ಭೀತಿ ಮೂಡಿಸಿದ ಆನೆ ಹೆಜ್ಜೆ ಗುರುತು

ಆನೆ ಕಾರಿಡಾರ್‌ ಮೂಲಕ ಹೊರಗೆ ಕಳಿಸಲು ಅರಣ್ಯ ಇಲಾಖೆ ಯತ್ನ

Team Udayavani, Dec 6, 2019, 2:53 PM IST

6-December-15

ಚಿತ್ರದುರ್ಗ: ಜೋಗಿಮಟ್ಟಿ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಂತಿರುವ ಕಕ್ಕೇರು ಗ್ರಾಮದ ಬಳಿ ಆನೆ ಹೆಜ್ಜೆ ಹಾಗೂ ಲದ್ದಿ ಕಂಡು ಬಂದಿದ್ದು ಈ ಭಾಗದ ಜನರಲ್ಲಿ ಭೀತಿ ಮೂಡಿಸಿದೆ. ರೈತರು ರಾತ್ರಿ ವೇಳೆ ಜಮೀನುಗಳಿಗೆ ಹೋಗದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಎರಡರಿಂದ ಮೂರು ದಿನಗಳ ಹಿಂದೆ ಆನೆಯೊಂದು ಸಂಚರಿಸಿರುವ ಕುರುಹುಗಳು ಕಂಡು ಬಂದಿವೆ. ಮುಂದೆ ಯಾವ ಕಡೆ ಸಾಗಿದೆ ಎನ್ನುವುದು ಮಾತ್ರ ಗೊತ್ತಾಗಿಲ್ಲ. ಗುರುವಾರ ಇಡೀ ದಿನ ಅರಣ್ಯ ಇಲಾಖೆ ಸಿಬ್ಬಂದಿ ಆನೆ ಹಾಗೂ ಹೆಜ್ಜೆಯನ್ನು ಹುಡುಕಾಡಿದ್ದು ಎಲ್ಲಿಯೂ ಹೆಜ್ಜೆ ಗುರುತು ಪತ್ತೆಯಾಗಿಲ್ಲ.

ಸಾಮಾನ್ಯವಾಗಿ ಪ್ರತಿ ವರ್ಷ ನವೆಂಬರ್‌ ಹಾಗೂ ಡಿಸೆಂಬರ್‌ ತಿಂಗಳಲ್ಲಿ ಭದ್ರಾ ಅಭಯಾರಣ್ಯದಿಂದ ಚನ್ನಗಿರಿ, ಹೊಳಲ್ಕೆರೆ, ಚಿತ್ರದುರ್ಗ, ಹಿರಿಯೂರು ಮೂಲಕ ಬನ್ನೇರುಗಟ್ಟ ಅಥವಾ ಹಾಸನ ಭಾಗದ ಅರಣ್ಯ ಪ್ರದೇಶಗಳಿಗೆ ತೆರಳುವುದು ವಾಡಿಕೆ. ಈಗಾಗಲೇ ಇದನ್ನು ಆನೆ ಕಾರಿಡಾರ್‌ ಎಂದು ಗುರುತಿಸಲಾಗಿದ್ದು, ಆನೆ ಸಂಚರಿಸುವುದು ಜಿಲ್ಲೆಯ ಜನರಿಗೆ ಸಾಮಾನ್ಯವಾಗಿದೆ.  ಆದರೆ 2017 ನವೆಂಬರ್‌ ತಿಂಗಳಲ್ಲಿ ಎರಡು ಆನೆಗಳು ಬಂದು ಕಾರಿಡಾರ್‌ ಮೂಲಕ ಸಂಚರಿಸದೆ ದಾರಿ ತಪ್ಪಿ ಹಲವರ ಜೀವಹಾನಿಗೆ ಕಾರಣವಾಗಿದ್ದವು.

ಈ ಹಿನ್ನೆಲೆಯಲ್ಲಿ ಈಗ ಬಂದಿರುವ ಆನೆಯನ್ನು ಸುಸೂತ್ರವಾಗಿ ಕಾರಿಡಾರ್‌ ಮೂಲಕ ಜಿಲ್ಲೆಯಿಂದ ಕಳಿಸಲು ಅರಣ್ಯ ಇಲಾಖೆ ಸಿಬ್ಬಂದಿ ಸಜ್ಜಾಗಿದ್ದಾರೆ. ಆನೆಗಳು ಹಗಲು ಹೊತ್ತಿನಲ್ಲಿ ವಿಶ್ರಾಂತಿ ಪಡೆದು ರಾತ್ರಿ ವೇಳೆ ಪ್ರಯಾಣ ಆರಂಭಿಸುತ್ತವೆ. ಈ ಹಿನ್ನೆಲೆಯಲ್ಲಿ ಎರಡು ದಿನಗಳ ಹಿಂದೆ ಕಾಣಿಸಿಕೊಂಡಿರುವ ಹೆಜ್ಜೆಯಿಂದಾಗಿ ಈಗಾಗಲೇ ಆನೆ ಜಿಲ್ಲೆಯಿಂದ ಹೊರಗೆ ಹೋಗಿದೆಯೇ ಎನ್ನುವುದು ತಿಳಿದಿಲ್ಲ. ಇದುವರೆಗೆ ಜಿಲ್ಲೆಯಲ್ಲಿ ಯಾರ ಕಣ್ಣಿಗೂ ಆನೆ ಕಾಣಿಸಿಕೊಂಡಿಲ್ಲ.

ಅರಣ್ಯ ಇಲಾಖೆ ಸಿಬ್ಬಂದಿಯಿಂದ ರಾತ್ರಿ ಕಾರ್ಯಾಚರಣೆ: ಚಿತ್ರದುರ್ಗ ಹಾಗೂ ಹಿರಿಯೂರು ವಲಯ ಅರಣ್ಯ ಇಲಾಖೆಯ ಆರ್‌ಎಫ್‌ಒ ಪ್ರದೀಪ್‌ ಕೇಸರಿ ಹಾಗೂ ಸಂದೀಪ್‌ ನೇತೃತ್ವದಲ್ಲಿ ಸುಮಾರು 100 ಸಿಬ್ಬಂದಿ ಆನೆ ಕಾರಿಡಾರ್‌ ಮಾರ್ಗದ ಹಳ್ಳಿಗಳಲ್ಲಿ ಗುರುವಾರ ರಾತ್ರಿಯಿಡೀ ಸಂಚರಿಸಲಿದ್ದಾರೆ.

ಎಲ್ಲಿಯೂ ಆನೆಯಿಂದ ತೊಂದರೆಯಾಗದಂತೆ ನೋಡಿಕೊಳ್ಳಲು ಮುಂದಾಗಿದ್ದಾರೆ. ಜತೆಗೆ ಈಗಾಗಲೇ ಈ ಭಾಗದ ಕೆನ್ನೆಡಲು, ಕಕ್ಕೇರು, ದೊಡ್ಡಾಪುರ, ಸೊಂಡೆಕೊಳ, ನಂದಿಪುರ, ಕುರುಮರಡಿಕೆರೆ, ಚಿಕ್ಕಸಿದ್ದವ್ವನಹಳ್ಳಿ, ಮಹಾದೇವನಕಟ್ಟೆ ಸೇರಿದಂತೆ ಹಲವು ಹಳ್ಳಿಗಳಲ್ಲಿ ಜೀಪ್‌ಗ್ಳಿಗೆ ಮೈಕ್‌ ಕಟ್ಟಿಕೊಂಡು ರೈತರಿಗೆ ಆನೆ ಬಂದಿರುವ ಬಗ್ಗೆ ಅರಿವು ಮೂಡಿಸುತ್ತಿದ್ದಾರೆ.

ಟಾಪ್ ನ್ಯೂಸ್

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.