ಸ್ವಚ್ಛತಾ ಅಭಿಯಾನ ಯಶಸ್ವಿಗೊಳಿಸಿ
•ಜಿಲ್ಲೆಯ ಎಲ್ಲ ನಗರ-ಪಟ್ಟಣಗಳಲ್ಲಿ 'ನಮ್ಮ ಚಿತ್ತ ಸ್ವಚ್ಛತೆಯತ್ತ ಕಾರ್ಯಕ್ರಮ: ವಿನೋತ್ ಪ್ರಿಯಾ
Team Udayavani, Jul 7, 2019, 11:26 AM IST
ಚಿತ್ರದುರ್ಗ: ಸ್ವಚ್ಛತಾ ಆಂದೋಲನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಸ್ವಚ್ಛತೆ ಕುರಿತು ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ಚಿತ್ರದುರ್ಗ: ಸ್ವಚ್ಛತೆ ಇರುವ ಕಡೆ ಆರೋಗ್ಯ ಇರುತ್ತದೆ. ಉತ್ತಮ ಆರೋಗ್ಯ ಇದ್ದರೆ ಬಲಿಷ್ಠ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಅಭಿಪ್ರಾಯಪಟ್ಟರು.
ನಗರದ ಜೆಸಿಆರ್ ವೃತ್ತದ ಬಳಿ ಜಿಲ್ಲಾಡಳಿತ ಮತ್ತು ನಗರಸಭೆ ಸಹಯೋಗದಲ್ಲಿ ಸ್ವಚ್ಛ ಸರ್ವೇಕ್ಷಣದ ಅಂಗವಾಗಿ ಶನಿವಾರ ಹಮ್ಮಿಕೊಂಡಿದ್ದ ಸ್ವಚ್ಛತಾ ಆಂದೋಲನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ನಗರ, ಪಟ್ಟಣ ಪ್ರದೇಶಗಳಲ್ಲಿ ಸ್ವಚ್ಛತೆ ಕಾಪಾಡಲು ಹಾಗೂ ಸಾರ್ವಜನಿಕರಿಗೆ ಅರಿವು ಮೂಡಿಸಲು ಮೊದಲ ಹಾಗೂ ಮೂರನೇ ಶನಿವಾರ ಸ್ವಚ್ಛತಾ ಕಾರ್ಯಕ್ರಮವನ್ನು ನಡೆಸಲಾಗುತ್ತದೆ. ಇಂದಿನಿಂದ ಜಿಲ್ಲೆಯ ಎಲ್ಲ ನಗರ, ಪಟ್ಟಣಗಳಲ್ಲಿ ಈ ಕಾರ್ಯಕ್ರಮ ಪ್ರಾರಂಭಿಸಲಾಗಿದೆ. ಈ ಕಾರ್ಯಕ್ರಮ ನಿರಂತರವಾಗಿ ನಡೆಯಲಿದೆ ಎಂದರು.
ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್‌ದವರು ಕಸ ಸಂಗ್ರಹಿಸುವ ವಾಹನಗಳಲ್ಲೇ ಸಾರ್ವಜನಿಕರು ಕಸ ಹಾಕುವ ಮೂಲಕ ಸ್ವಚ್ಛತೆ ಕಾಪಾಡಬೇಕು. ಖಾಲಿ ಸ್ಥಳ, ನಿವೇಶನ ಸೇರಿದಂತೆ ಎಲ್ಲೆಂದರಲ್ಲಿ ಕಸ ಹಾಕಬಾರದು ಎಂದು ಮನವಿ ಮಾಡಿದರು.
ನಗರಸಭೆ ಸದಸ್ಯೆ ರೋಹಿಣಿ ಮಾತನಾಡಿ, ನಗರ, ಪಟ್ಟಣಗಳ ಸ್ವಚ್ಛತೆಗೆ ಜಿಲ್ಲಾಧಿಕಾರಿಗಳು ಹೆಚ್ಚಿನ ಒತ್ತು ನೀಡಿದ್ದು, ನಾಗರಿಕರು ಸಹಕರಿಸಬೇಕು. ಮನೆ ಸುತ್ತಮುತ್ತ, ಖಾಲಿ ಜಾಗಗಳಲ್ಲಿ ಕಸ ಹಾಕಬಾರದು. ಹಸಿ ಕಸ ಮತ್ತು ಒಣ ಕಸ ಹಾಗೂ ಪ್ಲಾಸ್ಟಿಕ್ ಪ್ರತ್ಯೇಕಿಸಿ ಕಸದ ವಾಹನಗಳಲ್ಲೇ ಹಾಕಬೇಕು. ಕೆಲವರು ರಾತ್ರಿ ವೇಳೆಯಲ್ಲಿ ಚರಂಡಿ, ರಸ್ತೆ ಬದಿಯಲ್ಲಿ ಕಸ ಹಾಕುತ್ತಾರೆ. ಇದು ನಿಲ್ಲಬೇಕು ಎಂದರು.
ಇನ್ನರ್‌ವ್ಹೀಲ್ ಕ್ಲಬ್ ಮಾಜಿ ಅಧ್ಯಕ್ಷ ರಾಜೇಶ್ವರಿ ಮಾತನಾಡಿ, ಜಿಲ್ಲಾಧಿಕಾರಿಗಳೊಂದಿಗೆ ಸ್ವಚ್ಛ ಭಾರತ್ ಕಾರ್ಯಕ್ರಮ ನಡೆಸಿದ್ದೇವೆ. ಸುಂದರ ಪರಿಸರ ನಿರ್ಮಿಸಲು ಪ್ರತಿಯೊಬ್ಬರೂ ಸ್ವಚ್ಛತೆ ಬಗ್ಗೆ ಕಾಳಜಿ ವಹಿಸಬೇಕು. ಸ್ವತಃ ಜಿಲ್ಲಾಧಿಕಾರಿಯವರೇ ಪೊರಕೆ ಹಿಡಿದು ಕಸ ಗುಡಿಸಿರುವುದು ಎಲ್ಲರಿಗೂ ಉತ್ತೇಜನ ನೀಡಿದಂತಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.
‘ನಮ್ಮ ಚಿತ್ತ ಸ್ವಚ್ಛತೆಯತ್ತ’ ಎಂಬ ಘೋಷ ವಾಕ್ಯದೊಂದಿಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಜಿಲ್ಲಾಧಿಕಾರಿಗಳು ಚಿಂದಿ ಆಯುವವರಿಗೆ ಗುರುತಿನ ಚೀಟಿ ವಿತರಿಸಿದರು. ಜೆಸಿಆರ್ ಬಡಾವಣೆ, ಹಿಮ್ಮತ್ ನಗರ, ಜೆ.ಜೆ. ಹಟ್ಟಿ, ಖಾಲಿ ನಿವೇಶನ ಹಾಗೂ ಸರ್ವಿಸ್ ರಸ್ತೆಗಳ ಮೇಲೆ ಬಿದ್ದಿದ್ದ ಪ್ಲಾಸ್ಟಿಕ್ ಕವರ್, ಬಾಟಲ್ ಮತ್ತಿತರ ತ್ಯಾಜ್ಯ ವಸ್ತುಗಳನ್ನು ಸಂಗ್ರಹಿಸಿ ನಗರಸಭೆ ಕಸದ ವಾಹನಗಳಲ್ಲಿ ಹಾಕಲಾಯಿತು.
ನಗರಸಭೆ ಸದಸ್ಯೆ ಅನುರಾಧಾ ರವಿಕುಮಾರ್, ಪರಿಸರ ಇಂಜಿನಿಯರ್ ಜಾಫರ್, ವ್ಯವಸ್ಥಾಪಕ ಜಯಣ್ಣ, ಟಾರ್ಗೆಟ್ ಟೆನ್ ತೌಸಂಡ್ ಬಳಗ, ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Naxal Surrender: ಮುಂಡಗಾರು ಲತಾ ಸೇರಿ 6 ನಕ್ಸಲರು ನಾಳೆ ಶರಣಾಗತಿ?
Mangaluru: ರಾಜ್ಯದಲ್ಲೇ ಮೊದಲ ಹವಾಮಾನ ಡಾಪ್ಲರ್ ರಾಡಾರ್
Dispute: ಚಿಕ್ಕಮಗಳೂರಲ್ಲಿ ತಾರಕಕ್ಕೇರಿದ ದರ್ಗಾ ವಿವಾದ: ಬಿಗು ಪರಿಸ್ಥಿತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್
540 ಅಡಿ ಆಳದ ಬೋರ್ವೆಲ್ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.