ಮೈತ್ರಿ ಪಕ್ಷಗಳಿಂದಲೇ ಬಿಜೆಪಿಗೆ ಹೆಚ್ಚು ಸ್ಥಾನ
ಬಿಜೆಪಿಯನ್ನು ಕಟ್ಟಿ ಹಾಕುವ ಶಕ್ತಿ ಇರುವುದು ಕಮ್ಯೂನಿಸ್ಟ್ ಪಕ್ಷಕ್ಕೆ ಮಾತ್ರ •ಸಿಪಿಐ ರಾಜ್ಯ ಕಾರ್ಯದರ್ಶಿ ಸಾತಿ ಸುಂದರೇಶ್ ಅಭಿಮತ
Team Udayavani, Jul 14, 2019, 11:37 AM IST
ಚಿತ್ರದುರ್ಗ: ಸಿಪಿಐ ಜಿಲ್ಲಾ ಮಂಡಳಿಯ ಸರ್ವ ಸದಸ್ಯರ ಸಭೆಯಲ್ಲಿ ರಾಜ್ಯ ಕಾರ್ಯದರ್ಶಿ ಸಾತಿ ಸುಂದರೇಶ್ ಮಾತನಾಡಿದರು.
ಚಿತ್ರದುರ್ಗ: ಜನ ವಿರೋಧಿ ನರೇಂದ್ರ ಮೋದಿ ಮತ್ತೂಮ್ಮೆ ದೇಶದ ಪ್ರಧಾನಿಯಾಗಿರುವುದರಿಂದ ಸಂವಿಧಾನ ಬದಲಾವಣೆ ಕಾಲ ಸನ್ನಿಹಿತವಾಗಿದೆ. ಇದರಿಂದಾಗಿ ಮೀಸಲಾತಿ ಕಳೆದುಕೊಳ್ಳಬೇಕಾಗುತ್ತದೆ ಎಂದು ಭಾರತ ಕಮ್ಯೂನಿಸ್ಟ್ ಪಕ್ಷದ ರಾಜ್ಯ ಕಾರ್ಯದರ್ಶಿ ಸಾತಿ ಸುಂದರೇಶ್ ಆತಂಕ ವ್ಯಕ್ತಪಡಿಸಿದರು.
ಇಲ್ಲಿನ ಎಪಿಎಂಸಿ ಆವರಣದಲ್ಲಿರುವ ದಲ್ಲಾಲರ ಭವನದಲ್ಲಿ ಶನಿವಾರ ನಡೆದ ಭಾರತ ಕಮ್ಯೂನಿಸ್ಟ್ ಪಕ್ಷದ ಜಿಲ್ಲಾ ಮಂಡಳಿಯ ಸರ್ವ ಸದಸ್ಯರ ಸಭೆಯಲ್ಲಿ ಅವರು ಮಾತನಾಡಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಕಾರ್ಮಿಕ ವಿರೋಧಿಯಾಗಿದ್ದಾರೆ. ಬಿಜೆಪಿ ಕೇಂದ್ರದಲ್ಲಿ ವಾಮ ಮಾರ್ಗದಲ್ಲಿ ಅಧಿಕಾರ ಹಿಡಿದಿದೆ. ಬಿಜೆಪಿಯವರು ಸದಾ ಮುಸ್ಲಿಂ ಸಮುದಾಯವನ್ನು ದ್ವೇಷಿಸುವುದು, ಸರ್ಜಿಕಲ್ ದಾಳಿಯಂತಹ ತಂತ್ರಗಾರಿಕೆ ಮಾಡಿ ದೇಶದ ಮುಗ್ಧ ಜನರನ್ನು ವಂಚಿಸಿ ಮತ ಪಡೆಯಲಾಯಿತು. ಬೇರೆ ಪಕ್ಷಗಳ ವೈಫಲ್ಯವನ್ನು ಜನತೆಗೆ ತಿಳಿಸಿದ ಬಿಜೆಪಿ ದೇಶದಲ್ಲಿ ಅಧಿಕಾರ ಹಿಡಿಯಿತು. ಬಿಜೆಪಿ ಎಷ್ಟು ಜನಪರವಾಗಿರುತ್ತದೆ ಎನ್ನುವುದು ಕೇಂದ್ರ ಬಜೆಟ್ನಿಂದಲೇ ಗೊತ್ತಾಗುತ್ತದೆ ಎಂದು ವ್ಯಂಗ್ಯವಾಡಿದರು.
ಕೋಮುವಾದಿ ಬಿಜೆಪಿಯನ್ನು ಕಟ್ಟಿ ಹಾಕುವ ಶಕ್ತಿ ಇರುವುದು ಕಮ್ಯೂನಿಸ್ಟ್ ಪಕ್ಷಕ್ಕೆ ಮಾತ್ರ. ಜೆಡಿಎಸ್-ಕಾಂಗ್ರೆಸ್ ಪಕ್ಷಗಳು ಮೈತ್ರಿ ಮಾಡಿಕೊಂಡಿದ್ದರಿಂದಲೇ ರಾಜ್ಯದಲ್ಲಿ ಹೆಚ್ಚಿನ ಸ್ಥಾನಗಳನ್ನು ಕೋಮುವಾದಿ ಪಕ್ಷ ಪಡೆದಿದೆ ಎಂದು ಆರೋಪಿಸಿದರು.
ಕಮ್ಯೂನಿಸ್ಟ್ ಪಕ್ಷ, ರೈತ ಸಂಘ ಹಾಗೂ ಬಿಎಸ್‌ಪಿಯನ್ನು ದೂರವಿಟ್ಟು ಕಾಂಗ್ರೆಸ್-ಜೆಡಿಎಸ್ ಪಕ್ಷಗಳು ಮಾತ್ರ ಮೈತ್ರಿ ಮಾಡಿಕೊಂಡ ಪರಿಣಾಮ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ದಾರಿ ಸುಲಭವಾಯಿತು. ಬಿಜೆಪಿಯನ್ನು ಸೋಲಿಸಲು ಎಲ್ಲಾ ಪಕ್ಷಗಳೊಡನೆ ಮಾತುಕತೆ ನಡೆಸಿ ತೀರ್ಮಾನ ಕೈಗೊಂಡಿದ್ದರೆ ಬಿಜೆಪಿಗೆ ಗೆಲುವು ಕಷ್ಟವಾಗುತ್ತಿತ್ತು. ಇದರಿಂದ ದೇವೇಗೌಡರದು ಕುಟುಂಬ ರಾಜಕಾರಣ ಎನ್ನುವುದು ಇಡೀ ರಾಜ್ಯಕ್ಕೆ ಗೊತ್ತಾಯಿತು. ಹಾಗಾಗಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಅವರ ಮೊಮ್ಮಗ ನಿಖೀಲ್ ಲೋಕಸಭಾ ಚುನಾವಣೆಯಲ್ಲಿ ಸೋಲು ಅನುಭವಿಸಬೇಕಾಯಿತು ಎಂದು ಟೀಕಿಸಿದರು.
ಸಿಪಿಐ ಪಕ್ಷದ ಕಾರ್ಡ್ ನಿಮ್ಮ ಬಳಿ ಇದ್ದರೆ ಹೆಮ್ಮೆ, ಗೌರವವಿರುತ್ತದೆ. ಬಡವರು, ಕಾರ್ಮಿಕರ ಪರ ಹೋರಾಡಬೇಕೆಂದರೆ ಕೈಯಲ್ಲಿ ಕೆಂಪು ಝಂಡಾ ಹಿಡಿಯಬೇಕು. ಭ್ರಷ್ಟರು ನಮ್ಮ ಕಾರ್ಡ್ ಮುಟ್ಟಲು ಆಗುವುದಿಲ್ಲ ಎಂಬುದನ್ನು ಸಿಪಿಐ ಜಿಲ್ಲಾ ಮಂಡಳಿ ಸದಸ್ಯರು ನೆನಪಿನಲ್ಲಿಟ್ಟುಕೊಳ್ಳಬೇಕು ಎಂದರು.
ಸಿಪಿಐ ಸಹ ಕಾರ್ಯದರ್ಶಿ ಡಾ. ಜನಾರ್ದನ, ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ಶಿವಣ್ಣ, ಕಾರ್ಯದರ್ಶಿ ಸಿ.ವೈ. ಶಿವರುದ್ರಪ್ಪ, ಸಹ ಕಾರ್ಯದರ್ಶಿ ಜಿ.ಸಿ. ಸುರೇಶ್‌ಬಾಬು, ತಾಲೂಕು ಕಾರ್ಯದರ್ಶಿ ಟಿ.ಆರ್. ಉಮಾಪತಿ, ಎಪಿಎಂಸಿ ಹಮಾಲರ ಸಂಘದ ಮುಖಂಡ ಬಿ. ಬಸವರಾಜ್, ದೊಡ್ಡಉಳ್ಳಾರ್ತಿ ಕರಿಯಣ್ಣ, ಪಾಲವ್ವನಹಳ್ಳಿ ಪ್ರಸನ್ನಕುಮಾರ್, ಹೊಳಲ್ಕೆರೆ ತಾಲೂಕು ಕಾರ್ಯದರ್ಶಿ ಮಹೇಶ್ವರಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.