ಸರ್ಕಾರಿ ಶಾಲೇಲಿ ಇಂಗ್ಲಿಷ್‌ ಮೀಡಿಯಂ ಸ್ಟಾರ್ಟ್‌

ಬನ್ನಿ ಮಕ್ಕಳೇ, ಶಾಲೆಗೆ ದಾಖಲಾಗಿ | ಎಲ್ಕೆಜಿಯಿಂದಲೇ ಸಿಗಲಿದೆ ಆಂಗ್ಲ ಭಾಷಾ ಶಿಕ್ಷಣ

Team Udayavani, May 29, 2019, 12:53 PM IST

29-May-16

ಚಿತ್ರದುರ್ಗ: ಹೊಸಯಳನಾಡು ಗ್ರಾಮದ ಕರ್ನಾಟಕ ಪಬ್ಲಿಕ್‌ ಶಾಲೆಯಲ್ಲಿ ಆಟೋಟ ಸಾಮಗ್ರಿಗಳು

ಚಿತ್ರದುರ್ಗ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆಯಲು ರಾಜ್ಯ ಸರ್ಕಾರ ಗ್ರಾಮೀಣ ಪ್ರದೇಶಗಳಲ್ಲಿ ಕರ್ನಾಟಕ ಪಬ್ಲಿಕ್‌ ಶಾಲೆಗಳನ್ನು ಆರಂಭಿಸಿದೆ. ಇದಕ್ಕೆ ಪೋಷಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದ್ದು, ತಮ್ಮ ಮಕ್ಕಳನ್ನು ಆಂಗ್ಲ ಮಾಧ್ಯಮ ಶಾಲೆಗಳಿಗೆ ದಾಖಲು ಮಾಡಲು ಆಸಕ್ತಿ ತೋರಿಸುತ್ತಿದ್ದಾರೆ.

ಕರ್ನಾಟಕ ಪಬ್ಲಿಕ್‌ ಸರ್ಕಾರಿ ಶಾಲೆಗೆ ದಾಖಲಾಗುವ ಮಕ್ಕಳಿಗೆ ಆಂಗ್ಲ ಮಾಧ್ಯಮದಲ್ಲಿ ಬೋಧನೆ ಮಾಡುವುದರ ಜೊತೆಗೆ ಹತ್ತುಹಲವು ಆಟೋಟ, ನಾನಾ ರೀತಿಯ ಕ್ರೀಡೋಪಕರಣಗಳು ಹಾಗೂ ಬಸ್‌ ಸೌಲಭ್ಯವನ್ನೂ ಒದಗಿಸಲಾಗಿದೆ.

ಜಿಲ್ಲೆಯ ಕೆಲವು ಸರ್ಕಾರಿ ಶಾಲೆಗಳಿಗೆ ಸಮುದಾಯದ ಸಹಭಾಗಿತ್ವದಲ್ಲಿ ಹೈಟೆಕ್‌ ಬಸ್‌ ಸೌಲಭ್ಯವನ್ನೂ ನೀಡಲಾಗಿದೆ. ಅಲ್ಲದೆ ಬಹುತೇಕ ಸರ್ಕಾರಿ ಶಾಲೆಗಳಲ್ಲಿ ಐದಾರು ಎಕರೆಯಷ್ಟು ಕ್ರೀಡಾಂಗಣ ಇದ್ದು ಈ ಜಾಗದಲ್ಲಿ ಎಲ್ಲ ರೀತಿಯ ಆಟೋಟಗಳನ್ನು ಆಡಲು ಅನುಕೂಲ ಕಲ್ಪಿಸಲಾಗಿದೆ.

ಶಿಕ್ಷಕರಿಗೆ ಡಯಟ್ನಿಂದ ತರಬೇತಿ: ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಜಿಲ್ಲೆಯ 24 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಇಂಗ್ಲಿಷ್‌ ಮಾಧ್ಯಮವನ್ನು ಒಂದನೇ ತರಗತಿಯಿಂದ ಪ್ರಾರಂಭಿಸಲಾಗುತ್ತಿದೆ. ಇದಕ್ಕೆ ಅಗತ್ಯವಾಗಿರುವ ಶಿಕ್ಷಕರಿಗೆ ತರಬೇತಿ ನೀಡಲಾಗಿದೆ. ಇದರ ಜೊತೆಯಲ್ಲಿ ಜಿಲ್ಲೆಯ 7 ಕೆಪಿಎಸ್‌ ಶಾಲೆಗಳಲ್ಲಿ ಎಲ್ಕೆಜಿ ಪ್ರಾರಂಭಿಸಲಾಗುತ್ತಿದೆ. ಬಹುತೇಕ ಶಾಲೆಗಳಿಗೆ ಮಕ್ಕಳು ಉತ್ಸಾಹದಿಂದಲೇ ಪ್ರವೇಶ ಪಡೆಯುತ್ತಿದ್ದಾರೆ.

ಎಲ್ಕೆಜಿ ಆರಂಭವಾಗಲಿರುವ ಶಾಲೆಗಳಲ್ಲಿ ಒಬ್ಬ ಶಿಕ್ಷಕ ಮತ್ತು ಶಾಲೆಗೆ ಒಬ್ಬರಂತೆ ಆಯಾ ನೇಮಕ ಮಾಡಿಕೊಳ್ಳಲು ಎಸ್‌ಡಿಎಂಸಿಗೆ ಅವಕಾಶ ನೀಡಲಾಗಿದೆ. ಶಿಕ್ಷಕರು ಮತ್ತು ಆಯಾಗಳ ವೇತನವನ್ನು ಸರ್ಕಾರ ಎಸ್‌ಡಿಎಂಸಿಗೆ ನೀಡಲಿದೆ.

ಆಂಗ್ಲ ಮಾಧ್ಯಮ ಆರಂಭವಾಗುತ್ತಿರುವ ಶಾಲೆಗಳ ತಲಾ ಮೂವರು ಶಿಕ್ಷಕರಿಗೆ ಜಿಲ್ಲಾ ಡಯಟ್ ಸಂಸ್ಥೆ ಈಗಾಗಲೇ ಆಂಗ್ಲ ಮಾಧ್ಯಮದಲ್ಲಿ ಹೇಗೆ ಪಾಠ ಮಾಡಬೇಕು, ಮಕ್ಕಳು ಆಂಗ್ಲ ಮಾಧ್ಯಮದಲ್ಲಿ ಹೇಗೆ ಸಂವಹನ ನಡೆಸಬೇಕು, ಬೋಧನೆ, ಕಲಿಕೆ ಮತ್ತಿತರ ವಿಷಯಗಳ ಕುರಿತು ಸೂಕ್ತ ತರಬೇತಿ ನೀಡಿದೆ. ಇಂಗ್ಲಿಷ್‌ ಮಾಧ್ಯಮದಲ್ಲಿ ಬೋಧಿಸಲು ತರಬೇತಿ ಹೊಂದಿದ ಶಿಕ್ಷಕರನ್ನು ನಿಯೋಜಿಸಲಾಗಿದೆ. ಆಂಗ್ಲ ಮಾಧ್ಯಮದ ಹೊಸ ಪಠ್ಯಪುಸ್ತಕಗಳು ಶೀಘ್ರದಲ್ಲೇ ಸರಬರಾಜಾಗಲಿವೆ. ಕರ್ನಾಟಕ ಪಬ್ಲಿಕ್‌ ಶಾಲೆಗಳಲ್ಲಿ ಕೊಠಡಿಗಳ ಕೊರತೆ ಇದ್ದರೆ ಹೊಸ ಕೊಠಡಿ ನಿರ್ಮಾಣಕ್ಕೆ ಸರ್ಕಾರ ಅನುದಾನ ನೀಡಲಿದ್ದು, ಇದಕ್ಕಾಗಿ ಪ್ರಸ್ತಾವನೆ ಸಲ್ಲಿಸಲು ಶಿಕ್ಷಣ ಇಲಾಖೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದೆ.

ಎಲ್ಲೆಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ?: ಜಿಲ್ಲೆಯಲ್ಲಿ ಏಳು ಕರ್ನಾಟಕ ಪಬ್ಲಿಕ್‌ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ನೀಡಲಾಗುವುದು. ಚಳ್ಳಕೆರೆ ತಾಲೂಕಿನ ಪರಶುರಾಂಪುರ, ಚಿತ್ರದುರ್ಗ ತಾಲೂಕಿನ ಜಂಪಯ್ಯನಹಟ್ಟಿ, ಹಿರಿಯೂರು ತಾಲೂಕಿನ ಮರಡಿಹಳ್ಳಿ ಮತ್ತು ಹೊಸಯಳನಾಡು, ಹೊಸದುರ್ಗ ತಾಲೂಕಿನ ಶ್ರೀರಾಂಪುರ, ಮೊಳಕಾಲ್ಮೂರು ತಾಲೂಕಿನ ಬಿ.ಜಿ. ಕೆರೆ ಹಾಗೂ ಹೊಳಲ್ಕೆರೆ ತಾಲೂಕಿನ ಕಾಶಿಪುರ ಗ್ರಾಮಗಳ ಕೆಪಿಎಸ್‌ ಶಾಲೆಗಳಲ್ಲಿ ಪ್ರಸಕ್ತ ವರ್ಷದಿಂದ ಪೂರ್ವ ಪ್ರಾಥಮಿಕ ಶಾಲೆ (ಎಲ್ಕೆಜಿ) ಆರಂಭಗೊಳ್ಳಲಿದೆ.

ಒಂದನೇ ತರಗತಿಯಿಂದ ಇಂಗ್ಲಿಷ್‌ ಶಿಕ್ಷಣ ಆರಂಭವಾಗುವ ಶಾಲೆಗಳು ಇಂತಿವೆ. ಚಿತ್ರದುರ್ಗ ತಾಲೂಕಿನ ಜಂಪಯ್ಯನಹಟ್ಟಿಯ ಕೆಪಿಎಸ್‌ ಶಾಲೆ, ಕುರುಬರಹಳ್ಳಿ, ಚಿತ್ರದುರ್ಗ ನಗರದ ವಿ.ಪಿ. ಬಡಾವಣೆ ಶಾಲೆ. ಚಳ್ಳಕೆರೆ ತಾಲೂಕಿನ ಗೋಸಿಕೆರೆ, ಕಾಮಸಮುದ್ರ, ಚಳ್ಳಕೆರೆಯ ಬಾಲಕಿಯರ ಹಿ.ಪ್ರಾ ಶಾಲೆ, ಪರಶುರಾಮಪುರ ಕೆಪಿಎಸ್‌ ಶಾಲೆ. ಹೊಸದುರ್ಗ ತಾಲೂಕಿನ ದೇವಪುರ ಪಪೂ ಕಾಲೇಜು, ಶ್ರೀರಾಂಪುರ ಕೆಪಿಎಸ್‌ ಶಾಲೆ, ಹೊಸದುರ್ಗದ ಮಾದರಿ ಹಿ.ಪ್ರಾ ಶಾಲೆ. ಹಿರಿಯೂರು ತಾಲೂಕಿನ ಮರಡಿಹಳ್ಳಿ, ಹೊಸಯಳನಾಡು ಕೆಪಿಎಸ್‌ ಶಾಲೆ, ಯರಬಳ್ಳಿ ಸರ್ಕಾರಿ ಪಪೂ ಕಾಲೇಜು, ಹಿರಿಯೂರು ಕೆಎಸ್‌ಆರ್‌ಟಿ ಬಸ್‌ನಿಲ್ದಾಣ ಬಳಿಯ ಹಿ.ಪ್ರಾ ಶಾಲೆ. ಹೊಳಲ್ಕೆರೆ ತಾಲೂಕಿನ ತೆಲಕಲವಟ್ಟಿ, ರಾಮಗಿರಿ ಹಿ.ಪ್ರಾ ಶಾಲೆ, ಕಾಶಿಪುರದ ಕೆಪಿಎಸ್‌ ಶಾಲೆ, ಹೊಳಲ್ಕೆರೆಯ ಎನ್‌ಇಎಸ್‌ ಕಾಲೋನಿ ಹಿ.ಪ್ರಾ ಶಾಲೆ. ಮೊಳಕಾಲ್ಮೂರು ತಾಲೂಕಿನ ರಾಂಪುರ, ನಾಗಸಮುದ್ರ, ಮೊಳಕಾಲ್ಮೂರು ಸರ್ಕಾರ ಪಪೂ ಕಾಲೇಜು, ಬಿ.ಜಿ. ಕೆರೆಯ ಕೆಪಿಎಸ್‌ ಶಾಲೆಯಲ್ಲಿ ಒಂದನೇ ತರಗತಿಯಿಂದ ಆಂಗ್ಲ ಮಾಧ್ಯಮ ಶಿಕ್ಷಣ ದೊರೆಯಲಿದೆ. ಆಂಗ್ಲ ಮಾಧ್ಯಮ ಇರುವ ಎಲ್ಲ ಶಾಲೆಗಳಲ್ಲೂ ಕನ್ನಡ ಮಾಧ್ಯಮದ ಪ್ರತ್ಯೇಕ ವಿಭಾಗ ಇರಲಿದೆ. ಮಕ್ಕಳು ತಮಗೆ ಇಷ್ಟ ಬಂದ ಮಾಧ್ಯಮದಲ್ಲಿ ಪ್ರವೇಶ ಪಡೆಯಬಹುದಾಗಿದೆ.

ಟಾಪ್ ನ್ಯೂಸ್

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

Mulki: ಗಾಂಜಾ ಮಾರಾಟ ಯತ್ನ; ಇಬ್ಬರ ಬಂಧನ

accident

Udupi: ಸ್ಕೂಟರಿಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2

Mulki: ಗಾಂಜಾ ಮಾರಾಟ ಯತ್ನ; ಇಬ್ಬರ ಬಂಧನ

accident

Udupi: ಸ್ಕೂಟರಿಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.