇಖೀ ಸುಪ್ರೀಂ ಕೋರ್ಟ್‌ನಲ್ಲಿ ದೂರು ದಾಖಲಿಸಿದ್ದರು. ಈ ದೂರಿನ ವಿಚಾರಣೆ ನಡೆಸಿದ ಕೋರ್ಟ್‌, ರಾಹುಲ್‌ ಅವರನ್ನು ತರಾಟಗೆ ತೆಗೆದುಕೊಂಡಿದೆ.

ಈ ಹಿನ್ನೆಲೆಯಲ್ಲಿ ರಾಹುಲ್‌ ಗಾಂಧಿ ತಕ್ಷಣ ದೇಶದ ಜನರ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದರು. ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಮಲ್ಲಿಕಾರ್ಜುನ್‌, ಮುರಳಿ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಶ್ಯಾಮಲಾ, ಮುಖಂಡರಾದ ಕೆ. ತಿಪ್ಪೇಸ್ವಾಮಿ, ಶಿವಣ್ಣಾಚಾರ್‌, ಜಿತೇಂದ್ರ, ನಾಗರಾಜ್‌ ಬೇದ್ರೆ, ಶಿವಪ್ರಕಾಶ್‌ ದಗ್ಗೆ, ಶಶಿಧರ, ಸೇತುರಾಂ, ಬಸಮ್ಮ, ಸಂಪತ್‌ ಕುಮಾರ್‌, ವೆಂಕಟೇಶ್‌ ಯಾದವ್‌ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Bunts Hostel, ಕರಂಗಲ್ಪಾಡಿ ಜಂಕ್ಷನ್‌: ಶಾಶ್ವತ ಡಿವೈಡರ್‌ ನಿರ್ಮಾಣ ಕಾಮಗಾರಿ

8

Mangaluru: ರಾತ್ರಿ ಪ್ರಿಪೇಯ್ಡ್  ಆಟೋ ಇಲ್ಲದೆ ಪ್ರಯಾಣಿಕರ ಪರದಾಟ

7

Urwa: ಬಾಯ್ದೆರೆದ ಕಾಂಕ್ರೀಟ್‌ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

9

Bunts Hostel, ಕರಂಗಲ್ಪಾಡಿ ಜಂಕ್ಷನ್‌: ಶಾಶ್ವತ ಡಿವೈಡರ್‌ ನಿರ್ಮಾಣ ಕಾಮಗಾರಿ

8

Mangaluru: ರಾತ್ರಿ ಪ್ರಿಪೇಯ್ಡ್  ಆಟೋ ಇಲ್ಲದೆ ಪ್ರಯಾಣಿಕರ ಪರದಾಟ

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

7

Urwa: ಬಾಯ್ದೆರೆದ ಕಾಂಕ್ರೀಟ್‌ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.