ಜನರಲ್ಲಿ ಮಾನವ ಹಕ್ಕು ಜಾಗೃತಿ ಮೂಡಿಸುವುದು ಅಗತ್ಯ: ಧನಂಜಯ

ದಮನಿತರ ಮೇಲಿನ ದೌರ್ಜನ್ಯಗಳು ಕಡಿಮೆಯಾಗಬೇಕಾದರೆ ಮಾನವ ಹಕ್ಕುಗಳ ಸದ್ಬಳಕೆ ಆಗಲಿ

Team Udayavani, Jun 17, 2019, 4:57 PM IST

17-June-38

ಚಿತ್ರದುರ್ಗ: ಕರ್ನಾಟಕ ಮಾನವ ಹಕ್ಕುಗಳ ಜನಜಾಗೃತಿ ಸಮಿತಿಯ ಪ್ರಚಾರ ಸಮಿತಿ ನೂತನ ಅಧ್ಯಕ್ಷ ಬಿ. ಧನಂಜಯ ಅವರನ್ನು ಸನ್ಮಾನಿಸಲಾಯಿತು.

ಚಿತ್ರದುರ್ಗ: ಮಹಿಳೆಯರು, ಮಕ್ಕಳು ಸೇರಿದಂತೆ ಬಹುತೇಕ ಜನರು ಮಾನವ ಹಕ್ಕುಗಳ ಉಲ್ಲಂಘನೆ ಮಾಡುತ್ತಿರುವುದು ವಿಷಾದನೀಯ ಎಂದು ಕರ್ನಾಟಕ ಮಾನವ ಹಕ್ಕುಗಳ ಜನಜಾಗೃತಿ ಸಮಿತಿಯ ಪ್ರಚಾರ ಸಮಿತಿ ನೂತನ ಅಧ್ಯಕ್ಷ ಬಿ. ಧನಂಜಯ ಹೇಳಿದರು.

ನಗರದ ಹೊರವಲಯದ ಮಠದ ಕುರುಬರಹಟ್ಟಿಯ ಬಸವೇಶ್ವರ ವಿದ್ಯಾಸಂಸ್ಥೆಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಮಾನವ ಹಕ್ಕುಗಳ ಜನಜಾಗೃತಿ ಚಿಂತನ ಮಂಥನ ಸಭೆ ಹಾಗೂ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಹಿಳೆಯರು, ಯುವಕರು, ನೊಂದವರು, ದಮನಿತರ ಧ್ವನಿಯಾಗಿರುವ ಮಾನವ ಹಕ್ಕುಗಳ ಹೋರಾಟ ಚಾಲ್ತಿಗೆ ಬರಬೇಕು. ಮಾನವ ಹಕ್ಕುಗಳ ಬಗ್ಗೆ ಅರಿವು ಮೂಡಿಸುವ ಕಾರ್ಯ ಆಗಬೇಕಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ದಮನಿತರ ಮೇಲೆ ಸಾಕಷ್ಟು ದೌರ್ಜನ್ಯಗಳು ನಡೆಯುತ್ತಲೇ ಇವೆ. ಇವು ಕಡಿಮೆಯಾಗಬೇಕಾದರೆ ಮಾನವ ಹಕ್ಕುಗಳು ಹೆಚ್ಚು ಬಳಕೆಯಾಗಬೇಕು. ಮಕ್ಕಳ ಹಕ್ಕು, ಮಹಿಳಾ ಹಕ್ಕುಗಳು ಸೀಮಿತವಾದರೆ, ಮಾನವ ಹಕ್ಕು ಎಲ್ಲರ ಧ್ವನಿಯಾಗಿದೆ. ಹೋರಾಟ ಸಮಿತಿಯ ಸದಸ್ಯರು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು ಮತ್ತು ಸಂಘಟನೆಗಳ ಜತೆ ಸಹಭಾಗಿತ್ವದಿಂದ ನಡೆಯಬೇಕು ಎಂದರು.

ಮಹಿಳಾ ಘಟಕದ ಜಿಲ್ಲಾ ಗೌರವಾಧ್ಯಕ್ಷೆ ಜಿ.ಎಸ್‌. ಶಾಂತಾ ಮಾತನಾಡಿ, ಮಹಿಳೆಯರು ಸಂಘಟಿತರಾಗಿ ಸ್ತ್ರೀಶಕ್ತಿಯನ್ನು ಬಲಪಡಿಸಬೇಕು. ಅದಕ್ಕಾಗಿ ಸಭೆ-ಸಮಾರಂಭಗಳಲ್ಲಿ ಮಾನವ ಹಕ್ಕುಗಳ ಕುರಿತು ಮಾಹಿತಿ ನೀಡಬೇಕು ಎಂದು ತಿಳಿಸಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಗೌರವ ಕಾರ್ಯದರ್ಶಿ ಮಾಲತೇಶ್‌ ಅರಸ್‌ ಮಾತನಾಡಿ, ಯುವಜನರು ಹೋರಾಟ ಮನೋಭಾವವನ್ನೇ ಕಳೆದುಕೊಂಡು ಸಂಘಟನೆಯಿಂದ ವಿಮುಖರಾಗುತ್ತಿದ್ದಾರೆ. ಮಾನವ ಹಕ್ಕುಗಳು ಮುಂದಿನ ದಿನಗಳಲ್ಲಿ ಹೆಚ್ಚು ಶಕ್ತಿಯುತವಾಗಬೇಕಿದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಬಿ. ಧನಂಜಯ ಅವರನ್ನು ಸನ್ಮಾನಿಸಲಾಯಿತು. ರೈತ ಘಟಕದ ಅಧ್ಯಕ್ಷ ನಾರಾಯಣ ಆಚಾರ್‌ ಮಾತನಾಡಿದರು. ಅಂಗವಿಕಲ ಮಕ್ಕಳ ಶಿಕ್ಷಣ ಕೇಂದ್ರದ ಎಸ್‌.ಕೆ. ಪ್ರಭಾವತಿ, ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಎಲ್.ಇ. ಶಾಂತಾ, ಜಿಲ್ಲಾ ಗೌರವಾಧ್ಯಕ್ಷ ಬಿ.ಸಿ. ಗಿರೀಶ್‌, ಎಸ್‌. ಇಂದಿರಾ, ಉಪಾಧ್ಯಕ್ಷ ಶಾಂತರಾಜ್‌, ಯುವ ಘಟಕದ ಅಧ್ಯಕ್ಷ ಶಶಿಕುಮಾರ್‌, ಯಶವಂತ್‌ ಕುಮಾರ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suilla

Punjalkatte: ಬೈಕ್‌ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

SMG-Shikaripura

Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!

Padubidri-Police

Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು

POLICE-5

Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ

5

Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.