ಸೈನಿಕರೇ ದೇಶದ ಹೀರೋಗಳು!

ಕಾರ್ಗಿಲ್ನಲ್ಲಿ ವೈರಿಗಳನ್ನು ಸೋಲಿಸಿದ ಸಂಭ್ರಮ ದಿನ•ನಿವೃತ್ತ ಯೋಧರಿಗೆ ಸನ್ಮಾನ

Team Udayavani, Jul 27, 2019, 11:36 AM IST

27-July-17

ಚಿತ್ರದುರ್ಗ: ಕಾರ್ಗಿಲ್ ಎಂಬ ಪವಿತ್ರ ಸ್ಥಳದಲ್ಲಿ ಯುದ್ಧವನ್ನು ರಣರಂಗಗೊಳಿಸಿದ ಪಾಕಿಸ್ತಾನವನ್ನು ಮಣ್ಣು ಮುಕ್ಕಿಸಿ ವಿಜಯ ಪತಾಕೆ ಹಾರಿಸಿದ, ಪವಿತ್ರ ಸ್ಥಳವನ್ನು ಅಪವಿತ್ರ ಮಾಡಲು ಹೊರಟ ಪಾತಕಿಗಳ ಹುಟ್ಟಡಗಿಸಿ ಇಂದಿಗೆ ಬರೋಬ್ಬರಿ 20 ವರ್ಷಗಳು ಸಂದಿವೆ, ಇಂತಹ ವೀರ ಸೈನಿಕರನ್ನು ಪಡೆದ ನಾವೇ ಧನ್ಯರು ಎಂದು ಯೋಗ ಗುರು ರವಿ ಕೆ. ಅಂಬೇಕರ್‌ ತಿಳಿಸಿದರು.

ನಗರದ ಸಂತೇಪೇಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜಿಲ್ಲಾ ಪತಂಜಲಿ ಯೋಗ ಸಮಿತಿ ಹಾಗೂ ವಾಸವಿ ಮಹಿಳಾ ಸಮಾಜದ ಸಂಯುಕ್ತ ಆಶ್ರಯದಲ್ಲಿ ಕಾರ್ಗಿಲ್ ವಿಜಯೋತ್ಸವ ದಿವಸದ ಅಂಗವಾಗಿ ಶುಕ್ರವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ಭಾರತದ ಮುಕುಟ ಮಣಿ ಕಾಶ್ಮೀರ ರಾಜ್ಯವನ್ನು ಶತ್ರು ರಾಷ್ಟ್ರ ಪಾಕಿಸ್ತಾನದಿಂದ ಕಾಪಾಡಿಕೊಳ್ಳಲು ಸ್ವಾತಂತ್ರ್ಯ ಬಂದಾಗಿನಿಂದಲೂ ನಾವು ಹೋರಾಟ ನಡೆಸುತ್ತಿರುವುದು ವಿಪರ್ಯಾಸದ ಸಂಗತಿ. ಆದಷ್ಟು ಬೇಗ ಕಾಶ್ಮೀರ ಸಮಸ್ಯೆ ಬಗೆ ಹರಿದು ಜನತೆ ಶಾಂತಿಯಿಂದ ಇರಬೇಕು. ಪಾಕಿಸ್ತಾನ ಸತ್ಯ ಅರ್ಥ ಮಾಡಿಕೊಳ್ಳಬೇಕು. ಕಾಶ್ಮೀರದ ಮುಗ್ಧ ಜನರಿಗೆ ಹಣದ ಆಸೆ ತೋರಿಸಿ ಭಾರತೀಯ ಸೈನಿಕರ ಮೇಲೆ ದಾಳಿ ನಡೆಸಲು ಪ್ರೇರೇಪಿಸುತ್ತಾ ಬಂದಿದೆ. ಅಲ್ಲಿನ ಉಗ್ರರನ್ನು ಮಟ್ಟ ಹಾಕಬೇಕಾಗಿದೆ. ಸಂವಿಧಾನದ 370 ಮತ್ತು 35ಎ ವಿಧಿಯಿಂದ ಕಾಶ್ಮೀರದ ಅಭಿವೃದ್ಧಿಗೆ ತೊಡಕಾಗಿದೆ. ಜನರಿಗೆ ಈಗ ಬದಲಾವಣೆ ಬೇಕಿದೆ. ರಾಜಕೀಯ ಕುಟುಂಬಗಳಿಂದ ಕಾಶ್ಮೀರಿಗಳು ಸ್ವಾತಂತ್ರ್ಯ ಬಯಸಿದ್ದಾರೆ. ಕಾಶ್ಮೀರದ ರಕ್ಷಣೆಗೆ ತೊಡಕಾಗಿರುವ 370 ನೇ ವಿಧಿಯನ್ನು ಆದಷ್ಟು ಬೇಗ ತೆಗೆದು ಹಾಕಬೇಕಾಗಿದೆ. ರೈತರು ಸಹ ದೇಶದ ಏಳ್ಗೆಗಾಗಿ ದುಡಿಯುತ್ತಾರೆ. ಅವರು ಸಹ ದೇಶದ ನಿಜವಾದ ಹೀರೋಗಳು ಎಂದರು.

ದೇಶಾದ್ಯಂತ 20ನೇ ವರ್ಷದ ಕಾರ್ಗಿಲ್ ವಿಜಯೋತ್ಸವ ಆಚರಿಸಲಾಗುತ್ತಿದೆ. ವೀರ ಸೈನಿಕರ ತ್ಯಾಗ ಮತ್ತು ಬಲಿದಾನ ನೆನಪಿಸುವುದರ ಜತೆಗೆ ಅಭಿನಂದನೆ ಸಲ್ಲಿಸುವ ಉದ್ದೇಶದಿಂದ ಹರಿದ್ವಾರದ ಪತಂಜಲಿ ಯೋಗ ಪೀಠದ ವತಿಯಿಂದ ಕಾರ್ಗಿಲ್ ವಿಜಯೋತ್ಸವ ಆಚರಿಸಲಾಗುತ್ತಿದೆ. ಕಾರ್ಗಿಲ್ ಯೋಧರನ್ನು ಗೌರವಿಸುವ ಅಥವಾ ಇನ್ಯಾವುದೇ ಸಾಮಾಜಿಕ ಉಪಯುಕ್ತ ಕಾರ್ಯಗಳಲ್ಲಿ ಭಾಗಿಯಾಗಲು ಯೋಗ ಸಾಧಕರು ಸಿದ್ಧರಿರುತ್ತಾರೆ ಎಂದು ತಿಳಿಸಿದರು.

ಯೋಗ ಶಿಕ್ಷಕಿ ಲಲಿತಾ ಬೇದ್ರೆ ಮಾತನಾಡಿ ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ತಾನದ ವಿರುದ್ಧ ಭಾರತೀಯ ಸೈನಿಕರು ವಿಜಯ ಪತಾಕೆ ಹಾರಿಸಿದ ಇಂದಿನ ದಿನ ನಮ್ಮ ಭಾರತೀಯ ಸೈನಿಕರನ್ನು ಸ್ಮರಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ ಎಂದರು.

ಶಾಲಾ ಮುಖ್ಯೋಪಾಧ್ಯಾಯಿನಿ ತಬಸುಮ್‌ ಅಧ್ಯಕ್ಷತೆ ವಹಿಸಿ ಮಾತನಾಡಿ, ಪಾಕ್‌ ಮೇಲೆ ಭಾರತೀಯ ಯೋಧರು ವಿಜಯ ಸಾಧಿಸಿದ ಸ್ಮರಣಾರ್ಥ ಕಾರ್ಗಿಲ್ ವಿಜಯ್‌ ದಿವಸ್‌ ಆಚರಣೆ ಮಾಡಲಾಗುತ್ತಿದೆ. ಇಂತಹ ಒಂದು ಪವಿತ್ರ ದಿನ ಶಾಲೆಯಲ್ಲಿ ಏರ್ಪಡಿಸಿರುವುದು ಹಮ್ಮೆಯ ವಿಷಯವಾಗಿದೆ. ಭಾರತೀಯ ಸೈನ್ಯದ ಶೌರ್ಯ, ಸೈನಿಕರ ಸಾಹಸ ಜಗತ್ತಿಗೆ ಪರಿಚಯಿಸಿದ್ದು, ಕಾರ್ಗಿಲ್ ಯುದ್ಧ, ಹೀಗಾಗಿ ಪ್ರತಿ ವರ್ಷ ಜುಲೈ 26ರಂದು ಸಂಭ್ರಮದಿಂದ ಭಾರತೀಯರು ಆಚರಿಸುತ್ತಾರೆ. ನಮ್ಮ ಭಾರತೀಯ ಸೈನಿಕರ ಬೆಂಬಲಕ್ಕೆ ನಾವೆಲ್ಲರೂ ಸದಾ ಸಿದ್ಧರಿರೋಣ ಎಂದರು.

ಸಭಾ ಕಾರ್ಯಕ್ರಮಕ್ಕೂ ಮುನ್ನ ಶಾಲಾ ಮಕ್ಕಳೊಂದಿಗೆ ನಗರದ ಸಂತೆಪೇಟೆ, ಜೈನ್‌ ಕಾಲೋನಿಗಳಲ್ಲಿ ವಿಜಯಘೋಷ ಕೂಗುತ್ತಾ ಜಾಥಾ ನಡೆಸಲಾಯಿತು. ಮಕ್ಕಳಿಗೆ ಪತಂಜಲಿ ಯೋಗ ಸಮಿತಿಯ ವತಿಯಿಂದ ಸಿಹಿ ಹಂಚಲಾಯಿತು.

ಆರ್ಯ ವೈಶ್ಯ ಮಹಿಳಾ ಸಮಾಜದ ಅಧ್ಯಕ್ಷೆ ಸುಧಾ ನಾಗರಾಜ್‌, ವಾಸವಿ ಮಹಿಳಾ ಸಮಾಜದ ಕಾರ್ಯದರ್ಶಿ ಸುಮನಾ ಸುರೇಂದ್ರ, ಸದಸ್ಯರಾದ ಸುನೀತಾ ಮಂಜುನಾಥ, ಅನಸೂಯಾ ಸಾಯಿರಾಂ, ಮಾತೃಶ್ರೀ ಸಂಸ್ಥೆಯ ಡಾ.ಸುಧಾ ಜಗದೀಶ್‌, ಶಾಲೆಯ ಸಿಬ್ಬಂದಿ ವರ್ಗ ಹಾಗೂ ನೂರಾರು ಮಕ್ಕಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

suicide

Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

suicide

Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು

puttige-4

Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

accident

Udupi: ಬೈಕ್‌ ಢಿಕ್ಕಿ; ವ್ಯಕ್ತಿಗೆ ಗಾಯ; ಪ್ರಕರಣ ದಾಖಲು

2

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದ ಮೀನುಗಾರ ನಾಪತ್ತೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

suicide

Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

puttige-4

Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1

Kasaragod Crime News: ಅವಳಿ ಪಾಸ್‌ಪೋರ್ಟ್‌; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.