ಹಳೆ ಪ್ರಕರಣ ಇತ್ಯರ್ಥಕ್ಕೆ ಕ್ರಮ: ನ್ಯಾ| ಓಕಾ

ಹತ್ತು ವರ್ಷಗಳ ಹಿಂದಿನ ಪ್ರಕರಣ ಡಿಸೆಂಬರ್‌ ಅಂತ್ಯಕ್ಕೆ ವಿಲೇವಾರಿ ಮಾಡಲು ಸೂಚನೆ

Team Udayavani, Nov 17, 2019, 1:04 PM IST

17-November-10

ಚಿತ್ರದುರ್ಗ: ಕಾಲಮಿತಿಯಲ್ಲಿ ಹಳೆ ಪ್ರಕರಣಗಳನ್ನು ಇತ್ಯರ್ಥಪಡಿಸಲು ಆದ್ಯತೆ ನೀಡುತ್ತಿದ್ದು, ಇಡೀ ನ್ಯಾಯಾಂಗ ವ್ಯವಸ್ಥೆ ಇದಕ್ಕೆ ಸಹಕಾರ ನೀಡಬೇಕು ಎಂದು ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಅಭಯ್‌ ಶ್ರೀನಿವಾಸ್‌ ಓಕಾ ಹೇಳಿದರು.

ನಗರದ ಜಿಲ್ಲಾ ನ್ಯಾಯಾಲಯಕ್ಕೆ ಶನಿವಾರ ಆಗಮಿಸಿದ್ದ ವೇಳೆ ವಕೀಲರ ಭವನದಲ್ಲಿ ಚಿತ್ರದುರ್ಗ ಬಾರ್‌ ಅಸೋಸಿಯೇಷನ್‌ನಿಂದ ಗೌರವ ಸ್ವೀಕರಿಸಿ ಅವರು ಮಾತನಾಡಿದರು. ಹತ್ತು ವರ್ಷಗಳ ಹಿಂದಿನ ಪ್ರಕರಣಗಳನ್ನು ಡಿಸೆಂಬರ್‌ ಅಂತ್ಯಕ್ಕೆ ವಿಲೇವಾರಿ ಮಾಡಬೇಕು.

ಐದು ವರ್ಷಗಳ ಹಿಂದಿನ ಪ್ರಕರಣಗಳನ್ನು 2020ರ ವರ್ಷಾಂತ್ಯದ ಒಳಗೆ ಇತ್ಯರ್ಥಪಡಿಸಬೇಕು. ಇದಕ್ಕೆ ವಕೀಲರು ಕೂಡ ಸಹಕಾರ ನೀಡಬೇಕು ಎಂದರು. ನ್ಯಾಯಾಂಗ ವ್ಯವಸ್ಥೆಯ ಮೇಲೆ ಜನಸಾಮಾನ್ಯರು ಸಾಕಷ್ಟು ನಂಬಿಕೆ ಇಟ್ಟುಕೊಂಡಿದ್ದಾರೆ. ನ್ಯಾಯಾಂಗ ಇಲಾಖೆಯನ್ನು ಸಬಲಗೊಳಿಸಲು ಸರ್ಕಾರ ಸಾಕಷ್ಟು ಅನುದಾನ ನೀಡುತ್ತಿದೆ. ನಾವು ಸಾಮಾನ್ಯ ಜನರಿಗೆ ಉತ್ತರದಾಯಿಗಳಾಗಿರಬೇಕು. ಅವರ ವಿಶ್ವಾಸವನ್ನು ಉಳಿಸಿಕೊಳ್ಳಲು ಶ್ರಮಿಸಬೇಕು ಎಂದು ಕರೆ ನೀಡಿದರು.

ನ. 26 ಸಂವಿಧಾನ ದಿನಾಚರಣೆ. ಈ ಮೂಲಕ ನಾವೆಲ್ಲಾ ಸಂವಿಧಾನದ ಮರು ಪ್ರವೇಶ ಮಾಡಬೇಕಿದೆ. ಸಮಾಜದ ಇತರೆ ವರ್ಗಗಳನ್ನು ಬದಿಗಿಟ್ಟು ನ್ಯಾಯಾಂಗ ವ್ಯವಸ್ಥೆಯಲ್ಲಿರುವ ನಾವುಗಳು ಸಂವಿಧಾನದ ಜಾತ್ಯತೀತ ಮೌಲ್ಯಗಳನ್ನು ಎತ್ತಿ ಹಿಡಿಯುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.

ನ್ಯಾಯಾಂಗ ವಿಭಾಗಕ್ಕೆ ಸರ್ಕಾರ ಸಾಕಷ್ಟು ಅನುದಾನ ನೀಡುತ್ತಿದೆ. ಮೂಲ ಸೌಲಭ್ಯಕ್ಕೆ ಒತ್ತು ನೀಡಲಾಗುತ್ತಿದ್ದು, ದೇಶದ ಇತರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ನ್ಯಾಯಾಂಗದ ಸೌಲಭ್ಯಗಳು ಚೆನ್ನಾಗಿವೆ ಎಂದು ಶ್ಲಾಘಿಸಿದರು. ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ ಸಂಕೀರ್ಣ ಬಹಳ ಸಣ್ಣದು. ಆದ್ದರಿಂದ ಹೊಸ ಕೋರ್ಟ್‌ ಕಾಂಪ್ಲೆಕ್ಸ್‌ ನಿರ್ಮಾಣವಾಗಬೇಕು. ಈಗಾಗಲೇ ಕೌಟುಂಬಿಕ ನ್ಯಾಯಾಲಯ ಮಂಜೂರಾಗಿದ್ದು, ಅದು ಕಾರ್ಯ ನಿರ್ವಹಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ವ್ಯಾವಹಾರಿಕ ನ್ಯಾಯಾಲಯವೂ ಬೇಕು ಎಂದು ಚಿತ್ರದುರ್ಗ ಜಿಲ್ಲಾ ವಕೀಲರ ಸಂಘದ ಪರವಾಗಿ ಪಿ.ಎಚ್‌.ಹನುಮಂತರಾಯ ಅವರು ಮನವಿ ಸಲ್ಲಿಸಿದರು.

ಹೊಸದುರ್ಗ ಹಾಗೂ ಹೊಳಲ್ಕೆರೆ ತಾಲೂಕುಗಳು ಜಿಲ್ಲಾ ಕೇಂದ್ರದಿಂದ ಸಾಕಷ್ಟು ದೂರದಲ್ಲಿವೆ. ಆದ್ದರಿಂದ ಹೊಳಲ್ಕೆರೆಯಲ್ಲಿ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಸ್ಥಾಪಿಸಲು ಕ್ರಮ ಕೈಗೊಳ್ಳುವಂತೆ ಹೊಳಲ್ಕೆರೆ ವಕೀಲರ ಸಂಘದ ಪದಾಧಿಕಾರಿಗಳು ಎಂದು ಮನವಿ ಮಾಡಿದರು. ಈ ಮನವಿಗೆ ಪ್ರತಿಕ್ರಿಯಿಸಿದ ಹೈಕೋರ್ಟ್‌ ಮುಖ್ಯ ನ್ಯಾಯಾಧೀಶರು, ಹೊಸ ಕೋರ್ಟ್‌ ಕಾಂಪ್ಲೆಕ್ಸ್‌ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸರ್ಕಾರದ ಕಾರ್ಯದರ್ಶಿಗಳೊಂದಿಗೆ ಜತೆ ಮಾತಕತೆ ನಡೆಸುತ್ತೇವೆ.

ಹೊಳಲ್ಕೆರೆಯಲ್ಲಿ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ನಿರ್ಮಾಣ ಕುರಿತು ಕೋರ್ಟ್‌ ಕಮಿಟಿ ಪರಿಶೀಲಿಸಿ ವರದಿ ನೀಡಲಿದೆ ಎಂದರು. ಕಾರ್ಯಕ್ರಮದಲ್ಲಿ ಹೈಕೋರ್ಟ್‌ ರಿಜಿಸ್ಟ್ರಾರ್‌ಗಳಾದ ರಾಜೇಂದ್ರ ಎಂ. ಬಾದಾಮಿಕರ್‌, ವೆಂಕಟೇಶ್‌ ನಾಯ್ಕ, ಚಂದ್ರಶೇಖರ ರೆಡ್ಡಿ, ಜಿಲ್ಲಾ ನ್ಯಾಯಾ ಧೀಶ ಎಸ್‌.ವೈ. ವಟವಟಿ, ವಕೀಲರ ಸಂಘದ ಜಿಲ್ಲಾಧ್ಯಕ್ಷ ವಿಜಯಕುಮಾರ್‌, ನ್ಯಾಯಾಧೀಶರಾದ ಹನುಮಂತಪ್ಪ ಆರ್‌ ಬನ್ನಿಕಟ್ಟೆ, ಶಂಕ್ರಪ್ಪ ಬಿ. ಮಾಲಾಶೆಟ್ಟಿ ಸೇರಿದಂತೆ ವಿವಿಧ ನ್ಯಾಯಾಧೀಶರು ನಭಾಗವಹಿಸಿದ್ದರು.

ಟಾಪ್ ನ್ಯೂಸ್

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

1-dp

Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ

Police

Subhramanya: ಹೆದ್ದಾರಿ ತಡೆದು ಪ್ರತಿಭಟನೆ: 13 ಮಂದಿಗೆ ಜಾಮೀನು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Suside-Boy

Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ

Suside-Boy

Mudubidre: ಅಂತಿಮ ಬಿಬಿಎಂ ವಿದ್ಯಾರ್ಥಿ ಆತ್ಮಹತ್ಯೆ

Suside-Boy

Belthangady: ಕಲ್ಮಂಜ: ರಿಕ್ಷಾ ಚಾಲಕ ಆತ್ಮಹತ್ಯೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.