ಏಕನಾಥೇಶ್ವರಿದೇವಿ ಮೂರ್ತಿ ಮೆರವಣಿಗೆ
Team Udayavani, Apr 18, 2019, 4:23 PM IST
ಚಿತ್ರದುರ್ಗ: ಕೋಟೆನಾಡಿನ ಅಧಿದೇವತೆ ಏಕನಾಥೇಶ್ವರಿ ದೇವಿ
ಜಾತ್ರಾ ಮಹೋತ್ಸವದ ಅಂಗವಾಗಿ ಕೋಟೆ ಮೇಲ್ಭಾಗದಿಂದ ನಗರಕ್ಕೆ ದೇವತೆ ಮೂರ್ತಿಯನ್ನು ಭಕ್ತರು ಮೆರವಣಿಗೆಯಲ್ಲಿ ಕರೆತಂದರು.
ಮೇಲುದುರ್ಗದ ಮೇಲಿರುವ ದೇಗುಲದಲ್ಲಿ ಬುಧವಾರ ಬೆಳಗಿನ ಜಾವ ಪೂಜಾ ವಿಧಿ ವಿಧಾನಗಳನ್ನು ದೇಗುಲದ ಪ್ರಧಾನ ಅರ್ಚಕರು ನೆರವೇರಿಸಿದರು. ದೇವಿಯ ದೊಡ್ಡ ಭಂಡಾರದ ಪೂಜೆ
ವಿಶೇಷವಾಗಿತ್ತು. ನಂತರ ಮೂಲ ಗರ್ಭಗುಡಿಯಿಂದ ದೇವಿಯ ಉತ್ಸವ ಮೂರ್ತಿಯನ್ನು ಮಡಿ ಹಾಸಿನ ಮೇಲೆ ಮಂಗಳ ವಾದ್ಯ ಘೋಷಗಳೊಂದಿಗೆ ಕರೆ ತಂದು ಅಶ್ವ ವಾಹನದ ಮೇಲಿನ ಉಚ್ಚಾಯದಲ್ಲಿ ಪ್ರತಿಷ್ಠಾಪಿಸಲಾಯಿತು. ದೇಗುಲದ ಮುಂಭಾಗದಲ್ಲಿರುವ ಶಿವನ ವಿಗ್ರಹಕ್ಕೆ ಮೂರು ಬಾರಿ ಪ್ರದಕ್ಷಿಣೆ
ಹಾಕಿಸುವ ವೇಳೆ ಉಧೋ ಉಧೋ ಎಂಬ ಹರ್ಷೋದ್ಗಾರ ಮುಗಿಲು ಮುಟ್ಟಿತು.
ಪುಷ್ಪಾಲಂಕೃತ ದೇವತಾ ಮೂರ್ತಿಯನ್ನು ಕೋಟೆಯಿಂದ
ಭಕ್ತರು ಕರೆತಂದು ಟ್ರ್ಯಾಕ್ಟರ್‌ನಲ್ಲಿ ಪ್ರತಿಷ್ಠಾಪಿಸಿದರು. ಚಂದ್ರಮಾಸ ಹೊಂಡದಲ್ಲಿ ದೇವತೆಗೆ ಗಂಗಾಪೂಜೆ,
ಕುಂಭಾಭಿಷೇಕ, ಮಹಾಮಂಗಳಾರತಿ ನೆರವೇರಿಸಲಾಯಿತು. ಕೋಟೆ ರಸ್ತೆ, ಕಾಮನಬಾವಿ ಬಡಾವಣೆ, ಕರುವಿನಕಟ್ಟೆ
ವೃತ್ತ, ಕೂಡಲಿ ಶೃಂಗೇರಿ ಮಠದ ರಸ್ತೆ, ಸುಣ್ಣದ ಗುಮ್ಮಿ, ಜೋಗಿಮಟ್ಟಿ ರಸ್ತೆ, ತಿಪ್ಪಿನಘಟ್ಟಮ್ಮ ಮೂಲ ದೇಗುಲದ
ಅಕ್ಕಪಕ್ಕ, ಜಟ್‌ಪಟ್‌ನಗರ, ಜಿಲ್ಲಾ ಕ್ರೀಡಾಂಗಣ ರಸ್ತೆಗಳಲ್ಲಿ ಸಂಚರಿಸಿದ ದೇವತೆಗೆ ಭಕ್ತರು ಪೂಜೆ ಸಲ್ಲಿಸಿದರು. ಬಳಿಕ ಪಾನಕ, ಕೋಸಂಬರಿ, ಮಜ್ಜಿಗೆ, ಪುಳಿಯೊಗರೆ, ಮೊಸರನ್ನ ವಿತರಿಸಲಾಯಿತು.
ರಾತ್ರಿ ಜಿಲ್ಲಾಧಿಕಾರಿ, ವಿವಿಧ ಇಲಾಖೆಗಳ ಅ ಧಿಕಾರಿಗಳು ಹಾಗೂ
ಗುಡಿಗೌಡರ ಮನೆಯಲ್ಲಿ ಪೂಜೆ ನಡೆಯಿತು. ನಂತರ ಕೆಳಗೋಟೆಯ ವಿವಿಧೆಡೆ ಸಂಚರಿಸಿ ಭಕ್ತರಿಂದ ಪೂಜೆ ಸ್ವೀಕರಿಸಿದ ನಂತರ ಪಾದಗುಡಿಗೆ ದೇವತೆಯನ್ನು ಕರೆತರಲಾಯಿತು.
ಕಹಳೆ, ಉರುಮೆ, ತಮಟೆ, ಡೊಳ್ಳು ಹಾಗೂ ನಗಾರಿ ಸೇರಿದಂತೆ ವಿವಿಧ ಜಾನಪದ ಕಲಾ ತಂಡಗಳು ಮೆರವಣಿಗೆಗೆ ಮೆರುಗು ನೀಡಿದವು. ಐತಿಹಾಸಿಕ ಚಂದ್ರವಳ್ಳಿಯಲ್ಲಿ ನಗರದೇವತೆ ಬರಗೇರಮ್ಮ ದೇವಿಯ ಗಂಗಾಪೂಜೆ, ಕುಂಭಾಭಿಷೇಕ ನೂರಾರು
ಭಕ್ತರ ಸಮ್ಮುಖದಲ್ಲಿ ನೆರವೇರಿತು.
ಅಲ್ಲಿಂದ ದೇಗುಲದವರೆಗೂ ದೇವಿಯ ಉತ್ಸವ ಮೂರ್ತಿಯನ್ನು ಮಡಿ ಹಾಸಿನ ಮೇಲೆ ಕರೆ ತರಲಾಯಿತು. ಏ. 30 ರಂದು ಏಕನಾಥೇಶ್ವರಿ ದೇವತೆಯ ಭವ್ಯ ಮೆರವಣಿಗೆ, 31 ರಂದು ಕೋಟೆ
ರಸ್ತೆಯ ಪಾದದ ಗುಡಿ ಮುಂಭಾಗದಲ್ಲಿ ಸಿಡಿ ಮಹೋತ್ಸವ ಜರುಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.