ಬುಡಕಟ್ಟು ಸಮುದಾಯಗಳ ಹಕ್ಕು ರಕ್ಷಿಸಿ
•ಗಿರಿಜನರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಹೆಚ್ಚಿನ ಒತ್ತು: ನ್ಯಾ| ಟಿ. ಶಿವಣ್ಣ
Team Udayavani, Jun 29, 2019, 4:25 PM IST
ಚಿತ್ರದುರ್ಗ: ಬುಡಕಟ್ಟು ಜನರ ಹಕ್ಕು ಜಾರಿ ಮತ್ತು ಸಂರಕ್ಷಣೆ ಯೋಜನೆ ನಿಮಿತ್ತ ಹಮ್ಮಿಕೊಂಡಿದ್ದ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮವನ್ನು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಟಿ. ಶಿವಣ್ಣ ಉದ್ಘಾಟಿಸಿದರು.
ಚಿತ್ರದುರ್ಗ: ಬುಡಕಟ್ಟು ಸಮುದಾಯಗಳ ಹಕ್ಕುಗಳನ್ನು ಸಂರಕ್ಷಿಸುವ ಕಾರ್ಯವನ್ನು ಸಂಬಂಧ ಪಟ್ಟ ಎಲ್ಲರೂ ಮಾಡಬೇಕು ಎಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧಿಧೀಶರಾದ ಟಿ.ಶಿವಣ್ಣ ಹೇಳಿದರು.
ಇಲ್ಲಿನ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ , ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಚಿತ್ರದುರ್ಗ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಆಯೋಜಿಸಿದ್ದ ಬುಡಕಟ್ಟು ಜನರ ಹಕ್ಕು ಜಾರಿ ಮತ್ತು ಸಂರಕ್ಷಣೆ ಯೋಜನೆ-2015 ಕುರಿತು ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸಂವಿಧಾನದಲ್ಲಿ ಬುಡಕಟ್ಟು ಜನರಿಗೆ ವಿಶೇಷ ಸೌಲಭ್ಯಗಳ ನೀಡಲಾಗಿದೆ. ಆ ಸೌಲಭ್ಯಗಳನ್ನು ಅನುಷ್ಠಾನಕ್ಕೆ ತರುವ ಜವಾಬ್ದಾರಿ ಸಂಬಂಧಿಸಿದ ಇಲಾಖೆಗಳ ಮೇಲಿದೆ ಎಂದರು.
ಬುಡಕಟ್ಟು ಸಮುದಾಯಗಳ ಗಿರಿಜನರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಹೆಚ್ಚಿನ ಮಹತ್ವ ನೀಡಲಾಗಿದೆ. ಬುಡಕಟ್ಟು ಸಮುದಾಯ ಒಂದೊಂದು ಪ್ರದೇಶದಲ್ಲಿ ಒಂದೊಂದು ರೀತಿಯ ಹೆಸರಿಗಳಿವೆ. ಈಗ ಬುಡಕಟ್ಟು ಜರನ್ನು ಒಕ್ಕಲೆಬ್ಬಿಸುವ ಕಾರ್ಯ ನಡೆಯುತ್ತಿದೆ . ಆದ್ದರಿಂದ ಅವರಿಗೆ ಪರ್ಯಾಯ ವ್ಯವಸ್ಥೆ ಉದ್ಯೋಗ ಅವಕಾಶ, ಜೀವನಕ್ಕೆ ಅವಶ್ಯವಿರುವ ಸೌಲಭ್ಯಗಳ ಕುರಿತು ಹೆಚ್ಚಿನ ಮಹತ್ವ ನೀಡಲಾಗಿದೆ ಎಂದು ಹೇಳಿದರು.
ಉತ್ತರ ಭಾರತದಲ್ಲಿ ಹೆಚ್ಚಾಗಿ ಬುಡಕಟ್ಟು ಜನರನ್ನು ನಕ್ಸಲೇಟೆಗಳೆಂದು ಕರೆಯಲಾಗುತ್ತದೆ. ಇವರಿಗೆ ಆರ್ಥಿಕ, ಸಾಮಾಜಿಕವಾಗಿ ಸಮಾಜದಲ್ಲಿ ಮುಖ್ಯವಾಹಿನಿಗೆ ತರಲು ಸರ್ಕಾರ ಮಹತ್ವ ನೀಡಿದೆ. ಅದೇ ರೀತಿ ರಾಜಕೀಯದಲ್ಲಿ ಮುಖ್ಯವಾಹಿನಿಗೆ ತರಲು ಸರ್ಕಾರವು ಮೀಸಲಾತಿ ನೀಡಲಾಗಿದೆ. ಆದರೆ, ಇವುಗಳಲ್ಲೆ ಸರ್ಕಾರದ ಜೊತೆಗೆ ಸಮಾಜವು ಸಹ ಸಹಕಾರ ನೀಡಬೇಕು ಎಂದರು.
ಬುಡಕಟ್ಟು ಜನಾಂಗದ ವಿದ್ಯಾರ್ಥಿಗಳಾದ ಎಲ್ಲರೂ ವಿದ್ಯಾಭ್ಯಾಸವನ್ನು ಶ್ರದ್ಧೆಯಿಂದ ಮಾಡಿ ಸಮಾಜದಲ್ಲಿ ಎಲ್ಲರೊಂದಿಗೆ ಸಮಾನವಾಗಿ ಬದುಕಲು ಪ್ರಯತ್ನಿಸಬೇಕು ಎಂದು ಹೇಳಿದರು.
ಸರ್ಕಾರದ ಸಿಗುವ ಸೌಲಭ್ಯಗಳನ್ನು ಆದಷ್ಟು ಹೆಚ್ಚಾಗಿ ಉಪಯೋಗಿಸಿಕೊಂಡು ಮುಖ್ಯವಾಹಿನಿಗೆ ಬರಲು ಪ್ರಯತ್ನಿಸಬೇಕು. ಸರ್ಕಾರಕ್ಕೆ ಸಹಕಾರ ನೀಡಿದರೆ ಮಾತ್ರ ಸರ್ಕಾರ ಕೈಗೊಂಡ ಕಾರ್ಯಕ್ರಮಗಳು ಯಶಸ್ವಿಯಾಗಿ ರಾಷ್ಟ್ರ ಅಭಿವೃದ್ಧಿಯಾಗಲು ಸಾಧ್ಯವಾಗುತ್ತದೆ ಎಂದರು.
ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ಜೆ. ರಾಜು ಮಾತನಾಡಿ, ಬುಡಕಟ್ಟು ಸಮುದಾಯಗಳಿಗೆ ಸರ್ಕಾರ ನೀಡಿರುವ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಈ ಸೌಲಭ್ಯಗಳನ್ನು ಬಳಸಿಕೊಂಡು ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ಕರೆ ನೀಡಿದರು.
ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಎಂ. ಅನಿಲ್ ಕುಮಾರ್ ಮಾತನಾಡಿ, ಅವಕಾಶ ವಂಚಿತ ಬುಡಕಟ್ಟು ಸಮುದಾಯಗಳು ಕಡ್ಡಾಯವಾಗಿ ಮಕ್ಕಳಿಗೆ ಶಿಕ್ಷಣ ಕಲಿಸಿದರೆ ಮಾತ್ರ ಮುಖ್ಯವಾಹಿನಿಗೆ ಬರಲು ಸಾಧ್ಯವಿದೆ ಎಂದು ತಿಳಿಸಿದರು.
ಪ್ಯಾನಲ್ ವಕೀಲ ದಿಲ್ ಶಾದ್ ಉನ್ನೀಸಾ ಬುಡಕಟ್ಟು ಸಮುದಾಯಗಳ ಹಕ್ಕುಗಳು, ದೌರ್ಜನ್ಯ ತಡೆ ಕಾಯ್ದೆ, ಅರಣ್ಯ ಹಕ್ಕುಗಳ ಕುರಿತು ಉಪನ್ಯಾಸ ನೀಡಿದರು. ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ಟಿ. ಗುರುಮೂರ್ತಿ ಇದ್ದರು. ಪ್ರಕಾಶ್ ನಿರೂಪಿಸಿದರು. ಹನುಮಂತಪ್ಪ ಪೂಜಾರ್ ಸ್ವಾಗತಿಸಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Naxal Surrender: ಮುಂಡಗಾರು ಲತಾ ಸೇರಿ 6 ನಕ್ಸಲರು ನಾಳೆ ಶರಣಾಗತಿ?
Mangaluru: ರಾಜ್ಯದಲ್ಲೇ ಮೊದಲ ಹವಾಮಾನ ಡಾಪ್ಲರ್ ರಾಡಾರ್
Dispute: ಚಿಕ್ಕಮಗಳೂರಲ್ಲಿ ತಾರಕಕ್ಕೇರಿದ ದರ್ಗಾ ವಿವಾದ: ಬಿಗು ಪರಿಸ್ಥಿತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್
540 ಅಡಿ ಆಳದ ಬೋರ್ವೆಲ್ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.