ಜಿಲ್ಲಾ ಕಾಂಗ್ರೆಸ್‌ ನೂತನ ಸಾರಥಿ ನೇಮಕ ಪ್ರಕ್ರಿಯೆ ಶುರು

ಮುಖಂಡರು-ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿದ ವೀಕ್ಷಕರು ಸುಮಾರು 50 ಆಕಾಂಕ್ಷಿಗಳಿಂದ ಅರ್ಜಿ ಸಲ್ಲಿಕೆ

Team Udayavani, Sep 1, 2019, 11:59 AM IST

1-September-18

ಚಿತ್ರದುರ್ಗ: ಜಿಲ್ಲಾ ಕಾಂಗ್ರೆಸ್‌ ಕಚೇರಿಗೆ ಕೆಪಿಸಿಸಿ ವೀಕ್ಷಕರು ಆಗಮಿಸಿದ ಸಂದರ್ಭದಲ್ಲಿ ಜಮಾಯಿಸಿದ್ದ ಕಾಂಗ್ರೆಸ್‌ ಕಾರ್ಯಕರ್ತರು.

ಚಿತ್ರದುರ್ಗ: ಜಿಲ್ಲಾ ಕಾಂಗ್ರೆಸ್‌ಗೆ ನೂತನ ಸಾರಥಿಯನ್ನು ಆಯ್ಕೆ ಮಾಡುವ ಹಿನ್ನೆಲೆಯಲ್ಲಿ ಕೆಪಿಸಿಸಿ ವೀಕ್ಷಕರು ಶನಿವಾರ ನಗರದ ಜಿಲ್ಲಾ ಕಾಂಗ್ರೆಸ್‌ ಕಚೇರಿಗೆ ಆಗಮಿಸಿದ್ದರು.

ಈ ವೇಳೆ ನೂರಾರು ಕಾರ್ಯಕರ್ತರು, ಬೆಂಬಲಿಗರು ತಮ್ಮ ನಾಯಕರೇ ಅಧ್ಯಕ್ಷರಾಗಲಿ ಎಂದು ಭಾವಚಿತ್ರಗಳನ್ನು ಹಿಡಿದು ಘೋಷಣೆ ಕೂಗುತ್ತಿದ್ದರು. ವೀಕ್ಷಕರ ಆಗಮನ, ಹೊಸ ಅಧ್ಯಕ್ಷರ ಆಯ್ಕೆ ಸಂಬಂಧ ನಡೆದ ಸಭೆಯ ಕಾರಣಕ್ಕೆ ಒನಕೆ ಓಬವ್ವ ವೃತ್ತ ಹಾಗೂ ಕಾಂಗ್ರೆಸ್‌ ಕಚೇರಿ ಜನರಿಂದ ತುಂಬಿ ಹೋಗಿತ್ತು. ಮಾಜಿ ಶಾಸಕ ಎಸ್‌.ಕೆ. ಬಸವರಾಜನ್‌, ಬಿ.ಟಿ. ಜಗದೀಶ್‌, ಒ. ಶಂಕರ್‌, ಹಾಲಸ್ವಾಮಿ, ಶಿವು ಯಾದವ್‌, ಗೀತಾನಂದಿನಿ ಗೌಡ ಸೇರಿದಂತೆ ಸುಮಾರು 50ಕ್ಕೂ ಹೆಚ್ಚು ಮಂದಿ ಕೆಪಿಸಿಸಿ ವೀಕ್ಷಕ ವೇಣುಗೋಪಾಲ್ ಅವರಿಗೆ ಅರ್ಜಿಗಳನ್ನು ಸಲ್ಲಿಸಿದರು.

ಈ ವೇಳೆ ಮಾತನಾಡಿದ ಮಾಜಿ ಸಂಸದ ಬಿ.ಎನ್‌ ಚಂದ್ರಪ್ಪ, ಜಿಲ್ಲೆಯಲ್ಲಿ ಪಕ್ಷ ಸದೃಢವಾಗಿದೆ. ಯಾವುದೇ ಗುಂಪುಗಾರಿಕೆ ಇಲ್ಲ. ಸಣ್ಣಪುಟ್ಟ ವಿಚಾರದಲ್ಲಿ ಗೊಂದಲ ಇರಬಹುದು, ಆದರೆ ಒಗ್ಗಟ್ಟಿನ ಕೊರತೆ ಇಲ್ಲ. ನಾವೆಲ್ಲರೂ ಒಂದೇ ತಾಯಿಯ ಮಕ್ಕಳಂತೆ ಇದ್ದೇವೆ ಎಂದರು.

ರಾಜ್ಯದಲ್ಲಿ ಈ ಹಿಂದೆ ಸಣ್ಣ ಪ್ರಮಾಣದಲ್ಲಿ ನೆರೆ ಬಂದಿದ್ದ ವೇಳೆ ಭೇಟಿ ನೀಡಿದ್ದ ಅಂದಿನ ಪ್ರಧಾನಿ ಡಾ| ಮನಮೋಹನ್‌ ಸಿಂಗ್‌, ಸುಮಾರು 1600 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದ್ದರು. ಆದರೆ ಈಗ ರಾಜ್ಯದಲ್ಲಿ ಬರ ಮತ್ತು ನೆರೆ ಇದೆ. ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರಗಳಿವೆ. ನೆರೆ ಪ್ರದೇಶಕ್ಕೆ ಹಣಕಾಸು ಮತ್ತು ಗೃಹ ಮಂತ್ರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರೂ ಇದುವರೆಗೆ ಕೇಂದ್ರ ಸರ್ಕಾರ ಪರಿಹಾರ ನೀಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಮಾತನಾಡಿ, ದೇಶ ಮತ್ತು ರಾಜ್ಯ ಹಾಗೂ ಜಿಲ್ಲೆಯಲ್ಲಿ ಕಾಂಗ್ರೆಸ್‌ ಪರಿಸ್ಥಿತಿ ಸರಿ ಇಲ್ಲ ಎಂದು ಅಧೀರರಾಗುವ ಅಗತ್ಯ ಇಲ್ಲ. ಬಿಜೆಪಿ ನೇತೃತ್ವದ ಸರ್ಕಾರಗಳು ಕಾಂಗ್ರೆಸ್‌ ಪಕ್ಷದ ನೇತಾರರನ್ನು ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ. ತಮ್ಮ ನಿಯಂತ್ರಣಲ್ಲಿರುವ ವಿವಿಧ ಸಂಸ್ಥೆಗಳಿಂದ ನಮ್ಮ ನಾಯಕರಿಗೆ ತೊಂದರೆ ನೀಡುತ್ತಿದ್ದಾರೆ. ಪಿ. ಚಿದಂಬರಂ ಹಾಗೂ ಡಿ.ಕೆ. ಶಿವಕುಮಾರ್‌ ಪ್ರಕರಣಗಳು ಇದಕ್ಕೆ ಸಾಕ್ಷಿ ಎಂದು ಆರೋಪಿಸಿದರು. ರಾಜ್ಯದಲ್ಲಿ ವಾಮಮಾರ್ಗದಿಂದ ಅಧಿಕಾರಕ್ಕೆ ಬಂದ ಬಿಜೆಪಿ ಸ್ವಾಯತ್ತ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್‌ ಪಕ್ಷವನ್ನು ಹೆದರಿಸುವ ಕೆಲಸ ಮಾಡುತ್ತಿದೆ. ಇದನ್ನು ಎಲ್ಲರೂ ಖಂಡಿಸಬೇಕು ಎಂದರು.

ಈಗ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರ ಆಯ್ಕೆ ಸಂಬಂಧ ಸಭೆ ನಡೆಯುತ್ತಿದೆ. ಜಿಲ್ಲೆಯಲ್ಲಿ ಪಕ್ಷ ಸಂಘಟಿಸುವ ಕೆಲಸ ಮಾಡಬೇಕಿದೆ. ಅಧಿಕಾರ ಒಂದೇ ಪಕ್ಷದಲ್ಲಿ ಇರುವುದಿಲ್ಲ. ಈಗ ನಮ್ಮಲ್ಲಿ ಅಧಿಕಾರ ಇಲ್ಲದಿರಬಹುದು, ಅದಕ್ಕೆ ಯಾವುದೇ ನಿರಾಸೆ ಬೇಡ. ಮುಂದಿನ ದಿನದಲ್ಲಿ ಮತ್ತೆ ಕಾಂಗ್ರೆಸ್‌ ಪಕ್ಷವೇ ಅಧಿಕಾರ ಹಿಡಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಜಿಪಂ ಅಧ್ಯಕ್ಷೆ ವಿಶಾಲಾಕ್ಷಿ ನಟರಾಜ್‌, ಮಾಜಿ ಶಾಸಕರಾದ ಬಿ.ಜಿ.ಗೋವಿಂದಪ್ಪ, ಡಿ. ಸುಧಾಕರ್‌. ಉಮಾಪತಿ. ಇಳ್ಕಲ್ ವಿಜಯಕುಮಾರ್‌, ಮುಖಂಡರಾದ ಹನುಮಲಿ ಷಣ್ಮುಖಪ್ಪ, ಆರ್‌. ಮಂಜುನಾಥ್‌. ಜಿ.ಎಸ್‌. ಮಂಜುನಾಥ್‌, ಬಿ.ಟಿ. ಜಗದೀಶ್‌, ಶಂಕರ್‌, ಗೋ. ತಿಪ್ಪೇಶಿ, ಡಾ| ಯೋಗೇಶ್‌ಬಾಬು ಮತ್ತಿತರರು ಇದ್ದರು.

ಟಾಪ್ ನ್ಯೂಸ್

11

PAK- SA: 421 ರನ್ನುಗಳ ಭಾರೀ ಹಿನ್ನಡೆ; ಪಾಕಿಸ್ಥಾನಕ್ಕೆ ಫಾಲೋಆನ್‌

10

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

POLICE-5

Udupi: ಗಾಂಜಾ ಸೇವಿಸಿದ ವ್ಯಕ್ತಿ ಪೊಲೀಸ್‌ ವಶ

6

Manipal: ಅಪಾಯಕಾರಿ ರೀತಿಯಲ್ಲಿ ಬೈಕ್‌ ಚಾಲನೆ; ಪ್ರಕರಣ ದಾಖಲು

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

de

Kundapura: ಗುಲ್ವಾಡಿ; ಗಾಯಾಳು ಸಾವು

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

11

PAK- SA: 421 ರನ್ನುಗಳ ಭಾರೀ ಹಿನ್ನಡೆ; ಪಾಕಿಸ್ಥಾನಕ್ಕೆ ಫಾಲೋಆನ್‌

POLICE-5

Udupi: ಗಾಂಜಾ ಸೇವಿಸಿದ ವ್ಯಕ್ತಿ ಪೊಲೀಸ್‌ ವಶ

6

Manipal: ಅಪಾಯಕಾರಿ ರೀತಿಯಲ್ಲಿ ಬೈಕ್‌ ಚಾಲನೆ; ಪ್ರಕರಣ ದಾಖಲು

10

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.