ನೇತ್ರದಾನ ಮಾಡಲು ವಯಸ್ಸಿನ ಮಿತಿ ಇಲ್ಲ: ಡಾ| ಕೃಷ್ಣಮೂರ್ತಿ
ಕಣ್ಣಿನ ತೊಂದರೆ ಕಾಣಿಸಿಕೊಂಡಾಗ ನಾಟಿ ವೈದ್ಯರ ಬಳಿ ಚಿಕಿತ್ಸೆ ಪಡೆಯೋದು ಸರಿಯಲ್ಲ
Team Udayavani, Aug 26, 2019, 3:37 PM IST
ಚಿತ್ರದುರ್ಗ: ರಾಷ್ಟ್ರೀಯ ನೇತ್ರದಾನ ಪಾಕ್ಷಿಕವನ್ನು ಡಾ| ಆರ್. ಕೃಷ್ಣಮೂರ್ತಿ ಉದ್ಘಾಟಿಸಿದರು
ಚಿತ್ರದುರ್ಗ: ನೇತ್ರದಾನ ಮಾಡಲು ವಯಸ್ಸಿನ ಮಿತಿಯಿಲ್ಲ. ಮೃತಪಟ್ಟ 6 ಗಂಟೆಯ ಒಳಗಾಗಿ ನೇತ್ರದಾನ ಮಾಡುವ ಮೂಲಕ ಮತ್ತೂಬ್ಬರ ಬಾಳಿಗೆ ಬೆಳಕಾಗಬೇಕು ಎಂದು ಜಿಲ್ಲಾಸ್ಪತ್ರೆಯ ನೇತ್ರ ತಜ್ಞ ಡಾ| ಆರ್. ಕೃಷ್ಣಮೂರ್ತಿ ಹೇಳಿದರು.
ದೇವರಾಜ ಅರಸ್ ಶಿಕ್ಷಣ ಸಂಸ್ಥೆ, ಎಸ್‌ಎಲ್ವಿ ಪದವಿಪೂರ್ವ ಕಾಲೇಜು, ಬಸವೇಶ್ವರ ಪುನರ್‌ಜ್ಯೋತಿ ಐ ಬ್ಯಾಂಕ್, ಬಸವೇಶ್ವರ ಮೆಡಿಕಲ್ ಕಾಲೇಜು, ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರಗಳ ಸಂಯುಕ್ತಾಶ್ರಯದಲ್ಲಿ ನಗರದ ಇಂಡಿಯನ್ ಇಂಟರ್‌ನ್ಯಾಷನಲ್ ಶಾಲೆಯಲ್ಲಿ ನಡೆದ 34ನೇ ರಾಷ್ಟ್ರೀಯ ನೇತ್ರದಾನ ಪಾಕ್ಷಿಕವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಣ್ಣಿನಲ್ಲಿ ಧೂಳು ಬಿದ್ದಾಗ ನಾಟಿ ವೈದ್ಯರ ಬಳಿ ಹೋಗಿ ಚಿಕಿತ್ಸೆ ಪಡೆಯುವ ಬದಲು ನೇರವಾಗಿ ನೇತ್ರತಜ್ಞರನ್ನು ಸಂಪರ್ಕಿಸಿ ಕಣ್ಣಿನ ರಕ್ಷಣೆ ಮಾಡಿಕೊಳ್ಳಬೇಕು ಎಂದರು.
‘ಎ’ ಅನ್ನಾಂಗದ ಕೊರತೆಯಿಂದ ಮಕ್ಕಳು ಅಂಧರಾಗಬಹುದು. ಕುರುಡುತನ ಬಾರದಂತೆ ವಿಟಮಿನ್ ‘ಎ’ ದ್ರಾವಣ ನೀಡಲಾಗುವುದು. ಕ್ಯಾರೆಟ್, ಪಪ್ಪಾಯಿ, ಕಿತ್ತಳೆ, ಮೀನು ಮೊಟ್ಟೆ ಇವುಗಳಿಂದ ವಿಟಮಿನ್ ದೊರಕುತ್ತದೆ ಎಂದು ಮಾಹಿತಿ ನೀಡಿದರು.
ಡಿವೈಎಸ್ಪಿ ವಿಜಯಕುಮಾರ್ ಸಂತೋಷ್ ಮಾತನಾಡಿ, ಅನ್ನದಾನದಂತೆ ನೇತ್ರದಾನ ಕೂಡಾ ಪವಿತ್ರವಾದ ಕಾರ್ಯ. ಕನ್ನಡಿಗರ ಆರಾಧ್ಯದೈವ ಡಾ| ರಾಜ್‌ಕುಮಾರ್ ನಿಧನರಾದಾಗ ಅವರ ಕಣ್ಣುಗಳನ್ನು ದಾನ ಮಾಡಲಾಗಿತ್ತು. ಹಾಗಾಗಿ ಮರಣದ ನಂತರ ಎಲ್ಲರೂ ನೇತ್ರ ದಾನ ಮಾಡುವುದಾಗಿ ಸಂಕಲ್ಪ ಮಾಡಬೇಕು ಎಂದು ಮನವಿ ಮಾಡಿದರು.
ಪ್ರಾಧ್ಯಾಪಕ ನಾಗಭೂಷಣ ಮಾತನಾಡಿದರು. ಎಸ್‌ಎಲ್ವಿ ಪದವಿಪೂರ್ವ ಕಾಲೇಜು ಪ್ರಾಚಾರ್ಯ ಬಿ.ಎ. ಕೊಟ್ರೇಶ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಶಸ್ತ್ರಚಿಕಿತ್ಸಕ ಡಾ| ಜಯಪ್ರಕಾಶ್, ಬಸವೇಶ್ವರ ಪುನರ್ ಜ್ಯೋತಿ ಐ ಬ್ಯಾಂಕ್ ಮಾಜಿ ಅಧ್ಯಕ್ಷ ಎಂ.ಪಿ. ಗುರುರಾಜ್, ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಎಸ್. ಕುಸುಮ ಪ್ರಾರ್ಥಿಸಿದರು. ಉಪನ್ಯಾಸಕ ಹರ್ಷ ಸ್ವಾಗತಿಸಿದರು. ಬಿ.ಎಂ. ಪ್ರಜ್ವಲ್ ನಿರೂಪಿಸಿದರು. ಉಪನ್ಯಾಸಕಿ ರಾಜಲಕ್ಷ್ಮೀ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Infosys ಪ್ರಶಸ್ತಿ 2024ಕ್ಕೆ ಕರ್ನಾಟಕದವರೂ ಸೇರಿ 6 ಸಾಧಕರ ಆಯ್ಕೆ
Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
MUST WATCH
ಹೊಸ ಸೇರ್ಪಡೆ
Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ
Infosys ಪ್ರಶಸ್ತಿ 2024ಕ್ಕೆ ಕರ್ನಾಟಕದವರೂ ಸೇರಿ 6 ಸಾಧಕರ ಆಯ್ಕೆ
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.